ಮೈಸೂರು : ವರುಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎನಿಸಿರುವ ಸಿದ್ದರಾಮಯ್ಯ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ಬಾರಿ ಒಂದೇ ಕ್ಷೇತ್ರದಿಂದ ಕಣಕ್ಕಿಳಿದಿರುವ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆಗೂ ಮುನ್ನ ಸ್ವಗ್ರಾಮ ಸಿದ್ದರಾಮನ ಹುಂಡಿಯ ಸಿದ್ದರಾಮೇಶ್ವರ ದೇವಾಲಯ ಹಾಗೂ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.


ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಕಾರ್ಯಕರ್ತರಿಂದ ಸಿದ್ದರಾಮಯ್ಯಗೆ ಅಭೂತಪೂರ್ವ ಸ್ವಾಗತ ದೊರಕಿದೆ. ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದ ಗ್ರಾಮಸ್ಥರು ಸಿದ್ದರಾಮಯ್ಯರಿಗೆ ಹೂಮಳೆಗೆರೆದಿದ್ದಾರೆ.


ಇಂದು ಮಧ್ಯಾಹ್ನ 2 ಗಂಟೆಗೆ ಸಿದ್ದರಾಮಯ್ಯ ನಂಜನಗೂಡು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.