ಇನ್ನೇನು ಕೆಲವೇ ದಿನಗಳಲ್ಲಿ 2023ರ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಮಧ್ಯೆ ಪಕ್ಷದ ನಾಯಕರ ಮಧ್ಯೆ ಜಟಾಪಟಿ ಶುರುವಾಗಿದೆ. ಇಂದು ಬೆಂಗಳೂರಿನ ಯಲಹಂಕದಲ್ಲಿ ರೋಡ್ ಶೋ ಮತ್ತು ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ʻಸಿದ್ದರಾಮಯ್ಯ ಬೆಂಗಳೂರಿನಲ್ಲಿ 8 ಸಾವಿರ ಕೋಟಿ ರೂಪಾಯಿ ಅಕ್ರಮ ಮಾಡಿದ್ದಾರೆ, ಇಂಧನ, ಬಿಡಿಎ ಹಾಗೂ ನೀರಾವರಿಯಲ್ಲಿ ಅಕ್ರಮ ಮಾಡಿ ಇಡೀ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ರು. ಸಿದ್ದರಾಮಯ್ಯನವರ ಆಡಳಿತದಲ್ಲಿ ಟೀಚರ್ ನೇಮಕಾತಿ, ಪ್ರಶ್ನೆಪತ್ರಿಕೆ ಸೋರಿಕೆ, ರೀಡೂ ಮುಂತಾದಂತಹ ಸ್ಕ್ಯಾಮ್ ನಡೆದಿದೆ. 843 ಎಕರೆ ಭೂಮಿಯನ್ನು ಅಕ್ರಮವಾಗಿ ಸಾಹುಕಾರರಿಗೆ ಬಿಟ್ಟುಕೊಟ್ಟು 8 ಸಾವಿರ ಕೋಟಿ ರೂ. ಸ್ಕ್ಯಾಮ್ ಯಾರಾದರೂ ಮಾಡಿದ್ದರೆ ಅದು ಸಿದ್ದರಾಮಯ್ಯನವರ ಸರ್ಕಾರ ಎಂಬುದನ್ನು ಸ್ಪಷ್ಟವಾಗಿ ಹೇಳುತ್ತೇನೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ರು.
