ಬೆಳಗಾವಿ: ಬಿಜೆಪಿಯಲ್ಲಿ ಟಿಕೆಟ್ ಸಿಗದ್ದಕ್ಕೆ ಕೆಲವರು ಪಕ್ಷವನ್ನು ಬಿಟ್ಟಿದ್ದಾರೆ. ಆದರೆ ಪಕ್ಷದ ಹಿರಿಯ ನಾಯಕರಾಗಿ ಇಂತಹ ನಿರ್ಧಾರ ಕೈಗೊಳ್ಳುವ ಮುನ್ನ ಯೋಚನೆ ಮಾಡಬಹುದಿತ್ತು ಅಂತಾ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಬಿಜೆಪಿ ಕಾರ್ಯಕರ್ತರ ಆಧಾರಿತ ಪಕ್ಷ.ಇಲ್ಲಿ ಪಕ್ಷದ ಕಾರ್ಯಕರ್ತರೇ ನಾಯಕರು ಎಂದಿದ್ದಾರೆ.

ಕಾಂಗ್ರೆಸ್ ಬಹುತೇಕ ರಾಜ್ಯಗಳಲ್ಲಿ ಚುನಾವಣೆ ಸೋತಿದೆ. ಮುಸ್ಲಿಂ ತುಷ್ಠೀಕರಣದ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ವಿಪಕ್ಷದ ವಿರುದ್ಧ ಅರುಣ್ ಸಿಂಗ್ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಒಂದು ಮುಳುಗುತ್ತಿರುವ ಪಕ್ಷ. ಭಾರತದ ಪ್ರಜಾಪ್ರಭುತ್ವವನ್ನು ನಿಂದಿಸುವ ಕಾಂಗ್ರೆಸ್ ಪಕ್ಷವನ್ನು ಸೇರಿಕೊಳ್ಳೋದು ಅಂದರೆ ಏನರ್ಥ ಅಂತಾ ಪ್ರಶ್ನಿಸಿದ್ದಾರೆ.












