ಸ್ಯಾಂಡಲ್‌ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರ ಮುಂದಿನ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಇದೆ. ಕೆಜಿಎಫ್ ಸರಣಿ ಚಿತ್ರಗಳ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ರಾಕಿಭಾಯ್, ನೆಕ್ಸ್ಟ್ ಪ್ರಾಜೆಕ್ಟ್ ಯಾವ್ದು ಅನ್ನೋ ಬಗ್ಗೆ ಇದುವರೆಗೂ ಉತ್ತರ ಸಿಕ್ಕಿಲ್ಲ.

ಇನ್ನೆರಡು ವಾರ ಕಳೆದರೆ ಯಶ್ ನಟನೆಯ ʻಕೆಜಿಎಫ್ 2ʼ ಸಿನಿಮಾ ರಿಲೀಸ್ ಆಗಿ ಒಂದು ವರ್ಷ ಪೂರೈಸುತ್ತೆ. ಈ ಚಿತ್ರ ಬಿಡುಗಡೆಯಾಗಿ ಒಂದು ವರ್ಷ ಕಳೆದರೂ ಸಹ ಯಶ್ ಮುಂದಿನ ಸಿನಿಮಾ ಯಾವುದು ಎನ್ನುವ ಬಗ್ಗೆ ಘೋಷಣೆ ಆಗಿಲ್ಲ. ಅಭಿಮಾನಿಗಳು ಕೂಡ ಕಾದು ಕಾದು ಸುಸ್ತಾಗಿ ಹೋಗಿದ್ದಾರೆ.

ಇನ್ನು ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟೀವ್ ಇರುವ ರಾಧಿಕಾ ಪಂಡಿತ್, ತಮ್ಮ ಹಾಗೂ ಫ್ಯಾಮಿಲಿ ಜೊತೆಗಿನ ಫೋಟೋಗಳನ್ನ ಶೇರ್ ಮಾಡ್ತಿರ್ತಾರೆ. ಇತ್ತೀಚೆಗಷ್ಟೇ ರಾಧಿಕಾ, ಅವರ ಬರ್ತ್‌ಡೇ ಸಂದರ್ಭದಲ್ಲಿ ತೆಗೆಸಿಕೊಂಡ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ರು. ರಾಧಿಕಾ ಶೇರ್ ಮಾಡಿರುವ ಫೋಟೋಗಳಿಗೆ ಫ್ಯಾನ್ಸ್ ಸಿಕ್ಕಾಪಟ್ಟೆ ಲೈಕ್ಸ್, ಕಮೆಂಟ್‌ಗಳನ್ನ ಮಾಡಿದ್ದಾರೆ.

ಫೋಟೋಗೆ ಕಮೆಂಟ್ ಮಾಡಿರೋ ಅನೇಕರು ಯಶ್ ಮುಂದಿನ ಸಿನಿಮಾ ಬಗ್ಗೆ ಮಾಹಿತಿ ಕೇಳಿದ್ದಾರೆ. ಕೊಡದೇ ಇದ್ರೆ ಪ್ರತಿಭಟನೆ ಮಾಡೋದಾಗಿ ಎಚ್ಚರಿಕೆಯನ್ನೂ ನೀಡಿದ್ದಾರೆ. ‘ಅತ್ತಿಗೆ.. ಯಶ್ ಮುಂದಿನ ಸಿನಿಮಾ ಬಗ್ಗೆ ಅಪ್ಡೇಟ್ ಕೊಡಿ. ಇಲ್ಲದಿದ್ದರೆ ಧರಣಿ ಕೂರ್ತ್ತೀವಿ’ ಎಂದು ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದಾನೆ. ಸದ್ಯ ಈ ಕಮೆಂಟ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗ್ತಿದೆ.







