2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಪಕ್ಷದ ನಾಯಕರು, ಮುಖಂಡರು, ಆಯಾ ಪಕ್ಷಗಳ ಪ್ರಚಾರ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ.
ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಜಿ ಪರಮೇಶ್ವರ್, ಸಂಸದ ಡಿ.ಕೆ ಸುರೇಶ್ ಅವರ ಸಮ್ಮುಖದಲ್ಲಿ ಬಿಜೆಪಿ ಮುಖಂಡರಾದ ಕೊರಟಗೆರೆ ಮಾಜಿ ಶಾಸಕ ಗಂಗ ಹನುಮಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕಮಲಾ ಗಂಗ ಹನುಮಯ್ಯ ಬೆಂಗಳೂರಿನ ಮಾಜಿ ಮೇಯರ್ ಶಾಂತಕುಮಾರಿ, ಪಾಲಿಕೆ ಮಾಜಿ ಸದಸ್ಯ ಬಿ ಆರ್ ನಂಜುಂಡಯ್ಯ ಅವರು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ರಾಜ್ಯಸಭೆ ಸದಸ್ಯ ಡಾ.ಎಲ್ ಹನುಮಂತಯ್ಯ, ಮೇಲ್ಮನೆ ಸದಸ್ಯ ದಿನೇಶ್ ಗೂಳಿಗೌಡ, ಮಾಜಿ ಸದಸ್ಯ ಐವಾನ್ ಡಿಸೋಜ, ಆರ್ ಆರ್ ನಗರ ಅಭ್ಯರ್ಥಿ ಕುಸುಮ ಎಚ್, ಮನೋಹರ್ ಮತ್ತಿತರರು ಉಪಸ್ಥಿತರಿದ್ದರು.