ಬೆಂಗಳೂರು : ಜಗದೀಶ್ ಶೆಟ್ಟರ್ ಬಿಜೆಪಿ ತೊರೆದರೆ ಅದರಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ ಅಂತಾ ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ ವಿರುದ್ಧ ವಾಗ್ದಾಳಿ ನಡೆಸಿದ್ರು.
ಜಗದೀಶ ಶೆಟ್ಟರ್ ಬಿಜೆಪಿ ತೊರೆದರು ಅಂದ ಮಾತ್ರಕ್ಕೆ ಲಿಂಗಾಯತ ಸಮುದಾಯ ಬಿಜೆಪಿಯನ್ನು ಬಿಡೋದಿಲ್ಲ. ಶೆಟ್ಟರ್ ಹೋದರೆ ಮತ್ತೊಮ್ಮ ಲಿಂಗಾಯತ ಲೀಡರ್ ಬಿಜೆಪಿಯಲ್ಲಿ ಹುಟ್ಟಿಕೊಳ್ತಾರೆ. ಲಿಂಗಾಯತ ಸಮುದಾಯ ಹಿಂದೆಯೂ ಬಿಜೆಪಿ ಪರವಿತ್ತು. ಮುಂದೆಯೂ ಇರಲಿದೆ ಎಂದು ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಶೆಟ್ಟರ್ ಬಿಜೆಪಿಯಿಂದ ನಿರ್ಗಮನವಾಗುತ್ತಿದ್ದಂತೆಯೇ ಬಿಜೆಪಿಗೆ ಮತ್ತಷ್ಟು ಶಕ್ತಿ ಬಂದಿದೆ. ಬಿಜೆಪಿಯಲ್ಲಿದ್ದು ಎಲ್ಲಾ ರೀತಿಯ ಅತ್ಯುನ್ನತ ಹುದ್ದೆಯನ್ನು ಅವರು ಅಲಂಕರಿಸಿದ್ದಾರೆ. ಬಿಜೆಪಿ ಅವರಿಗೆ ಸಿಎಂ ಸ್ಥಾನವನ್ನೇ ನೀಡಿದೆ. ಬಿಜೆಪಿಯಿಂದ ಎಲ್ಲಾ ಅಧಿಕಾರ ಅನುಭವಿಸಿ ಈಗ ಟಿಕೆಟ್ ಸಿಕ್ಕಿಲ್ಲ ಎಂಬ ಸಣ್ಣ ಕಾರಣಕ್ಕೆ ಬಿಜೆಪಿ ತೊರೆಯೋದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.