ಬಹಳ ವರ್ಷಗಳ ನಂತರ ಸ್ಯಾಂಡಲ್ವುಡ್ ನಟ ಕೋಮಲ್ ನಾಯಕನಾಗಿ ನಟಿಸಿರುವ “ಉಂಡೆನಾಮ” ಚಿತ್ರದ ಟ್ರೈಲರ್ ಇತ್ತೀಚೆಗಷ್ಟೇ ಬಿಡುಗಡೆಯಾಯ್ತು. ನವರಸ ನಾಯಕ ಜಗ್ಗೇಶ್ ಟ್ರೈಲರ್ಅನ್ನ ಬಿಡುಗಡೆ ಮಾಡಿದ್ರು.

ಕಾರ್ಯಕ್ರಮಕ್ಕೆ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಜಗ್ಗೇಶ್, ʻಟ್ರೈಲರ್ ಚೆನ್ನಾಗಿದೆ. ನನ್ನ ತಮ್ಮ ಕೋಮಲ್ , ʻಬಹಳವರ್ಷಗಳ ನಂತರ ನಟಿಸಿರುವ ಚಿತ್ರವಿದು. ಕೋಮಲ್ ಕಾಮಿಡಿ ಪಾತ್ರಗಳನ್ನು ನೋಡಿದಾಗ, ಎಷ್ಟೋ ಸಲ ನಾನು ಅಂದುಕೊಂಡಿದ್ದೀನಿ ಇವನ ಹಾಗೆ ನಾನು ಕಾಮಿಡಿ ಕಲಿಯಬೇಕು” ಅಂತ. ಅಷ್ಟು ಉತ್ತಮ ಕಲಾವಿದ ಕೋಮಲ್.

ನಿರ್ದೇಶಕರು ಲಾಕ್ ಡೌನ್ ಸನ್ನಿವೇಶವನ್ನಿಟ್ಟುಕೊಂಡು ಹಾಸ್ಯ ಚಿತ್ರ ಮಾಡಿದ್ದಾರೆ.ನಿರ್ಮಾಪಕರು ಸೇರಿದಂತೆ ಇಡೀ ತಂಡಕ್ಕೆ ಒಳ್ಳೆಯದಾಗಲಿ. ಚಿತ್ರ ಯಶಸ್ವಿಯಾಗಲಿ ಎಂದು ಜಗ್ಗೇಶ್ ಹಾರೈಸಿದರು.

ಬಳಿಕ ಮಾತ್ನಾಡಿದ ನಟ ಕೋಮಲ್, ʻಬಹಳ ದಿನಗಳ ನಂತರ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ನಿರ್ದೇಶಕ ರಾಜಶೇಖರ್ ಅವರು ಹೇಳಿದ ಕಥೆ ಇಷ್ಟವಾಯ್ತು. ನನ್ನ ಜೊತೆ ನಟಿಸಿರುವ ತಬಲನಾಣಿ, ಹರೀಶ್ ರಾಜ್ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ಏಪ್ರಿಲ್ 14 ಚಿತ್ರ ತೆರೆಗೆ ಬರಲಿದೆ. ನೋಡಿ ಹಾರೈಸಿ ಎಂದರು.