• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಮ್ಮ ಪ್ರಾಣ ಹೋದರೂ  ಸರಿ ಒಂದು ಇಂಚು ಭೂಮಿಯನ್ನು ಕೂಡ ಮಹಾರಾಷ್ಟ್ರಕ್ಕೆ ಬಿಟ್ಟು ಕೊಡುವುದಿಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
March 15, 2023
in ಕರ್ನಾಟಕ, ರಾಜಕೀಯ
0
ನಮ್ಮ ಪ್ರಾಣ ಹೋದರೂ  ಸರಿ ಒಂದು ಇಂಚು ಭೂಮಿಯನ್ನು ಕೂಡ ಮಹಾರಾಷ್ಟ್ರಕ್ಕೆ ಬಿಟ್ಟು ಕೊಡುವುದಿಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

ADVERTISEMENT

ಬೆಂಗಳೂರು: ಮಾ.15: ‘ಮಹಾರಾಷ್ಟ್ರ ಬಿಜೆಪಿ ಸರ್ಕಾರ ಗಡಿಭಾಗದ ಕರ್ನಾಟಕದ 865 ಗ್ರಾಮಗಳಲ್ಲಿ ಆರೋಗ್ಯ ವಿಮಾ ಯೋಜನೆ ಜಾರಿಗೆ ಮುಂದಾಗಿದ್ದು, ಆ ಮೂಲಕ ಕರ್ನಾಟಕ ರಾಜ್ಯಕ್ಕೆ ಅವಮಾನ ಮಾಡಿದೆ. ನಮ್ಮ ಪ್ರಾಣ ಹೋದರೂ ಸರಿ ನಮ್ಮ ನೆಲ, ಜಲ, ಭಾಷೆ ರಕ್ಷಣೆ ಮಾಡಿಕೊಳ್ಳುತ್ತೇವೆ. ನಾವು ಗಡಿ ಭಾಗದ ಒಂದೇ ಒಂದು ಇಂಚು ಭೂಮಿಯನ್ನು ಮಹಾರಾಷ್ಟ್ರಕ್ಕೆ ಬಿಟ್ಟು ಕೊಡುವುದಿಲ್ಲ. ಅವರ ಯೋಜನೆ ನಮ್ಮ ನೆಲದಲ್ಲಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಇದು ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ. ನಮ್ಮ ನೆಲದಲ್ಲಿ, ನಮ್ಮ ಜನರ ಆರೋಗ್ಯ ರಕ್ಷಿಸಲು ನಮಗೆ ತಾಕತ್ತು ಇಲ್ಲವೇ? ನಮ್ಮ ನೆಲದಲ್ಲಿ ಯೋಜನೆ ಜಾರಿ ಮಾಡಲು ಮಹಾರಾಷ್ಟ್ರ ಸರಕಾರಕ್ಕೆ ಅನುಮತಿ ಕೊಟ್ಟವರು ಯಾರು? ನಮಗೇಕೆ ಬೇಕು ಅವರ ಭಿಕ್ಷೆ. ನಮ್ಮ ಜನರ ಅರೋಗ್ಯ ರಕ್ಷಣೆ ಮಾಡಲು ರಾಜ್ಯ ಬಿಜೆಪಿ ಸರಕಾರದ ಬಳಿ ಹಣ ಇಲ್ಲವೇ? ಈ ಸರಕಾರವೇನಾದರೂ ದಿವಾಳಿ ಆಗಿದೆಯೇ? ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

ಬಿಜೆಪಿ ಸರ್ಕಾರ ರಾಜಕೀಯ ಕಾರಣಗಳಿಗೆ ಕನ್ನಡಿಗರ ಹಿತಾಸಕ್ತಿ ಬಲಿ ಕೊಡಲು ಮುಂದಾಗಿದೆ. ಕನ್ನಡಿಗರ ಸ್ವಾಭಿಮಾನ, ಮರ್ಯಾದೆ ಹರಾಜು ಹಾಕುತ್ತಿದೆ. ಇದರ ವಿರುದ್ಧ ಕನ್ನಡ ಪರ ಸಂಘಟನೆಗಳು, ಸಾಹಿತಿಗಳು, ಚಿತ್ರರಂಗದವರು, ಕಲಾವಿದರು, ಬುದ್ಧಿಜೀವಿಗಳು ಧ್ವನಿ ಎತ್ತಬೇಕು ಎಂದು ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

ಇಂತಹ ಅನೇಕ ಸನ್ನಿವೇಶಗಳಲ್ಲಿ ನೀವು ಧ್ವನಿ ಎತ್ತಿದ್ದರಿಂದಲೇ ಕನ್ನಡಿಗರ ಸ್ವಾಭಿಮಾನ ಉಳಿದುಕೊಂಡು ಬಂದಿದೆ. ಕನ್ನಡ ನೆಲ, ಜಲ, ಭಾಷೆ ರಕ್ಷಣೆ ಆಗಿದೆ. ಈಗಲೂ ಕೂಡ ಅಂತಹುದೆ ಹೋರಾಟಕ್ಕೆ ನಾವು-ನೀವೆಲ್ಲರೂ ಕೈ ಜೋಡಿಸೋಣ. ಕನ್ನಡ ತಾಯಿಯ ಗೌರವ ರಕ್ಷಿಸೋಣ.

ನಮ್ಮ ನೆಲದಲ್ಲಿ ಮಹಾರಾಷ್ಟ್ರ ಸರ್ಕಾರ ಯೋಜನೆ ಜಾರಿಗೆ ಮುಂದಾಗಿದ್ದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಣ್ಣುಮುಚ್ಚಿ ಕುಳಿತಿರುವುದು ಈ ಬಿಜೆಪಿ ಸರ್ಕಾರದ ದೌರ್ಬಲ್ಯಕ್ಕೆ ಸಾಕ್ಷಿ. ಮೊದಲಿಂದಲೂ ಬಿಜೆಪಿ ಸರಕಾರ ಇಂತಹ ಮರ್ಯಾದೆಗೇಡಿ ನಡೆಯನ್ನೇ ಮುಂದುವರಿಸಿಕೊಂಡು ಬಂದಿದೆ. ಕನ್ನಡಿಗರನ್ನು ಅವಮಾನಿಸುತ್ತಿದೆ.

ಬೊಮ್ಮಾಯಿ ಅವರಿಗೆ ಅಧಿಕಾರದಲ್ಲಿ ಮುಂದುವರಿಯಲು ಯೋಗ್ಯತೆಯಾಗಲಿ, ನೈತಿಕ ಹಕ್ಕಾಗಲಿ ಇಲ್ಲವಾಗಿದೆ. ಇದೊಂದು ನಾಲಾಯಕ್ ಸರ್ಕಾರ. ರಾಜ್ಯ ಹಾಗೂ ಕನ್ನಡಿಗರ ಹಿತ ಕಾಯುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿಗಳು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಈ ಸರ್ಕಾರ ವಿಸರ್ಜನೆ ಮಾಡಬೇಕು. ಇಷ್ಟೆಲ್ಲಾ ಆಗುತ್ತಿದ್ದರೂ ಕೇಂದ್ರ ಗೃಹ ಸಚಿವರು ಏನು ಮಾಡುತ್ತಿದ್ದಾರೆ? ಬೇರೆ ರಾಜ್ಯದವರು ನಮ್ಮ ರಾಜ್ಯದಲ್ಲಿ ಅವರ ಯೋಜನೆ ಜಾರಿ ಮಾಡಲು ಹೇಗೆ ಸಾಧ್ಯ? ನಮ್ಮ ಹಿಂದಿನ ಸರ್ಕಾರಗಳು ನಮ್ಮ ಜನರನ್ನು ಹಲವು ದಶಕಗಳಿಂದ ಕಾಪಾಡಿಕೊಂಡು ಬಂದಿವೆ. ಮಹಾರಾಷ್ಟ್ರದ ಈ ನಡೆಯನ್ನು ನಾವು ಖಂಡಿಸುತ್ತೇವೆ.

ನಾನು ನಾಳೆಯೇ ಬೆಳಗಾವಿಗೆ ಹೋಗಿ, ಅಲ್ಲಿನ ನಾಯಕರ ಜತೆ ಚರ್ಚೆ ಮಾಡಿ ನಮ್ಮ ನೆಲ ರಕ್ಷಣೆ ಮಾಡಿಕೊಳ್ಳಲು ಹೋರಾಟ ಮಾಡುತ್ತೇವೆ ‘ ಎಂದು ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

Tags: BJPbsbommaicmbommaiCongress PartycongressvsbjpKPCCMaharashtraMaharastrasiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿ
Previous Post

ಹಾಸನ ಜೆಡಿಎಸ್​ ಟಿಕೆಟ್​ ಹೈಡ್ರಾಮಾಗೆ ಬಿತ್ತಾ ತೆರೆ..? : ಕೆ.ಎಂ. ರಾಜೇಗೌಡರಿಗೆ ಟಿಕೆಟ್​ ಫಿಕ್ಸ್​..?

Next Post

ಹತ್ತು ದಿನದಲ್ಲಿ ಕೆರೆ ನಿರ್ಮಾಣ : ಮನುಷ್ಯ ಬದುಕ ಬೇಕಾದರೆ ಪರಿಸರ ಉಳಿಸಬೇಕು..!

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
Next Post
ಹತ್ತು ದಿನದಲ್ಲಿ ಕೆರೆ ನಿರ್ಮಾಣ : ಮನುಷ್ಯ ಬದುಕ ಬೇಕಾದರೆ ಪರಿಸರ ಉಳಿಸಬೇಕು..!

ಹತ್ತು ದಿನದಲ್ಲಿ ಕೆರೆ ನಿರ್ಮಾಣ : ಮನುಷ್ಯ ಬದುಕ ಬೇಕಾದರೆ ಪರಿಸರ ಉಳಿಸಬೇಕು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada