• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹತ್ತು ದಿನದಲ್ಲಿ ಕೆರೆ ನಿರ್ಮಾಣ : ಮನುಷ್ಯ ಬದುಕ ಬೇಕಾದರೆ ಪರಿಸರ ಉಳಿಸಬೇಕು..!

Any Mind by Any Mind
March 15, 2023
in Top Story, ಇದೀಗ, ಕರ್ನಾಟಕ
0
ಹತ್ತು ದಿನದಲ್ಲಿ ಕೆರೆ ನಿರ್ಮಾಣ : ಮನುಷ್ಯ ಬದುಕ ಬೇಕಾದರೆ ಪರಿಸರ ಉಳಿಸಬೇಕು..!
Share on WhatsAppShare on FacebookShare on Telegram

ADVERTISEMENT

ಶಿವಮೊಗ್ಗ:ಮಾ.15: ಶಿವಮೊಗ್ಗದ ಸರ್ಜಿ ಫೌಂಡೇಶನ್‌, ಉತ್ತಿಷ್ಠ ಭಾರತ ಮಲೆನಾಡು ಮತ್ತು ಸಿಹಿಮೊಗೆ ಕ್ರಿಕೆಟ್‌ ಅಕಾಡೆಮಿ ಹಾಗೂ ಪರಿಸರಾಸಕ್ತರು ಒಡಗೂಡಿ ಬಿದರೆ ಮಲ್ನಾಡ್‌ ಕ್ಯಾನ್ಸರ್‌ ಆಸ್ಪತ್ರೆ ಎದುರು ಶ್ರೀ ಸಾಯಿಬಾಬಾ ಮಂದಿರ ಬಳಿ ನೂತನ ಕೆರೆ ನಿರ್ಮಿಸಿದ್ದಾರೆ. ಬಿಸಿಲ ಬೇಗೆಗೆ ಪ್ರಾಣಿ, ಪಕ್ಷಿಗಳ ನೀರಡಿಕೆ ನೀಗಲು‌ ಹಾಗೂ ಜಲಸಂವರ್ಧನೆ ಆಶಯದಿಂದ ಈ ಪರಿಸರಾಸಕ್ತರು ನೀರಿನ‌ ಚಿಲುಮೆ ಹರಿಸಿದ್ದಾರೆ.

ಸರ್ಜಿ ಫೌಂಡೇಶನ್‌ನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ, ಶಿವಮೊಗ್ಗಕ್ಕೆ ಪರಿಸರ ಪ್ರೇಮಿಗಳು, ಪರೋಪಕಾರಂ, ಪರ್ಯಾವರಣ ಟ್ರಸ್ಟ್‌ ಕಾರ್ಯವನ್ನ ಶಿವಮೊಗ್ಗ ಜನ ಶ್ಲಾಘಿಸಿದ್ದಾರೆ. ಈ ಸಾಮಾಜಿಕ ‌ಕಾರ್ಯದ ಬಗ್ಗೆ ಮಾತನಾಡಿದ ಸರ್ಜಿ ಫೌಂಡೆಶನ್ ನ ಡಾ. ಧನಂಜಯ ಸರ್ಜಿ, ಪುಷ್ಕರಣಿ, ಕೆರೆ-ಕಟ್ಟೆಗಳ ನಿರ್ಮಾಣ ಈ ಹೊತ್ತಿಗೆ ಅವಶ್ಯ ಕಾರ್ಯ ಎಂದರು.

