• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

SIddaramaiah : ಭ್ರಷ್ಟ ಬಿಜೆಪಿಯನ್ನು ಕಿತ್ತೊಗೆದು ; ರಾಜ್ಯದ ಜನರ ಉತ್ತಮ ಭವಿಷ್ಯಕ್ಕಾಗಿ ಕಾಂಗ್ರೆಸ್‌ ಅಧಿಕಾರಕ್ಕೆ ತರಬೇಕು : ಸಿದ್ದರಾಮಯ್ಯ :

ಪ್ರತಿಧ್ವನಿ by ಪ್ರತಿಧ್ವನಿ
March 20, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
SIddaramaiah : ಭ್ರಷ್ಟ ಬಿಜೆಪಿಯನ್ನು ಕಿತ್ತೊಗೆದು ; ರಾಜ್ಯದ ಜನರ ಉತ್ತಮ ಭವಿಷ್ಯಕ್ಕಾಗಿ ಕಾಂಗ್ರೆಸ್‌ ಅಧಿಕಾರಕ್ಕೆ ತರಬೇಕು : ಸಿದ್ದರಾಮಯ್ಯ :
Share on WhatsAppShare on FacebookShare on Telegram

ಬೆಳಗಾವಿ: ಮಾ.20: ಇಂದು ಇಲ್ಲಿ ಸೇರಿರುವ ಯುವ ಜನರು ಕರ್ನಾಟಕದಲ್ಲಿರುವ ಯುವ ಜನರ ವಿರೋಧಿ, ಭ್ರಷ್ಟ ಸರ್ಕಾರ ಸರ್ಕಾರವನ್ನು ಕಿತ್ತೊಗೆದು ಮುಂದಿನ 5 ವರ್ಷಗಳ ಕಾಲ ರಾಜ್ಯದ ಭವಿಷ್ಯವನ್ನು ರೂಪಿಸುವ ಸರ್ಕಾರವನ್ನು ತರುತ್ತೇವೆ ಎಂದು ಶಪಥ ಮಾಡಬೇಕು. ರಾಜೀವ್‌ ಗಾಂಧಿ ಅವರು 18 ವರ್ಷ ತುಂಬಿದ ಎಲ್ಲ ಯುವಕ, ಯುವತಿಯರಿಗೆ ಮತದಾನದ ಹಕ್ಕು ನೀಡಿದ್ದರು, ಇದರಿಂದ ದೇಶದ ಯುವ ಜನರು ರಾಜಕೀಯದಲ್ಲಿ ಭಾಗವಹಿಸಲು ಸಾಧ್ಯವಾಗಿದೆ. ಇದಕ್ಕಾಗಿ ನಾವು ಅವರನ್ನು ಈ ಸಂದರ್ಭದಲ್ಲಿ ನೆನೆಯಲೇಬೇಕು. ಜಗತ್ತಿನಲ್ಲಿ ದೊಡ್ಡ ರಾಜಕೀಯ ಬದಲಾವಣೆಯನ್ನು ತರಲು ಯುವ ಜನರಿಂದ ಮಾತ್ರ ಸಾಧ್ಯ ಎಂಬುದನ್ನು ನಾವು ಇತಿಹಾಸದಲ್ಲಿ ನೋಡಿದ್ದೇವೆ. ರಾಜೀವ್‌ ಗಾಂಧಿ ಅವರು ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದರಿಂದ ದೇಶದ ಯುವಜನರಿಗೆ ಉದ್ಯೋಗ ಸಿಗಲು ಸಾಧ್ಯವಾಯಿತು ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ADVERTISEMENT

ರಾಜ್ಯದಲ್ಲಿ ಪ್ರಹಾವ ಬಂದು ಜನ ಸತ್ತಾಗ ಮೋದಿ ಬರಲಿಲ್ಲ..? ಈಗ ಓಟಿಗಾಗಿ ರಾಜ್ಯಕ್ಕೆ ಬರ್ತಿದ್ದಾರೆ..!

