• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಏ.9ಕ್ಕೆ ಕೋಲಾರದಲ್ಲಿ ರಾಹುಲ್ ಗಾಂಧಿ ರ‍್ಯಾಲಿ ; ಮೋದಿ ಉಪನಾಮ ಹೇಳಿಕೆಯ ಸ್ಥಳದಿಂದಲೇ ಅಬ್ಬರಿಸೋಕೆ ಕಾಂಗ್ರೆಸ್ ಸಿದ್ಧತೆ

Any Mind by Any Mind
April 1, 2023
in Top Story, ಕರ್ನಾಟಕ, ರಾಜಕೀಯ
0
ಏ.9ಕ್ಕೆ ಕೋಲಾರದಲ್ಲಿ ರಾಹುಲ್ ಗಾಂಧಿ ರ‍್ಯಾಲಿ ; ಮೋದಿ ಉಪನಾಮ ಹೇಳಿಕೆಯ ಸ್ಥಳದಿಂದಲೇ ಅಬ್ಬರಿಸೋಕೆ ಕಾಂಗ್ರೆಸ್ ಸಿದ್ಧತೆ
Share on WhatsAppShare on FacebookShare on Telegram

ಬೆಂಗಳೂರು:ಏ.೦೧: 2019ರಲ್ಲಿ ಲೋಕಸಭಾ ಚುನಾವಣೆ ವೇಳೆ ಕೋಲಾರದಲ್ಲಿ ರಾಹುಲ್ ಗಾಂಧಿ ತಮ್ಮ ಭಾಷಣ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಉಪನಾಮ ಹೇಳಿಕೆಗೆ ಸಂಬಂಧಿಸಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ಜಿಲ್ಲಾ ನ್ಯಾಯಾಲಯ ಅವರನ್ನು ದೋಷಿ ಎಂದು ತೀರ್ಪು ನೀಡಿ ಶಿಕ್ಷೆ ನೀಡಿತ್ತು. ಇದೀಗ ಇದೇ ಕೋಲಾರದಲ್ಲಿ ಮತ್ತೊ ಅಬ್ಬೋರಿಸೋಕೆ ರೆಡಿಯಾಗಿದ್ದಾರೆ.

ADVERTISEMENT

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 9 ರಂದು ಕೋಲಾರದಲ್ಲಿ ‘ಜೈ ಭಾರತ್’ ಮೆಗಾ ರ‍್ಯಾಲಿ ನಡೆಸಲಿದ್ದಾರೆ. ಜನರ ಧ್ವನಿ, ನೀವು ಎಂದಿಗೂ ಮೌನಗೊಳಿಸಲು ಸಾಧ್ಯವಿಲ್ಲ. ಈ ಧ್ವನಿ ಇನ್ನಷ್ಟು ಬಲಗೊಳ್ಳಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ನಿನ್ನೆ (ಶುಕ್ರವಾರ) ಟ್ವೀಟ್ ಮಾಡಿದ್ದಾರೆ. ವಿಶೇಷ ಎಂದರೆ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡ ನಂತರ ರಾಹುಲ್ ಗಾಂಧಿ ನಡೆಸುತ್ತಿರುವ ಮೊದಲ ಚುನಾವಣಾ ರ‍್ಯಾಲಿಯು ಹಾಗೂ ಸಾರ್ವಜನಿಕ ಸಭೆ ಇದಾಗಿದೆ. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ರಾಜ್ಯ ವಿಧಾನಸಭೆ ಚುನಾವಣೆ ಮಹತ್ವದ್ದಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳನ್ನು ಜನ ತಿರಸ್ಕರಿಸಲಿದ್ದಾರೆ ಎಂದು ಜನತಾದಳ ನಾಯಕರು ಹೇಳುತ್ತಿದ್ದಾರೆ.

ಮಾರ್ಚ್ 29 ರಂದು ಚುನಾವಣಾ ಆಯೋಗ ರಾಜ್ಯ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು. 2019ರ ಮಾರ್ಚ್ 23 ರಂದು ಚುನಾವಣಾ ರ‍್ಯಾಲಿಯಲ್ಲಿ ‘ಮೋದಿ ಉಪನಾಮ’ ಹೇಳಿಕೆಗಾಗಿ 2019 ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯನ್ನು ಸೂರತ್ ಜಿಲ್ಲಾ ನ್ಯಾಯಾಲಯವು ದೋಷಿ ಎಂದು ಘೋಷಿಸಿತ್ತು. ಅಲ್ಲದೆ, ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಸೂರತ್ ಪಶ್ಚಿಮದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ದಾಖಲಿಸಿದ್ದರು. ನ್ಯಾಯಾಲಯವು ದೋಷಿ ಎಂದು ಘೋಷಿಸಿದ ನಂತರ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಗಿದೆ. ಎರಡು ವರ್ಷಗಳ ಜೈಲು ಶಿಕ್ಷೆಯನ್ನು 30 ದಿನಗಳವರೆಗೆ ಅಮಾನತುಗೊಳಿಸಲಾಗಿದ್ದು, ಅದಕ್ಕೂ ಮೊದಲು ರಾಹುಲ್ ಗಾಂಧಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಬಹುದಾಗಿದೆ.

ಗೌತಮ್ ಅದಾನಿ ವಿಷಯದ ಗಮನವನ್ನ ಬೇರೆಡೆಗೆ ಸೆಳೆಯಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಇದರ ಭಾಗವಾಗಿ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಗಿದೆ ಎಂದು ಕೈ ನಾಯಕರ ಆರೋಪವಾಗಿದೆ.

Tags: AICCBJPBJP GovernmentCongress PartyDKShivakumarElectionKarnataka GovernmentKolarKPCClatestnewsmallikarjunkhargePMModiPriyanka Gandhirahulgandhisiddaramaiahನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಶಿಕಾರಿಪುರದಲ್ಲೇ ವಿಜಯೇಂದ್ರ ಸ್ಪರ್ಧೆ.. ಹೈಕಮಾಂಡ್​ಗೆ ಯಡಿಯೂರಪ್ಪ ಗುನ್ನಾ.. ಕಾರಣ ಇಲ್ಲಿದೆ..

Next Post

ಹಾಸನದಲ್ಲಿ ಕಗ್ಗಂಟಾದ JDS ಟಿಕೆಟ್ ಹಂಚಿಕೆ ವಿಚಾರ; ಪಕ್ಷದ ವರಿಷ್ಠ HDD ಎಂಟ್ರಿ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post
ಹಾಸನದಲ್ಲಿ ಕಗ್ಗಂಟಾದ JDS ಟಿಕೆಟ್ ಹಂಚಿಕೆ ವಿಚಾರ; ಪಕ್ಷದ ವರಿಷ್ಠ HDD ಎಂಟ್ರಿ

ಹಾಸನದಲ್ಲಿ ಕಗ್ಗಂಟಾದ JDS ಟಿಕೆಟ್ ಹಂಚಿಕೆ ವಿಚಾರ; ಪಕ್ಷದ ವರಿಷ್ಠ HDD ಎಂಟ್ರಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada