• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

 ರೆಪೊ ಯಥಾಸ್ಥಿತಿ, ಬಡ್ಡಿದರದಲ್ಲಿ ಏರಿಳಿತ ಇಲ್ಲ : ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ 

Any Mind by Any Mind
April 6, 2023
in Top Story, ಇದೀಗ, ಕರ್ನಾಟಕ, ದೇಶ
0
 ರೆಪೊ ಯಥಾಸ್ಥಿತಿ, ಬಡ್ಡಿದರದಲ್ಲಿ ಏರಿಳಿತ ಇಲ್ಲ : ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ 
Share on WhatsAppShare on FacebookShare on Telegram

ಮುಂಬೈ :ಏ.೦6: ಹಣದುಬ್ಬರ ಮುಂದುವರಿದಿದ್ದರೂ ಕೂಡ ರಿಸರ್ವ್ ಬ್ಯಾಂಕ್ ತನ್ನ ನೀತಿಗಳ ದರದಲ್ಲಿ ಬದಲಾವಣೆಯನ್ನು ಮಾಡದೆ ಪ್ರಸಕ್ತ ಆರ್ಥಿಕ ವರ್ಷದ ತ್ರೈಮಾಸಿಕದಲ್ಲಿ ಯಥಾಸ್ಥಿತಿ ಮುಂದುವರಿಯಲು ನಿರ್ಧರಿಸಿದೆ.

ADVERTISEMENT

ಈ ಬಾರಿ ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಶೇ.6.5 ಇರಿಸಲು ದ್ವೈಮಾಸಿಕ ಹಣಕಾಸು ನೀತಿ ಸಮಿತಿ (MPC) ಶಿಫಾರಸು ಮಾಡಿದೆ ಎಂದು ರಿಸರ್ವ್‌ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದರು. ರೆಪೊ ದರಗಳಲ್ಲಿ ಯಥಾಸ್ಥಿತಿ ಕಾಪಾಡಲು ನಿರ್ಧರಿಸಿರುವದರಿಂದ ಗೃಹಸಾಲ ಸೇರಿದಂತೆ ಬ್ಯಾಂಕ್‌ನಿಂದ ಪಡೆದಿರುವ ಯಾವುದೇ ಸಾಲದ ಬಡ್ಡಿಯಲ್ಲಿ ಏರಿಕೆಯಾಗುವುದಿಲ್ಲ. ಹೀಗಾಗಿ ಸಾಲ ಪಡೆದ ಗ್ರಾಹಕರು ಬ್ಯಾಂಕುಗಳಿಗೆ ಪಾವತಿಸುವ ಮಾಸಿಕ ಸಮಾನ ಕಂತು (EMI) ಸಹ ಏರುಪೇರಾಗುವುದಿಲ್ಲ. ಇತ್ತೀಚೆಗೆ ಕೆಲ ಬ್ಯಾಂಕ್‌ಗಳು ಸ್ಥಿರ ಠೇವಣಿ ಮೇಲಿನ ಬಡ್ಡಿದ ದರಗಳನ್ನು ಹೆಚ್ಚಿಸಿದ್ದವು. ಯಥಾಸ್ಥಿತಿ ಘೋಷಣೆ ಹಿನ್ನೆಲೆಯಲ್ಲಿ ಠೇವಣಿಗಳ ಮೇಲಿನ ಬಡ್ಡಿ ಏರಿಕೆಗೂ ತಡೆ ಬೀಳಲಿದೆ.


ವಿಶ್ವರಾಜಕಾರಣ ಮತ್ತು ಆರ್ಥಿಕ ವಿಚಾರಗಳಲ್ಲಿ ನಾವು ಅನಿರೀಕ್ಷಿತ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಬಡ್ಡಿದರ ಹೆಚ್ಚಿಸದಿರುವ ನಿರ್ಧಾರವು ಈ ಸಭೆಗೆ ಮಾತ್ರ ಸೀಮಿತವಾಗಿದೆ. ದೇಶದ ಹಿತಕ್ಕೆ ಪೂರಕವಾಗಿ ಹಣಕಾಸು ನೀತಿಯನ್ನು ಹೇಗೆ ರೂಪಿಸಬೇಕು ಎಂಬ ಬಗ್ಗೆ ಗಮನ ಕೇಂದ್ರೀಕರಿಸುತ್ತಿದ್ದೇವೆ’ ಎಂದು ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿಯಲ್ಲಿ ಹೇಳಿದರು. ‘ಮುಂದಿನ ದಿನಗಳಲ್ಲಿ ಆರ್‌ಬಿಐ ಬಡ್ಡಿದರ ಹೆಚ್ಚಿಸುವ ಸಾಧ್ಯತೆಯ ಮುನ್ಸೂಚನೆ ಇದು’ ಎಂದು ಅವರ ಹೇಳಿಕೆಯನ್ನು ಆರ್ಥಶಾಸ್ತ್ರಜ್ಞರು ವಿಶ್ಲೇಷಿಸುತ್ತಿದ್ದಾರೆ.

‘ಜಾಗತಿಕ ಪರಿಸ್ಥಿತಿ ಕಳಾಹೀನವಾಗಿದ್ದರೂ ಭಾರತದ ಆರ್ಥಿಕತೆ ಪ್ರತಿರೋಧ ತೋರುತ್ತಿದೆ. ಭಾರತದ ಒಟ್ಟು ರಾಷ್ಟ್ರೀಯ ಉತ್ಪನ್ನ (GDP) ಪ್ರಗತಿ ಶೇ 7ರಲ್ಲಿಯೇ ಮುಂದುವರಿಯಲಿದೆ’ ಎಂದು ಅವರು ತಿಳಿಸಿದರು. ಮುಂದಿನ ಆರ್ಥಿಕ ವರ್ಷದ ಜಿಡಿಪಿ ಪ್ರಗತಿ ದರದ ಮುನ್ನೋಟವನ್ನು ಆರ್‌ಬಿಐ ಶೇ 6.5ರಿಂದ 6.4ಕ್ಕೆ ತಗ್ಗಿಸಿದೆ.
ಹಣದುಬ್ಬರ ಪ್ರಮಾಣ ಗಣನೀಯ ಮಟ್ಟದಲ್ಲಿ ಕಡಿಮೆಯಾಗದೆ ಅದರ ವಿರುದ್ಧ ಸಾರಿರುವ ಯುದ್ಧದಿಂದ ಹಿಂದೆ ಸರಿಯುವುದಿಲ್ಲ. ಸದ್ಯದ ಜಾಗತಿಕ ಆರ್ಥಿಕತೆಯನ್ನು ಗಮನದಲ್ಲಿರಿಸಿಕೊಂಡು ಬಡ್ಡಿದರಗಳಲ್ಲಿ ಯಥಾಸ್ಥಿತಿ ಉಳಿಸುವ ನಿರ್ಧಾರ ತೆಗೆದುಕೊಳ್ಳಲಿದೆ. ಆದರೆ ಹಣದುಬ್ಬರದ ಮೇಲಿನ ಯುದ್ಧ ಮುಂದುವರಿಯಲಿದೆ’ ಎಂದು ಅವರು ತಿಳಿಸಿದರು.

ಆರ್‌ಬಿಐ ನಿರ್ಧಾರಕ್ಕೆ ಮೊದಲೇ ಜಾಗತಿಕ ಕರೆನ್ಸಿ ಮಾರುಕಟ್ಟೆಯಲ್ಲಿ ಭಾರತದ ರೂಪಾಯಿ ಮೌಲ್ಯವು 5 ಪೈಸೆ ಕಡಿಮೆಯಾಗಿದೆ. ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 81.95ಕ್ಕೆ ಇಳಿದಿದೆ. ಕಳೆದ ಫೆಬ್ರುವರಿಯಲ್ಲಿ ನಡೆದಿದ್ದ ವಿತ್ತೀಯ ನೀತಿ ಸಭೆಯ ನಂತರ ಆರ್‌ಬಿಐ ರೆಪೊ ದರಗಳನ್ನು 25 ಮೂಲಾಂಶಗಳಷ್ಟು ಹೆಚ್ಚಿಸುವುದರೊಂದಿಗೆ ಶೇ 6.5ಕ್ಕೆ ನಿಲ್ಲಿಸಿತ್ತು. ಕಳೆದ ಮೇ 2022ರಿಂದ ಈವರೆಗೆ ಆರ್‌ಬಿಐ ರೆಪೊ ದರಗಳಗಳನ್ನು 250 ಮೂಲಾಂಶಗಳಷ್ಟು ಹೆಚ್ಚಿಸಿದ್ದು, ಸಾಲದ ಮೇಲಿನ ಬಡ್ಡಿದರಗಳು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿವೆ.

Tags: banking sector turmoilGDPIndiaMonetary Policy CommitteeMPCRBIRBI Governor Shaktikanta DasRepoReserve Bank of IndiaShaktikanta Das
Previous Post

ಭ್ರಷ್ಟಾಚಾರದ ವಿರುದ್ಧ ಹೋರಾಡಲು ನಾವು ಹನುಮಂತನಿಂದ ಸ್ಫೂರ್ತಿ ಪಡೆದಿದ್ದೇವೆ : ಪ್ರಧಾನಿ ಮೋದಿ

Next Post

ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಪ್ರತಿಭಟನೆ : ‘ತಿರಂಗಾ ಮೆರವಣಿಗೆ’ ನಡೆಸಿ ಆಕ್ರೋಶ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಪ್ರತಿಭಟನೆ : ‘ತಿರಂಗಾ ಮೆರವಣಿಗೆ’ ನಡೆಸಿ ಆಕ್ರೋಶ

ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಪ್ರತಿಭಟನೆ : 'ತಿರಂಗಾ ಮೆರವಣಿಗೆ' ನಡೆಸಿ ಆಕ್ರೋಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada