ಇನ್ನೇನು ಕೆಲವೇ ದಿನಗಳಲ್ಲಿ 2023ರ ಕರ್ನಾಟಕ ವಿಧಾನಸಭಾ ಚುನಾವಣೆ(karnataka assembly election) ನಡೆಯಲಿದೆ. ಮೇ 10ರಂದು ನಡೆಯಲಿರುವ ಚುನಾವಣೆ(election) ರಾಜ್ಯದ ಜನತೆ ಕಾತುರದಿಂದ ಕಾಯ್ತಿದ್ದಾರೆ. ಈಗಾಗಲೇ ರಾಜಕೀಯ ನಾಯಕರು ಅಖಾಡಕ್ಕಿಳಿದು ಅಬ್ಬರದ ಪ್ರಚಾರ ಮಾಡ್ತಿದ್ದಾರೆ. ಈ ಮಧ್ಯೆ ಪಕ್ಷಾಂತರೂ ಸಹ ರಾಜ್ಯದಲ್ಲಿ ನಡೀತಿದೆ. ನಾಳೆ ಸ್ಯಾಂಡಲ್ವುಡ್ ನಟ ಶಿವರಾಜ್ಕುಮಾರ್(shivarajkumar) ಅವರ ಪತ್ನಿ ಗೀತಾ ಶಿವರಾಜ್ಕುಮಾರ್ ಕಾಂಗ್ರೆಸ್(congress) ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಕೆಪಿಸಿಸಿ(KPCC) ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ ಶಿವಕುಮಾರ್(DK shivarajkumar) ಸಮ್ಮುಖದಲ್ಲಿ ಸೇರ್ಪಡೆ ಆಗಲಿದ್ದಾರೆ. ಗೀತಾ ಶಿವರಾಜ್ಕುಮಾರ್ ಮಾಜಿ ಸಿಎಂ ದಿ. ಎಸ್.ಬಂಗಾರಪ್ಪನವರ ಪುತ್ರಿ. ಈ ಹಿಂದೆ ಜೆಡಿಎಸ್ನಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಇದೀಗ ಸೊರಬದಲ್ಲಿ ಮಧು ಬಂಗಾರಪ್ಪ ಪರ ಕಾಂಗ್ರೆಸ್ ಪಕ್ಷದ ಪರವಾಗಿ ಗೀತಾ ಶಿವರಾಜ್ಕುಮಾರ್ ಪ್ರಚಾರ ನಡೆಸಿದ್ದರು. ಇದೀಗ ನಾಳೆ ಗೀತಾ ಶಿವರಾಜ್ಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಗೀತಾ ಶಿವಾರಾಜ್ಕುಮಾರ್ ನಾಳೆ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ ಅಂತ ನಿರ್ಮಾಪಕ ಕೆ.ಪಿ.ಶ್ರೀಕಾಂತ್(KP srikanth) ಧೃಡಪಡಿಸಿದ್ದಾರೆ.