ಕೊಪ್ಪಳ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಹಜವಾಗಿಯೇ ಟಿಕೆಟ್ ವಂಚಿತರ ಬಂಡಾಯ ಜೋರಾಗಿದೆ. ಇದರ ಲಾಭ ಪಡೆಯುತ್ತಿರುವ ಗಾಲಿ ಜನಾರ್ಧನ ರೆಡ್ಡಿ ವಿವಿಧ ಪಕ್ಷಗಳ ಟಿಕೆಟ್ ವಂಚಿತರನ್ನು ತನ್ನತ್ತ ಸೆಳೆದುಕೊಳ್ಳಲು ತಂತ್ರ ರೂಪಿಸುತ್ತಿದ್ದಾರೆ.
ಗಂಗಾವತಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಹೆಚ್. ಆರ್ ಶ್ರೀನಾಥ್ ಟಿಕೆಟ್ ವಂಚಿತರಾಗಿದ್ದರು. ಈ ಹಿನ್ನೆಲೆಯಲ್ಲಿ ಶ್ರೀನಾಥ್ ಮನೆಗೆ ಭೇಟಿ ನೀಡಿದ ಜನಾರ್ಧನ ರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಇದಕ್ಕೂ ಮುನ್ನ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಹಾಗೂ ಬಸವರಾಜ ದಢೇಸಗೂರು ಕಾಂಗ್ರೆಸ್ ಟಿಕೆಟ್ ವಂಚಿತ ಹೆಚ್. ಆರ್ ಶ್ರೀನಾಥ್ ನಿವಾಸಕ್ಕೆ ಭೇಟಿ ನೀಡಿದ್ದರು. ಇದಾದ ಕೂಡಲೇ ಗಾಲಿ ಜನಾರ್ಧನ ರೆಡ್ಡಿ ಸಹ ಶ್ರೀನಾಥ್ ಮನೆಗೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.