• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಧಾನಿಗಳಿಗೆ ಒಂದು, ಶಾಸಕರಿಗೆ ಒಂದು ಎಂದು ಬೇರೆ ಬೇರೆ ಕಾನೂನು ಇಲ್ಲ; ನೀತಿ ಸಂಹಿತಿ ಎಲ್ಲರಿಗೂ ಅನ್ವಯವಾಗುತ್ತದೆ

ಪ್ರತಿಧ್ವನಿ by ಪ್ರತಿಧ್ವನಿ
April 2, 2023
in Top Story, ಇದೀಗ, ಕರ್ನಾಟಕ
0
ಪ್ರಧಾನಿಗಳಿಗೆ ಒಂದು,  ಶಾಸಕರಿಗೆ ಒಂದು ಎಂದು ಬೇರೆ ಬೇರೆ ಕಾನೂನು ಇಲ್ಲ; ನೀತಿ ಸಂಹಿತಿ ಎಲ್ಲರಿಗೂ ಅನ್ವಯವಾಗುತ್ತದೆ
Share on WhatsAppShare on FacebookShare on Telegram

ಮೈಸೂರು :ಏ.೦೨: ಚಾಮರಾಜ ಮತ್ತು ಚಾಮುಂಡೇಶ್ವರಿ ಕ್ಷೇತ್ರದ ಟಿಕೇಟ್‌ ವಿಚಾರ ನಾಡಿದ್ದು ಇತ್ಯರ್ಥವಾಗಬಹುದು. ನಾಡಿದ್ದು ಕೇಂದ್ರ ಚುನಾವಣಾ ಸಮಿತಿ ಸಭೆ ಇದೆ, ಅಂದು ಇತ್ಯರ್ಥವಾಗಬಹುದು. ಈ ಸಭೆಯ ನಂತರ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತೇವೆ. ನಾನು ಕೋಲಾರದಿಂದ ಸ್ಪರ್ಧೆ ಮಾಡುವ ವಿಚಾರವನ್ನು ಹೈಕಮಾಂಡ್‌ ತೀರ್ಮಾನ ಮಾಡಬೇಕಿದೆ, ನಾಡಿದ್ದು ನಡೆಯುವ ಸಭೆಯಲ್ಲಿ ತೀರ್ಮಾನ ಆಗಬಹುದು ಎಂದು ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿದ್ದಾರೆ.

ADVERTISEMENT

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವರುಣಾ ಕ್ಷೇತ್ರವನ್ನು ಬಿಜೆಪಿ ಪಕ್ಷ ಪ್ರಮುಖ ಕ್ಷೇತ್ರವಾಗಿ ಪರಿಗಣಿಸಿದ್ದಾರೆ. ಯಾರನ್ನು ಯಾರಿಂದಲೂ ಕಟ್ಟಿಹಾಕಲು ಆಗಲ್ಲ. ಒಬ್ಬರನ್ನು ಸೋಲಿಸುವುದು ಗೆಲ್ಲಿಸುವುದು ಜನರ ಕೈಲಿದೆ. ನಾನು ನಾಮಪತ್ರ ಸಲ್ಲಿಕೆಗೆ ಮಾತ್ರ ವರುಣಾಗೆ ಹೋಗುತ್ತೇನೆ. ಯತೀಂದ್ರ ಅವರು ಅಲ್ಲಿನ ಹಾಲಿ ಶಾಸಕರು, ಅವರು ಕೂಡ ಅಲ್ಲಿ ನನ್ನ ಪರವಾಗಿ ಕೆಲಸ ಮಾಡುತ್ತಾರೆ. ಚುನಾವಣೆಯಲ್ಲಿ ನನ್ನ ಎದುರಾಳಿ ಯಾರು ಎಂಬ ಬಗ್ಗೆ ಯೋಚನೆ ಮಾಡಲು ಹೋಗಲ್ಲ, ಯಾರು ನಮ್ಮ ಶಾಸಕರಾಗಬೇಕು ಎಂದು ತೀರ್ಮಾನ ಮಾಡುವುದು ಜನ. ಜನರ ಆಶೀರ್ವಾದ ಮುಖ್ಯವಾಗುತ್ತೆ, ಯಾರು ನಮ್ಮಲ್ಲಿ ಗೆದ್ದರೆ ಕ್ಷೇತ್ರ ಅಭಿವೃದ್ಧಿ ಮಾಡುತ್ತಾರೆ ಎಂದು ತೀರ್ಮಾನ ಮಾಡಬೇಕಾಗಿರುವುದು ಜನ. ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ.

ಸರ್ಕಾರ ತರಾತುರಿಯಲ್ಲಿ, ಅವೈಜ್ಞಾನಿಕವಾಗಿ ಮೀಸಲಾತಿ ಪರಿಷ್ಕರಣೆ ಮಾಡಿದೆ. ಅವರ ಉದ್ದೇಶ ಒಳ್ಳೆಯದಿಲ್ಲ. ಮೀಸಲಾತಿ ಕೊಡಬೇಕು ಎಂದಿದ್ದರೆ ಅದರ ಬಗ್ಗೆ ಅಧ್ಯಯನ ಮಾಡಿ ಸಂವಿಧಾನಬದ್ಧವಾಗಿ, ವೈಜ್ಞಾನಿಕವಾಗಿ ನೀಡುತ್ತಿದ್ದರು. ಒಳಮೀಸಲಾತಿ ವಿಚಾರವಾಗಿ ಸರ್ಕಾರ 4 ವರ್ಷದಿಂದ ಸುಮ್ಮನಿದ್ದು ಚುನಾವಣೆ ಬಂದಾಗ ಓಟಿಗಾಗಿ ಕೊನೆ ಘಳಿಗೆಯಲ್ಲಿ ಜಾರಿ ಮಾಡಿದ್ದಾರೆ. ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು 15 ರಿಂದ 17% ಗೆ, ಪರಿಶಿಷ್ಟ ವರ್ಗಗಳ ಮೀಸಲಾತಿಯನ್ನು 3% ಇಂದ 7% ಗೆ ಹೆಚ್ಚಿಸಿದರು, ನ್ಯಾ. ನಾಗಮೋಹನ್‌ ದಾಸ್‌ ಅವರ ಸಮಿತಿ ರಚನೆಯಾದದ್ದು ಸಮ್ಮಿಶ್ರ ಸರ್ಕಾರ ಇದ್ದಾಗ, ವರದಿ ನೀಡಿದ್ದು 2020ರಲ್ಲಿ, ಸರ್ಕಾರ ತೀರ್ಮಾನ ತೆಗೆದುಕೊಂಡಿದ್ದು 2023ರಲ್ಲಿ. ವರದಿ ಬಂದು ಮೂರು ವರ್ಷಗಳ ವರೆಗೆ ಸರ್ಕಾರ ಏನು ಮಾಡುತ್ತಿತ್ತು? ಮೀಸಲಾತಿ ಹೆಚ್ಚಳ ಮಾಡಿದ ಮೇಲೆ ಒಟ್ಟು ಮೀಸಲಾತಿ ಪ್ರಮಾಣ 56% ಆಯಿತು, ಇದರಿಂದ ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ “ಮೀಸಲಾತಿ ಪ್ರಮಾಣ 50% ಗಿಂತ ಮೀರಬಾರದು” ಎಂಬ ತೀರ್ಪಿನ ಉಲ್ಲಂಘನೆಯಾಗುತ್ತದೆ, ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಶೆಡ್ಯೂಲ್‌ ಗೆ ಸೇರಿಸುವ ಕೆಲಸವನ್ನು ಸರ್ಕಾರ ಮಾಡಿದೆಯಾ? ಹೀಗಿದ್ದಾಗ ಇದು ಊರ್ಜಿತವಾಗುತ್ತದಾ? ಹೀಗೆ ಸರ್ಕಾರ ಪರಿಶಿಷ್ಟ ಜಾತಿ, ವರ್ಗದ ಮತ್ತು ಅಲ್ಪಸಂಖ್ಯಾತ ವರ್ಗದ ಜನರಿಗೆ ಮೋಸ ಮಾಡಿದೆ.

ಕೆಟಗರಿ 2ಬಿ ಯನ್ನು ರದ್ದು ಮಾಡಿದ್ದು ಯಾಕೆ? ಇದು 1995 ಜನವರಿಯಿಂದ ಇತ್ತು, ಚಿನ್ನಪ್ಪ ರೆಡ್ಡಿ ಅವರ ಸಮಿತಿಯ ವರದಿ ಆಧರಿಸಿ ಈ ಮೀಸಲಾತಿ ನೀಡಲಾಗಿತ್ತು. ಈಗ ಮೀಸಲಾತಿಯನ್ನು ತೆಗೆದುಹಾಕಿದರೆ ಅದು ಸೇಡಿನ ರಾಜಕಾರಣವಾಗಲ್ವಾ? ನಮ್ಮ ಸರ್ಕಾರ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯನ್ನು ಯಾಕೆ ಸರ್ಕಾರ ಬಿಡುಗಡೆ ಮಾಡಿಲ್ಲ. ಈ ಸಮೀಕ್ಷೆಗಾಗಿ ನಾವು ಹಣ ಖರ್ಚು ಮಾಡಿ, ಇಂಥದ್ದೊಂದು ಸಮೀಕ್ಷೆಯ ವರದಿ ಸರ್ಕಾರದ ಬಳಿ ಇದ್ದರೆ ಮೀಸಲಾತಿ ನಿಗದಿ ಮಾಡಲು ಮತ್ತು ಕಾರ್ಯಕ್ರಮಗಳನ್ನು ರೂಪಿಸಲು ಅನುಕೂಲವಾಗುತ್ತದೆ ಎಂದು ಮಾಡಿದ್ದೆವು. ಯಾವೆಲ್ಲ ಸಮುದಾಯಗಳು ಹಿಂದುಳಿದಿವೆ ಅವುಗಳಿಗೆ ಹೆಚ್ಚಿನ ಒತ್ತು ನೀಡಿ, ಮುಖ್ಯವಾಹಿನಿಗೆ ತರಲು ಅನುಕೂಲವಾಗುತ್ತದೆ. ಈ ಸರ್ಕಾರಕ್ಕೆ ತಳ ಸಮುದಾಯಗಳ ಬಗ್ಗೆಯಾಗಲೀ, ಮೀಸಲಾತಿ ನೀಡುವ ವಿಚಾರದಲ್ಲಿಯಾಗಲೀ ಯಾವ ಆಸಕ್ತಿ ಇಲ್ಲ.

ಹಿಂದೆಯೆಲ್ಲ ಮೀಸಲಾತಿ ಜಾರಿ ಮಾಡುವಾಗ ಜೇನುಗೂಡಿಗೆ ಕೈಹಾಕಿ ಮಾಡಿದ್ದ? ಬೊಮ್ಮಾಯಿ ಅವರ ಸರ್ಕಾರ ಏನು ಹೊಸದಾಗಿ ಮೀಸಲಾತಿ ಜಾರಿ ಮಾಡಿದ್ದ? ಕೆಟಗರಿ 1, 2ಎ, 2ಬಿ, 3ಎ, 3ಬಿ ಇವುಗಳೆಲ್ಲ ಬೊಮ್ಮಾಯಿ ಅವರ ಸರ್ಕಾರದ ಕಾಲದಲ್ಲಿ ಮಾಡಿದ್ದ? ಹಿಂದೆಲ್ಲಾ ಮೀಸಲಾತಿ ನೀಡಿಲ್ವಾ?