ಮನುಷ್ಯ ಬಾಳಬೇಕಾದರೆ ಪರಿಸರವನ್ನು ಉಳಿಸುವುದು ತುಂಬಾ ಅಗತ್ಯವಿದೆ. ನೀರಿನ ಸಂಗ್ರಹಣೆ ತುಂಬಾ ಅಗತ್ಯವಿದೆ. ಭಗವಂತನ ಸೃಷ್ಟಿ ಇದು, ಕರ್ನಾಟಕ ನೀರಿನ ಲೆವೆಲ್‌ 4 ರಿಂದ 5 ಮೀಟರ್‌ಗೆ ಬಂದಿದೆ, ಸುಮಾರು 4 ಸಾವಿರ ಬಿಲಿಯನ್‌ ಕ್ಯೂಬಿಕ್‌ ಮೀಟರ್‌ ಮಳೆಯಿಂದ ಲಭ್ಯವಾಗುತ್ತದೆ. ಈ ಪೈಕಿ ಮೂರನೇ ಒಂದು ಭಾಗದಷ್ಟು ನೀರು ವಿವಿಧ ಕೆರೆ, ಕಟ್ಟೆ, ಜಲಾಶಯ ಸೇರಿದಂತೆ ನೀರು ಸಂಗ್ರಹವಾಗುತ್ತದೆ. ಉಳಿದೆಲ್ಲಾ ನೀರು ಸಮುದ್ರದ ಪಾಲು ಆಗುತ್ತದೆ. ಭೂಮಿಯು ನೀರನ್ನು ಹೀರಿಕೊಂಡಷ್ಟು ನೀರಿನ ಸೆಲೆ ಹೆಚ್ಚಾಗುತ್ತ ಹೋಗುತ್ತದೆ. ಇಲ್ಲವಾದರೆ ಭೂಕುಸಿತ, ಭೂಕಂಪ ಸೇರಿದಂತೆ ಪ್ರಕೃತಿ ವಿಕೋಪಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗುತ್ತದೆ. ಆದ್ದರಿಂದ ನೀರಿನ ಸಂಗ್ರಹ ಮತ್ತು ನೀರನ್ನು ಉಳಿಸುವಲ್ಲಿ ಕೆರೆ ಕಟ್ಟೆಗಳು ಅಭಿವೃದ್ಧಿ ಅತಿ ಮುಖ್ಯ. ಒಟ್ಟು ನೀರಿನ ಪ್ರಮಾಣದಲ್ಲಿ ಶೇ.70 ರಷ್ಟು ಕೃಷಿಗೆ ಬಳಕೆಯಾದರೆ, ಶೇ.8 ರಿಂದ 9 ರಷ್ಟು ನೀರು ಗೃಹ ಬಳಕೆ ಇತ್ಯಾದಿಗೆ ಹೋಗುತ್ತದೆ. 2 ರಷ್ಟು ಕೈಗಾರಿಕೆಗಳಿಗೆ  ಹೋಗುತ್ತದೆ, ಇತ್ತೀಚಿನ ಎರಡು ವರ್ಷಗಳಲ್ಲಿ ಮಳೆ ಪ್ರಮಾಣ ಇಳಿಕೆ ಆಗಿತ್ತು, ಮಳೆ ಹೆಚ್ಚಾದ್ದರಿಂದ ಶೇ. 14 ರಿಂದ 15 ರಷ್ಟು ಏರಿಕೆ ಕಂಡಿದೆ. ಕೆರೆ -ಕಟ್ಟೆಗಳ ನಿರ್ಮಾಣದಂತಹ ಕೆಲಸಗಳು ನಮಗೆ ಪೂರಕವಾಗುತ್ತವೆ.  ಇಲ್ಲದಿದ್ದರೆ ಕುಡಿಯಲಿಕ್ಕೂ ನೀರು ಸಿಗದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ  ಮಳೆ ನೀರನ್ನು ಉಳಿಸಬೇಕಾದರೆ ಕೆರೆ ಕಟ್ಟೆಗಳ ಜೀರ್ಣೋದ್ಧಾರ ಅತೀ ಅವಶ್ಯ ಎಂದು ಅಭಿಪ್ರಾಯಪಟ್ಟರು.

ಶಿವಮೊಗ್ಗ ಬಿದರೆ ಗ್ರಾಮದ ಸಾಯಿಬಾಬ ಮಂದಿರದ ಎದುರು, ಒಂದು ಪುಷ್ಕರಣಿಯಂತಹ ಕೆರೆ ( ಕಲ್ಯಾಣಿ) ಮಾಡಿದ್ದೇವೆ. ಸುಮಾರು ನೂರು ಅಡಿ ಉದ್ದ, ನೂರೈವತ್ತು  ಅಡಿ ಅಗಲ ಹಾಗೂ ಹದಿನೈದು ಅಡಿ ಆಳದ ಈ ಕೆರೆ ಹತ್ತೇ ದಿನದಲ್ಲಿ ಸಿದ್ಧವಾಗಿದೆ. ಶಿವಮೊಗ್ಗ ನಗರಾಭಿವೃದ್ಧಿ ಮಂಡಳಿಯೇ ಅನುಮತಿ ನೀಡಿ ಪಾಳು ಬಿದ್ದಿದ್ದ ಜಾಗದಲ್ಲಿ ನೀರಿನ ಸೆಲೆ ಮೂಡಿದೆ. ಬಹಳ ಮುಖ್ಯವಾಗಿ ಪುಷಕರಣಿ ಯಾಕೆ ಬೇಕು, ಕೆರೆ-ಕಟ್ಟೆಗಳೇಕೆ ಇರಬೇಕು ಎಂಬುದಕ್ಕೆ ವೈಜ್ಞಾನಿಕ ಕಾರಣಗಳಿವೆ. ಮಳೆ ನೀರಿನ ಇಂಗುಗುಂಡಿಗಳಂತೆ ಈ ಜಲ‌ಮೂಲಗಳು ಕೆಲಸ ಮಾಡುತ್ತವೆ. ಬಿದ್ದ ಮಳೆ ಸಮುದ್ರ ಸೇರುವುದನ್ನ ತಡೆಯಲು ಇವು ಅವಶ್ಯ. ಈ ತರಹದ ಕೆಲಸಗಳನ್ನ ಮಾಡುವುದರಿಂದ ಮಣ್ಣು ನೀರನ್ನ ಹಿಡಿದಿಟ್ಟುಕೊಳ್ಳುವ ಮೂಲಕ ಸಾಂದ್ರತೆ ಹೆಚ್ಚುತ್ತೆ. ಭೂಮಿ ಕುಸಿತ ತಡೆಯಬಹುದು. ಸಹಜವಾಗಿ ಅಂತರ್ಜಲ ಮಟ್ಟ ಕೂಡ ಹೆಚ್ಚುತ್ತೆ. ಕೆರೆ, ಪುಷ್ಕರಣಿ ಹಿಂದಿನ ಕಾಲದಲ್ಲಿ ನಿರ್ಮಾಣ ಮಾಡುತ್ತಿದ್ದದ್ದೇ ಇಂತಹ ವೈಜ್ಞಾನಿಕ ಕಾರಣಗಳಿಂದ. ಹಾಗಾಗಿ ಬಿದ್ದ ಮಳೆ ನೀರನ್ನ ಹಿಡಿದಿಡುವುದು ಮಹತ್ಕಾರ್ಯ. ಜಲಮೂಲಗಳ ರಕ್ಷಣೆ ಪ್ರಾಣಿ-ಪಕ್ಷಿಗಳ ನೀರಡಿಕೆ ನೀಗಲೂ ಕೂಡ ಅನುವಾಗುತ್ತೆ. ಈ ವರ್ಷದ ಬೇಸಿಗೆ ತಾಪ ಹೆಚ್ಚಿದೆ. ದೇವರ ದಯೆ ಯಿಂದ ಪುಷ್ಕರಣಿ ಹತ್ತೇ ದಿನದಲ್ಲಿ ಸಿದ್ಧವಾಗಿ ನೀರು ಜಿನುಗುತ್ತಿದೆ ಎಂದು ಡಾ.‌ಸರ್ಜಿ ಹೇಳಿದರು.

Tags: Congress PartyLakeShivamoggaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಮ್ಮ ಪ್ರಾಣ ಹೋದರೂ  ಸರಿ ಒಂದು ಇಂಚು ಭೂಮಿಯನ್ನು ಕೂಡ ಮಹಾರಾಷ್ಟ್ರಕ್ಕೆ ಬಿಟ್ಟು ಕೊಡುವುದಿಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

Next Post

ಐಟಿ ದಾಳಿ ವಿಚಾರವಾಗಿ ಮೊದಲ ಪ್ರತಿಕ್ರಿಯೆ ನೀಡಿದ ಎಂಎಲ್​ಸಿ ಆರ್​.ಶಂಕರ್​

Related Posts

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್
ಕರ್ನಾಟಕ

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

by ಪ್ರತಿಧ್ವನಿ
November 19, 2025
0

ಬೆಂಗಳೂರು: ನಗರದಲ್ಲಿ ಹಾಡಹಗಲೇ ಎಟಿಎಂ ವಾಹನ ದರೋಡೆ ಪ್ರಕರಣ ಸಂಬಂಧ ಆರೋಪಿಗಳ ಸುಳಿವು ಸಿಕ್ಕಿದ್ದು, ಆರೋಪಿಗಳನ್ನು ಹಿಡಿಯುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದ್ದಾರೆ‌ ವಿಧಾನಸೌಧದಲ್ಲಿ...

Read moreDetails
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

November 19, 2025
Next Post
ಐಟಿ ದಾಳಿ ವಿಚಾರವಾಗಿ ಮೊದಲ ಪ್ರತಿಕ್ರಿಯೆ ನೀಡಿದ ಎಂಎಲ್​ಸಿ ಆರ್​.ಶಂಕರ್​

ಐಟಿ ದಾಳಿ ವಿಚಾರವಾಗಿ ಮೊದಲ ಪ್ರತಿಕ್ರಿಯೆ ನೀಡಿದ ಎಂಎಲ್​ಸಿ ಆರ್​.ಶಂಕರ್​

Please login to join discussion

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!