ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದ್ದು, ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಪಕ್ಷದ ನಾಯಕರು ರಾಜ್ಯದ ಮೂಲೆ ಮೂಲೆಗಳಿಗೂ ತೆರಳಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಹೀಗಿರುವಾಗಲೇ ʻಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (CT ravi) ಮುಂದಿನ ಸಿಎಂ ಆಗಲಿ ಅಂತ ಬಿಜೆಪಿ(bjp) ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ(K S Eshwarappa) ನುಡಿದಿದ್ದಾರೆ.
ಚಿಕ್ಕಮಗಳೂರಿನ ನಿಡಘಟ್ಟದಲ್ಲಿ ಬಿಜೆಪಿ(bjp) ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ʻಸಿ.ಟಿ.ರವಿ( C T ravi) ಮುಂದಿನ ಮುಖ್ಯಮಂತ್ರಿ ಆಗಲಿ ಅಂತ ಬಹಿರಂಗ ಸಭೆಯಲ್ಲಿಯೇ ಹೇಳಿದರು. ಚಿಕ್ಕಮಗಳೂರಿನಿಂದ ಸಿಟಿ ರವಿ ಅವರಿಗೆ ಮತ ನೀಡಿ ಅವರನ್ನು ಗೆಲ್ಲಿಸಿ. ಅವರು ಮುಂದಿನ ಸಿಎಂ ಆಗಬೇಕು ಎಂದು ಹೇಳಿದ್ರು. ಇನ್ನು ಮೊನ್ನೆಯಷ್ಟೇ ಮೈಸೂರಿನಲ್ಲಿ ಮಾತನಾಡಿದ್ದ ಸಿ.ಟಿ. ರವಿ, ಮುಖ್ಯಮಂತ್ರಿ ಆಗುವ ಇಂಗಿತ ವ್ಯಕ್ತಪಡಿಸಿದ್ದರು. ಇದೀಗ ಬಿಜೆಪಿ ಅಧಿಕಾರಕ್ಕೆ ಬಂದರೆ ಲಿಂಗಾಯತ ಸಮುದಾಯದವರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂಬ ಒತ್ತಾಯಗಳ ನಡುವೆ ಇದೀಗ ಈಶ್ವರಪ್ಪ ನೀಡಿರುವ ಹೇಳಿಕೆ ಕುತೂಹಲ ಮೂಡಿಸಿದೆ.