ಬೆಳಗಾವಿ : ಬಿಜೆಪಿ ಮೊದಲ ಪಟ್ಟಿಯಲ್ಲಿ ಅಥಣಿ ಕ್ಷೇತ್ರದ ಟಿಕೆಟ್ ವಂಚಿತರಾಗಿರುವ ಲಕ್ಷ್ಮಣ ಸವದಿ ಸ್ವಪಕ್ಷೀಯರು ಫುಲ್ ಗರಂ ಆಗಿದ್ದಾರೆ. ಹೀಗಾಗಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಸುಳಿವನ್ನು ನೀಡಿದ್ದಾರೆ .
ಈ ವಿಚಾರವಾಗಿ ಅಥಣಿಯಲ್ಲಿ ಮಾತನಾಡಿದ ಅವರು, ಇಂದು ಸಂಜೆ ಕ್ಷೇತ್ರದ ಜನತೆಯೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ರು.
ಮೋದಿ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಪ್ರಧಾನಿಯಾಗಲಿ. ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಇಂದು ನನ್ನನ್ನು ನಂಬಿಕೊಂಡು ಬಂದವರಿಗೆ ಅನ್ಯಾಯ ಆಗಬಾರದು ಎಂದು ಹೇಳಿದ್ರು.