2023ರ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇರುವ ಬೆನ್ನಲ್ಲೇ, ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರಿನ ಯಲಹಂಕದಲ್ಲಿರುವ ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಅವರ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಲಾಗಿದೆ. ಅಕ್ರಮ ಆಸ್ತಿ ಗಳಿಕೆಯ ಆರೋಪದ ಮೇಲೆ ಎಸ್‌ಪಿ ಅಶೋಕ್ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿ ಗಂಗಾಧರಯ್ಯ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಒಬ್ಬರು ಎಸ್‌ಪಿ, ಇಬ್ಬರು ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್ ಸೇರಿದಂತೆ 15 ಜನ ಲೋಕಾಯುಕ್ತ ಅಧಿಕಾರಿಗಳ ತಂಡ ಮುಂಜಾನೆ 5 ಗಂಟೆಗೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ. ಗಂಗಾಧರಯ್ಯ ಅವರು ಬಿಬಿಎಂಪಿ ಟೌನ್ ಪ್ಲಾನಿಂಗ್‌ನಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಗಂಗಾಧರಯ್ಯ ನಿವಾಸ, ಮನೆಯ ಆವರಣ, ಕಾರು ಸೇರಿದಂತೆ ಎಲ್ಲೆಡೆ ಪರಿಶೀಲನೆ ನಡೆಸಿದ್ದಾರೆ.