ಬೆಂಗಳೂರು : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಡಿ.ಬಿ ಇನಾಮದಾರ್ ವಿಧಿವಶರಾಗಿದ್ದಾರೆ. ಬೆಳಗಾವಿ ಭಾಗದಲ್ಲಿ ಮುತ್ಸದ್ಧಿ ರಾಜಕಾರಣಿ ಎನಿಸಿಕೊಂಡಿದ್ದ ಇನಾಮದಾರ್ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

75 ವರ್ಷ ಪ್ರಾಯದ ಇನಾಮದಾರ್ರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ .
ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗಲೇ ಮತ್ತೊಬ್ಬ ಪ್ರಭಾವಿ ನಾಯಕನನ್ನು ಕಾಂಗ್ರೆಸ್ ಕಳೆದುಕೊಂಡಂತಾಗಿದೆ.