ಪ್ರಧಾನಿಗಳು ಸರ್ಕಾರಿ ಕಾರ್ಯಕ್ರಮಕ್ಕೆ ಹೇಗೆ ಬಂಡೀಪುರಕ್ಕೆ ಬರುತ್ತಾರೆ? ಅವರು ಬರುವುದಕ್ಕೆ ನಾನೇನು ಅಡ್ಡಿಪಡಿಸುವುದಿಲ್ಲ. ಅವರಿಗೆ ಚುನಾವಣಾ ಆಯೋಗದವರು ಅನುಮತಿ ನೀಡಿದ್ದಾರ? ಅನುಮತಿ ಇಲ್ಲದೆ ಬಂದರೆ ನೀತಿ ಸಂಹಿತಿಯ ಉಲ್ಲಂಘನೆ ಮಾಡಿದಂತಾಗುತ್ತದೆ. ಪ್ರಧಾನಿಗಳಿಗೆ ಒಂದು, ಮುಖ್ಯಮಂತ್ರಿಗೆ ಒಂದು, ಮಂತ್ರಿಗಳಿಗೆ ಒಂದು, ಶಾಸಕರಿಗೆ ಒಂದು ಎಂದು ಬೇರೆ ಬೇರೆ ಕಾನೂನು ಇಲ್ಲ. ನೀತಿ ಸಂಹಿತಿ ಎಲ್ಲರಿಗೂ ಅನ್ವಯವಾಗುತ್ತದೆ. ಚುನಾವಣಾ ಆಯೋಗ ಬೇಕಾದರೆ ಅನುಮತಿ ನೀಡಬಹುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Tags: BJPbjpkarnatakaCongress PartyMysoresiddaramaiahVarunaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸುನಂದ ಟಾಕೀಸ್‌ ಬ್ಯಾನರ್‌ ಅಡಿಯಲ್ಲಿ ʼಕೆರೆ ಕಳ್ಳʼ ಚಿತ್ರದ ಪೋಸ್ಟರ್‌ ಶೀಘ್ರ ರಿಲೀಸ್‌..!

Next Post

ಸ್ಯಾಂಕಿ ಮೇಲ್ಸೇತುವೆ ವಿರೋಧಿಸಿ ಪರಿಸರ ಪ್ರೇಮಿಗಳಿಂದ ಶಾಂತಿಯುತ ಪ್ರತಿಭಟನೆ ; ದೂರು ದಾಖಲಿಸಿದ್ದನ್ನ ಖಂಡಿಸಿದ ಕಾಂಗ್ರೆಸ್‌

Related Posts

ಶಿಕ್ಷಣ ಇಲಾಖೆ ಮಾಡಿಕೊಂಡಿರುವ ಯಡವಟ್ಟು ಒಂದಾ ಎರಡಾ..?
ಕರ್ನಾಟಕ

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ:

by ಪ್ರತಿಧ್ವನಿ
April 23, 2026
0

2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಮಲ್ಲೇಶ್ವರಂನಲ್ಲಿರುವ ಶಾಲಾ ಶಿಕ್ಷಣ ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ...

Read moreDetails
ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

April 23, 2026
ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಸ್ಯಾಂಕಿ  ಮೇಲ್ಸೇತುವೆ ವಿರೋಧಿಸಿ ಪರಿಸರ ಪ್ರೇಮಿಗಳಿಂದ ಶಾಂತಿಯುತ ಪ್ರತಿಭಟನೆ ; ದೂರು ದಾಖಲಿಸಿದ್ದನ್ನ ಖಂಡಿಸಿದ ಕಾಂಗ್ರೆಸ್‌

ಸ್ಯಾಂಕಿ ಮೇಲ್ಸೇತುವೆ ವಿರೋಧಿಸಿ ಪರಿಸರ ಪ್ರೇಮಿಗಳಿಂದ ಶಾಂತಿಯುತ ಪ್ರತಿಭಟನೆ ; ದೂರು ದಾಖಲಿಸಿದ್ದನ್ನ ಖಂಡಿಸಿದ ಕಾಂಗ್ರೆಸ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada