• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್​ ನಾಯಕಿಗೆ ಶೂರ್ಪನಖಿ ಎಂದಿದ್ದ ಪ್ರಧಾನಿ ಮೋದಿ : ಮಾನನಷ್ಟ ಮೊಕದ್ದಮೆ ಹೂಡುತ್ತೇನೆಂದ ರೇಣುಕಾ ಚೌಧರಿ

ಪ್ರತಿಧ್ವನಿ by ಪ್ರತಿಧ್ವನಿ
March 24, 2023
in Top Story, ದೇಶ
0
ಕಾಂಗ್ರೆಸ್​ ನಾಯಕಿಗೆ ಶೂರ್ಪನಖಿ ಎಂದಿದ್ದ ಪ್ರಧಾನಿ ಮೋದಿ : ಮಾನನಷ್ಟ ಮೊಕದ್ದಮೆ ಹೂಡುತ್ತೇನೆಂದ ರೇಣುಕಾ ಚೌಧರಿ
Share on WhatsAppShare on FacebookShare on Telegram

ದೆಹಲಿ : ಮೋದಿ ಉಪನಾಮದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ 2 ವರ್ಷದ ಜೈಲು ಶಿಕ್ಷೆ ಘೋಷಣೆಯಾಗಿದೆ ಹಾಗೂ ಲೋಕಸಭಾ ಸದಸ್ಯತ್ವದಿಂದಲೂ ಅವರನ್ನು ಅನರ್ಹಗೊಳಿಸಲಾಗಿದೆ. ಇದು ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಗುರಿಯಾಗಿದ್ದು ಇವೆಲ್ಲ ಬಿಜೆಪಿ ಷಡ್ಯಂತ್ರ ಎಂದು ಆರೋಪಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಮೋದಿ ಉಪನಾಮದ ವಿರುದ್ಧ ನೀಡಿದ ಹೇಳಿಕೆಗೆ ರಾಹುಲ್​ ಗಾಂಧಿಗೆ ಇಷ್ಟು ದೊಡ್ಡ ತಲೆದಂಡ ಹೇರಿರುವ ಬೆನ್ನಲ್ಲೇ ಇದೀಗ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್​ ನಾಯಕಿ ರೇಣುಕಾ ಚೌಧರಿ ಶೂರ್ಪನಖಿ ಹೇಳಿಕೆ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

ADVERTISEMENT

2018ರಲ್ಲಿ ಸಂಸತ್ತಿನಲ್ಲಿ ಪ್ರಧಾನಿ ಮೋದಿ ರೇಣುಕಾ ಚೌಧರಿಯ ನಗುವನ್ನು ಅಣುಕಿಸುವ ಭರದಲ್ಲಿ ಅವರನ್ನು ಶೂರ್ಪನಖಿಗೆ ಹೋಲಿಕೆ ಮಾಡಿದ್ದರು. ಹೀಗಾಗಿ ಇದೇ ಹೇಳಿಕೆಯನ್ನು ಆಧಾರವಾಗಿಟ್ಟುಕೊಂಡು ನಾನು ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆಂದು ಘೋಷಣೆ ಮಾಡಿದ್ದಾರೆ. ಅಲ್ಲದೇ ಈ ಮಾನನಷ್ಟ ಪ್ರಕರಣದ ತೀರ್ಪನ್ನು ಎಷ್ಟು ವೇಗದಲ್ಲಿ ನ್ಯಾಯಾಂಗ ನೀಡುತ್ತದೆ ಎಂಬುದನ್ನು ನಾನು ನೋಡುತ್ತೇನೆ ಎಂದು ಸವಾಲು ಎಸೆದಿದ್ದಾರೆ.

This classless megalonaniac referred to me as Surpanakha on the floor of the house.

I will file a defamation case against him. Let's see how fast courts will act now.. pic.twitter.com/6T0hLdS4YW

— Renuka Chowdhury (@RenukaCCongress) March 23, 2023

ಪ್ರಧಾನಿ ಮೋದಿ ತಮ್ಮನ್ನು ಶೂರ್ಪನಖಿಗೆ ಹೋಲಿಸಿರುವ ವಿಡಿಯೋವನ್ನು ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿರುವ ರೇಣುಕಾ ಚೌಧರಿ, ಅಧಿಕಾರ, ಸಂಪತ್ತು ಹಾಗೂ ಸ್ಥಾನಮಾನದ ಗೀಳನ್ನು ಹೊಂದಿರುವ ಈ ವ್ಯಕ್ತಿಯು ನನ್ನನ್ನು ಸದನದಲ್ಲಿ ಶೂರ್ಪನಖಿ ಎಂದು ಕರೆದಿದ್ದಾರೆ. ನಾನು ಈ ಹೇಳಿಕೆಯನ್ನು ಆಧರಿಸಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತಿದ್ದೇನೆ. ಈಗ ನ್ಯಾಯಾಲಯಗಳು ಎಷ್ಟು ವೇಗದಲ್ಲಿ ಕಾರ್ಯನಿರ್ವಹಿಸುತ್ತೆ ಎಂಬುದನ್ನು ನೋಡೋಣ ಎಂದು ಸವಾಲ್​ ಎಸೆದಿದ್ದಾರೆ.

2018ರಲ್ಲಿ ಸದನದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್​ ನಾಯಕಿ ರೇಣುಕಾ ಚೌಧರಿ ಜೋರಾಗಿ ನಕ್ಕಿದ್ದರು. ಈ ವೇಳೆ ಸಭಾಪತಿಗಳನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ರಾಮಾಯಣ ಧಾರವಾಹಿ ಬಳಿಕ ಈ ನಗುವನ್ನು ಕೇಳುತ್ತಿದ್ದೇನೆ ಎಂದು ಹೇಳುವ ಮೂಲಕ ರೇಣುಕಾ ಚೌಧರಿಯನ್ನು ಶೂರ್ಪನಖಿ ಎಂದು ಕರೆದಿದ್ದರು.

Tags: Modi surname casePM ModiRahul GandhiRenuka ChaudharyShurpanakhi
Previous Post

ಬಿಜೆಪಿಗೆ ಬಿಜೆಪಿಯೇ ಎದುರಾಳಿ..! ‘ನಾವಿಕನಿಲ್ಲದ ಹಡಗು’ ಭಾಗ – 02

Next Post

ಜೆಡಿಎಸ್ ಪರ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪ್ರಚಾರ..!

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!

ಅಭಿಷೇಕ್ ಬ್ಯಾನರ್ಜಿಗೆ ಬಿಜೆಪಿ ಹೊಸ ಶಾಕ್..! 43 ಆಸ್ತಿಗಳ ಪಟ್ಟಿ ಬಿಡುಗಡೆ

May 20, 2026
Next Post
ಜೆಡಿಎಸ್ ಪರ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪ್ರಚಾರ..!

ಜೆಡಿಎಸ್ ಪರ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪ್ರಚಾರ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada