• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೋಲಾರ: ಯುಗಾದಿ ಹಬ್ಬದಂದು ಮತದಾರರಿಗೆ ಹಂಚಲು ಅಕ್ರಮವಾಗಿ ಶೇಖರಿಸಿದ್ದ ಆಹಾರ ಸಾಮಾಗ್ರಿಗಳ ವಶ

ಪ್ರತಿಧ್ವನಿ by ಪ್ರತಿಧ್ವನಿ
March 11, 2023
in Top Story
0
ಕೋಲಾರ: ಯುಗಾದಿ ಹಬ್ಬದಂದು ಮತದಾರರಿಗೆ ಹಂಚಲು ಅಕ್ರಮವಾಗಿ ಶೇಖರಿಸಿದ್ದ ಆಹಾರ ಸಾಮಾಗ್ರಿಗಳ ವಶ
Share on WhatsAppShare on FacebookShare on Telegram

ಕೋಲಾರ: 2023ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು ಕೋಲಾರ ಜಿಲ್ಲೆಯಲ್ಲಿ ಚುನಾವಣಾ ಅಖಾಡ ರಂಗೇರಿದೆ. ಯುಗಾದಿ ಹಬ್ಬದ ನೆಪದಲ್ಲಿ ಮತದಾರರಿಗೆ ಹಂಚಲು ಅನುಮತಿ ಪಡೆಯದೆ ಅಗತ್ಯಕ್ಕಿಂತ ಹೆಚ್ಚಾಗಿ ಅಕ್ರಮವಾಗಿ ಶೇಖರಿಸಿದ್ದ ಹಬ್ಬದ ಸಾಮಗ್ರಿಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ಮಾಡಿದ್ದಾರೆ.

ADVERTISEMENT

ಕೋಲಾರ ತಾಲೂಕಿನ ಬ್ಯಾಲಹಳ್ಳಿ ಗ್ರಾಮದಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡರಿಗೆ ಸೇರಿದ ಕುರಿ ಶೆಡ್ ಗಳಲ್ಲಿ ಸಂಗ್ರಹಿಸಲಾಗಿದ್ದ ಹಬ್ಬದ ಪದಾರ್ಥಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಸುಮಾರು ಟನ್ ಗಟ್ಟಲೆ ಅಕ್ಕಿ, ಬೇಳೆ, ಬೆಲ್ಲ, ಅಡುಗೆ ಎಣ್ಣೆ ಹಾಗೂ ಮೈದಾ ಸೇರಿದಂತೆ ಆಹಾರ ಪದಾರ್ಥಗಳನ್ನು ಇಡಲಾಗಿತ್ತು. ಯುಗಾದಿ ನೆಪದಲ್ಲಿ ಮತದಾರರನ್ನು ಸೆಳೆಯಲು ಸುಮಾರು 50 ಸಾವಿರ ಜನರಿಗೆ ಹಂಚಲು ಹಬ್ಬದ ಸಾಮಗ್ರಿಗಳನ್ನು ಶೇಖರಿಸಿಡಲಾಗಿತ್ತು ಎನ್ನಲಾಗಿದೆ.

ಫುಡ್ ಕಿಟ್ ಗಳ ಮೇಲೆ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಭಾವಚಿತ್ರ:

ಇನ್ನು ಯುಗಾದಿ ಹಬ್ಬದ ಸಾಮಗ್ರಿಗಳ ಮೇಲೆ ಕೆಜಿಎಫ್ ಕ್ಷೇತ್ರದ ಶಾಸಕಿ ರೂಪಕಲಾ ಶಶಿಧರ್ ಅವರ ಭಾವಚಿತ್ರವಿದ್ದು, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಲ್ಲಿ ಹಂಚಲು ಆಹಾರ ಪದಾರ್ಥಗಳನ್ನು ಸಂಗ್ರಹಿಸಿಡಲಾಗಿದೆ. ಚುನಾವಣೆ ಸಮೀಪವಿರುವ ಕಾರಣ ಮತದಾರರನ್ನು ಓಲೈಸಲು ಹಬ್ಬದ ಸಾಮಗ್ರಿಗಳನ್ನು ಮತದಾರರಿಗೆ ನೀಡಲು ಮುಂದಾಗಿದ್ದಾರೆ. ಟನ್ ಗಟ್ಟಲೆ ಅಕ್ಕಿ, ಬೇಳೆ, ಬೆಲ್ಲ ಸಂಗ್ರಹಿಸಲಾಗಿದ್ದು, ಯುಗಾದಿ ಹಬ್ಬಕ್ಕೆ ಉಡುಗೊರೆಯಾಗಿ ಸುಮಾರು 50 ಸಾವಿರ ಜನರಿಗೆ ಕೆಜಿಎಫ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರೂಪಾ ಶಶಿಧರ್ ಮತದಾರರನ್ನು ಓಲೈಸಲು ಪುಡ್ ಕಿಟ್ ನೀಡಲು ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಲಾಗಿದೆ.

ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್:

ಖಚಿತ ಮಾಹಿತಿ ಮೇರೆಗೆ ರಾತ್ರೋ ರಾತ್ರಿ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ, ಆಹಾರ ಪದಾರ್ಥಗಳನ್ನು ಅಧಿಕಾರಿಗಳು ಮುಟ್ಟುಗೊಲು ಹಾಕಿಕೊಂಡಿದ್ದಾರೆ. ಇನ್ನು ಟನ್ ಗಟ್ಟಲೆ ಇರುವ ಆಹಾರ ಸಾಮಾಗ್ರಿಗಳನ್ನು ಯಾರೂ ತೆಗೆಯದಂತೆ ಸ್ಥಳದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ.

Tags: Kolarಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್
Previous Post

ಆರ್‌. ಧ್ರುವನಾರಾಯಣ ನಿಧನ: ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ಸಂತಾಪ

Next Post

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​.ಧ್ರುವ ನಾರಾಯಣ ರಾಜಕೀಯ ಜೀವನ ಹೇಗಿತ್ತು..?

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​.ಧ್ರುವ ನಾರಾಯಣ ರಾಜಕೀಯ ಜೀವನ ಹೇಗಿತ್ತು..?

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​.ಧ್ರುವ ನಾರಾಯಣ ರಾಜಕೀಯ ಜೀವನ ಹೇಗಿತ್ತು..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada