ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೋರಿಕೆಗಾಗಿ ಲಿಂಗಾಯತ ಮಠಕ್ಕೆ ಹೋಗುತ್ತಿರುವುದಕ್ಕೆ ಧನ್ಯವಾದಗಳು ಅಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ʻರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಸೃತಿ ಇರಾನಿ, ಸೇರಿದಂತೆ ಹಲವು ನಾಯಕರು ತಾರಾ ಪ್ರಚಾರಕರಾಗಿ ಆಗಮಿಸುತ್ತಿದ್ದಾರೆʼ ಎಂದರು.
ʻಸಿಎಂ ಆಗಬೇಕು ಎಂದು ನಾನು ಅಂದುಕೊಂಡಿರಲಿಲ್ಲ. ಹಿಂದೆಯೂ ಹೈಕಮಾಂಡ್ ತೀರ್ಮಾನ ಮಾಡಿದ್ದು, ಈಗಲೂ ಕೂಡ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು. ಭಾವನೆಗಳ ಜೊತೆ ಬಿಜೆಪಿ ಆಟವಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ʻಲಿಂಗಾಯತ ವಿವಾದಗಳನ್ನು ತೆಗೆದಿದ್ದೇ ಅವರು. ಡಿಕೆಶಿ ಹೇಳುವುದು ಒಂದು ಮಾಡೋದು ಒಂದು . ದೇವರು ಯಾರಿಗೆ ಆಶೀರ್ವಾದ ಮಾಡ್ತಾರೆ ಎಂದು ಕಾದು ನೋಡೋಣ ಅಂತ ಹೇಳಿದರು.
ʻಕಾಂಗ್ರೆಸ್ ಮಿತ್ರರಿಗೆ ನಾನು ಧನ್ಯವಾದ ಹೇಳಲು ಇಷ್ಟ ಪಡುತ್ತೇನೆ. ಸವದಿ, ಶೆಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿಗೆ ಪ್ಲಸ್ ಆಗುತ್ತದೆ. ಅವರ ಕ್ಷೇತ್ರದಲ್ಲಿ ಅವರ ವಿರುದ್ದ ಜನರು ಮಾತನಾಡುತ್ತಿದ್ದಾರೆ. ಎಲ್ಲಾ ಪದವಿ ಪಡೆದು ನಂತರ ಕಾಂಗ್ರೆಸ್ ಹೋಗಿದ್ದು ಜನರು ಅವರನ್ನು ಒಪ್ಪುವುದಿಲ್ಲ ಅಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಇನ್ನು ಸಿದ್ದರಾಮಯ್ಯನವರ ಲಿಂಗಾಯತ ಹೇಳಿಕೆ ತಿರುಚಿದ್ದಾರೆ ಎಂಬ ವಿಚಾರದ ಬಗ್ಗೆ ಮಾತ್ನಾಡಿದ ಅವರು, ʻಮೀಡಿಯಾದಲ್ಲೇ ಸ್ಪಷ್ಟವಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಈಗ ಅವರ ಹೇಳಿಕೆಯನ್ನು ತಿರುಚಿ ಹೇಳುತ್ತಿದ್ದಾರೆ. ಜನರು ಏನು ದಡ್ಡರಲ್ಲ ಎಲ್ಲವನ್ನು ಗಮನಿಸಿದ್ದಾರೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ರು.