ಗುಜರಾತ್ : ಸೂರತ್ :ಏ.20: ಪ್ರಧಾನಿ ನರೇಂದ್ರ ‘ಮೋದಿ ಉಪನಾಮ’ ಹೇಳಿಕೆ ಸಂಬಂಧದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಸೂರತ್ ನ್ಯಾಯಾಲಯ ವಜಾಗೊಳಿಸಿದೆ.

ಈ ಪ್ರಕರಣದಲ್ಲಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೋಷಿ ಎಂದು ತೀರ್ಪು ನೀಡಿದ್ದ ಸೂರತ್ ಜಿಲ್ಲಾ (ಮ್ಯಾಜಿಸ್ಟ್ರೇಟ್) ನ್ಯಾಯಾಲಯ ಎರಡು ವರ್ಷಗಳ ಕಾಲ ಶಿಕ್ಷೆ ವಿಧಿಸಿತ್ತು. ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸೂರತ್ನ ಸೆಷನ್ಸ್ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.