ರಾಜ್ಯ ಬಿಜೆಪಿ ನಾಯಕರು ತಮ್ಮದು ಡಬ್ಬಲ್‌ ಇಂಜಿನ್‌ ಸರ್ಕಾರ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಆದ್ರೆ ಕಳೆದ 9 ವರ್ಷಗಳಿಂದ ಅಧಿಕಾರಲ್ಲಿರುವ ಕೇಂದ್ರ ಸರ್ಕಾರ ದೇಶದ ಯುವ ಜನರಿಗೆ ಏನು ಮಾಡಿದೆ.? ಇಂದು ಮೋದಿ ಅವರು ಓಟಿಗಾಗಿ ಮೇಲಿಂದ ಮೇಲೆ ರಾಜ್ಯಕ್ಕೆ ಬರುತ್ತಿದ್ದಾರೆ. ಬೆಳಗಾವಿಯಲ್ಲಿ ಪ್ರವಾಹ ಬಂದಾಗ ಬರಲಿಲ್ಲ, ಕೊರೊನಾ ಬಂದಾಗ, ಆಮ್ಲಜನಕ ಸಿಗದೆ ರಾಜ್ಯದಲ್ಲಿ ನೂರಾರು ಜನ ಸತ್ತಾಗ, ಪ್ರಧಾನಿ ಮೋದಿ ಅವರು ಕರ್ನಾಟಕಕ್ಕೆ ಬರಲಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ವಾಗ್ದಳಿ ನಡೆಸಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಸೇರಿದಂತೆ ಇಡೀ ಸರ್ಕಾರವೇ ಭ್ರಷ್ಟಚಾರದಲ್ಲಿ ಮುಳುಗಿದೆ. ಈ ಸರ್ಕಾರಕ್ಕೆ ಜನರಿಗೆ ಮುಖ ತೋರಿಸಲು ಆಗುತ್ತಿಲ್ಲ ಎಂಬ ಕಾರಣಕ್ಕೆ ಮೋದಿ ಅವರನ್ನು ಪದೇ ಪದೇ ಕರೆತಂದ್ರೆ ಚುನಾವಣೆ ಗೆಲ್ಲಬಹುದು ಎಂಬ ಲೆಕ್ಕಾಚಾರ ಹಾಕಿದ್ದಾರೆ. ಆದ್ರೆ ಮತ್ತೆ ಮತ್ತೆ ನಾಡಿನ ಜನರನ್ನು ದಡ್ಡರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು..

ಪಾಕಿಸ್ತಾನ, ಚೀನಾ, ಹಿಂದುತ್ವ ಎಂದು ಹೇಳಿ ಜನರ ಮತ ಪಡೆದು ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ಮೋದಿ ಅವರು ಸಂಪೂರ್ಣವಾಗಿ ಯುವ ಜನರನ್ನು ಮರೆತಿದ್ದಾರೆ. 2014ರಲ್ಲಿ ಈ ದೇಶದ ಯುವ ಜನರಿಗೆ ಪ್ರತೀ ವರ್ಷ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದು ಅವರು ಹೇಳಿದ್ರು. 9 ವರ್ಷದಲ್ಲಿ 18 ಕೋಟಿ ಉದ್ಯೋಗ ನೀಡಬೇಕಿತ್ತು, ಆದ್ರೆ, ಇದಕ್ಕೂ ಹೆಚ್ಚಿನ ಸಂಖ್ಯೆಯ ಉದ್ಯೋಗಗಳು ನಷ್ಟವಾಗಿದೆ. ಕೇಂದ್ರ ಸರ್ಕಾರದ ತಲೆಬುಡವಿಲ್ಲದ ಆರ್ಥಿಕ ನೀತಿಗಳಿಂದಾಗಿ ಲಕ್ಷಾಂತರ ಎಂ.ಎಸ್‌.ಎಂ.ಇಗಳು ಮುಚ್ಚಿಹೋದವು. ಇದ್ರಿಂದ ಜನರಿಗೆ ಉದ್ಯೋಗ ಸಿಗುವುದು ಕಷ್ಟವಾಗಿದೆ. ದೇಶದ 12,89,000 ಯುವ ಜನರು ಹೊರದೇಶದಲ್ಲಿ ಉದ್ಯೋಗ ಹುಡುಕಿಕೊಂಡು ಹೋಗಿದ್ದಾರೆ. ಈ ರೀತಿ ಪ್ರತಿಭಾ ಪಲಾಯನಕ್ಕೆ ನಿಮ್ಮ ಬಳಿ ಉತ್ತರವಿದೆಯಾ ಮೋದಿಜೀ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು..

ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಬಂದಾಗ ನಿರುದ್ಯೋಗ, ಭ್ರಷ್ಟಾಚಾರ, ರೈತರು ಮತ್ತು ಮಹಿಳೆಯರ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ. ಕೇವಲ ಭಾವನಾತ್ಮಕ ವಿಚಾರಗಳನ್ನು ಪ್ರಸ್ತಾಪ ಮಾಡಿ ಜನರ ದಾರಿ ತಪ್ಪಿಸಲು ಹೊರಟಿದ್ದೀರಿ. ಇದರಿಂದ ನಿಮಗೆ ಯಾವ ಪ್ರಯೋಜನವೂ ಆಗಲ್ಲ ಮೋದಿಜೀ. ಇಂದು ಹಣದ ಮೂಲಕ ಚುನಾವಣೆ ಗೆಲ್ಲಬೇಕು ಎಂದು ಬಿಜೆಪಿಯವರು ಹೊರಟಿದ್ದಾರೆ. ಇದೂ ಕೂಡ ಅವರಿಂದ ಸಾಧ್ಯವಾಗಲ್ಲ. ಕಾರಣ ಇಲ್ಲಿನ ಸರ್ಕಾರ ʼ40% ಕಮಿಷನ್‌ ಸರ್ಕಾರʼ ಎಂದು ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲಿ ಜನಜನಿತವಾಗಿದೆ. ಇಲ್ಲಿ ನಡೆಯುವ ಎಲ್ಲಾ ನೇಮಕಾತಿಗಳಲ್ಲಿ ಲಂಚ ಕೊಡಬೇಕು, ನಾವು ಅಧಿಕಾರದಲ್ಲಿದ್ದಾಗ 1 ಲಕ್ಷದ 62 ಸಾವಿರ ಸರ್ಕಾರಿ ಉದ್ಯೋಗಗಳನ್ನು ಮತ್ತು ಖಾಸಗಿ ಕ್ಷೇತ್ರದಲ್ಲಿ 11 ರಿಂದ 12 ಲಕ್ಷ ಉದ್ಯೋಗಗಳನ್ನು ಯುವಜನರಿಗೆ ನೀಡಿದ್ದೆವು. ಬಿಜೆಪಿ ಬಂದ ಮೇಲೆ ಉದ್ಯೋಗ ಸೃಷ್ಟಿನಿಂತು ಹೋಗಿದೆ. ಮತ್ತೆ ರಾಜ್ಯದಲ್ಲಿ ಉದ್ಯೋಗಸೃಷ್ಟಿ ಆಗಬೇಕಾದರೆ ಕಾಂಗ್ರೆಸ್‌ ನಿಂದ ಮಾತ್ರ ಸಾಧ್ಯ.


ಶಿಕ್ಷಣ ಕ್ಷೇತ್ರಕ್ಕೆ ಅನುದಾನ ನೀಡದೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡದೆ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದ್ದಾರೆ. ಎಸ್‌.ಎಸ್‌.ಎಲ್‌.ಸಿ ಪೂರ್ವ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನಯಾಪೈಸೆ ವಿದ್ಯಾರ್ಥಿ ವೇತನ ನೀಡಿಲ್ಲ. ಹೊಸ ಶಿಕ್ಷಣ ನೀತಿಯ ಮೂಲಕ ಅವೈಜ್ಞಾನಿಕ, ವೈಚಾರಿಕವಲ್ಲದ ಶಿಕ್ಷಣ ನೀಡುವ ಪ್ರಯತ್ನ ಮಾಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಅಪಾಯದಲ್ಲಿದೆ.

ಯುವ ಜನರೇ ದೇಶದ ಮತ್ತು ರಾಜ್ಯದ ಭವಿಷ್ಯ. ನಾಡಿದ ಆರ್ಥಿಕತೆ, ನಿಮ್ಮ ಭವಿಷ್ಯವನ್ನು ಉಳಿಸಿಕೊಳ್ಳಲು ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವ ತೀರ್ಮಾನಕ್ಕೆ ಬರಬೇಕು. ನೀವು ಮಾತ್ರ ಅಲ್ಲ, ಎಲ್ಲಾ ಯುವಜನರಲ್ಲೂ ಈ ಬಗ್ಗೆ ಜಾಗೃತಿಯನ್ನು ಮೂಡಿಸುವ ಮೂಲಕ ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತರಲು ಕಾರಣಿಕರ್ತರಾಗಬೇಕು ಎಂದು ತಮ್ಮೆಲ್ಲರಲ್ಲಿ ಕೈಮುಗಿದು ಮನವಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು..

Tags: AICCBelagavibelagavikranti samaveshaBJPbsbimmaicmbommaiCongress PartyDKShivakumarKPCCKPCC presidentMallikarjun KhargeModiPMModiPMOrahulgandhisiddaramaiahಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

₹7.20 ಲಕ್ಷ ಮೌಲ್ಯದ 14 ಬೈಕ್‌ಗಳು ವಶಪಡಿಸಿಕೊಂಡ ಬೀದರ್‌ ಪೊಲೀಸರು : Bidar police seized 14 bikes worth ₹7.20 lakh

Next Post

ಕಾಂಗ್ರೆಸ್ ಗ್ಯಾರಂಟಿ ನಂಬರ್ 4 : ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ..! : Congress guarantee number 4

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post
ಕಾಂಗ್ರೆಸ್ ಗ್ಯಾರಂಟಿ ನಂಬರ್ 4 : ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ..! : Congress guarantee number 4

ಕಾಂಗ್ರೆಸ್ ಗ್ಯಾರಂಟಿ ನಂಬರ್ 4 : ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ..! : Congress guarantee number 4

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada