• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿವಾದ ಸೃಷ್ಟಿಸಿದ ಶೋಭಾ ಕರಂದ್ಲಾಜೆ ಪತ್ರ: ಸಿದ್ದರಾಮಯ್ಯ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
April 27, 2023
in Top Story, ಕರ್ನಾಟಕ, ರಾಜಕೀಯ
0
ವಿವಾದ ಸೃಷ್ಟಿಸಿದ ಶೋಭಾ ಕರಂದ್ಲಾಜೆ ಪತ್ರ: ಸಿದ್ದರಾಮಯ್ಯ ಕಿಡಿ
Share on WhatsAppShare on FacebookShare on Telegram

  ಚುನಾವಣೆಗೆ ಎರಡೇ ವಾರಗಳು  ಬಾಕಿ ಇರುವಾಗ ಕೇಂದ್ರ ಸಚಿವೆ  ಶೋಭಾ ಕರಂದ್ಲಾಜೆ ಅವರು ತಮ್ಮ ಪಕ್ಷದ ಚುನಾವಣಾ ಏಜಂಟರುಗಳಿಗೆ ಹಾಗೂ ಅಭ್ಯರ್ಥಿ, ಮುಖಂಡರುಗಳಿಗೆ ಬರೆದಿರುವ ಪತ್ರ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ADVERTISEMENT

ಯಾವ್ಯಾವ ಮತಗಟ್ಟೆಗಳನ್ನು ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಎಂದು ಘೋಷಿಸಬೇಕು? ಯಾವ ಭಾಗಗಳಲ್ಲಿ ಕೇಂದ್ರ ಸೇನಾ ಪಡೆಗಳು, ಅರೆಸೇನಾ ತುಕಡಿಗಳನ್ನು ನಿಯೋಜಿಸಬೇಕು? ಯಾವ್ಯಾವ ಮತಗಟ್ಟೆಗಳಿಗೆ ವೆಬ್ ಕ್ಯಾಸ್ಟಿಂಗ್ ಮತ್ತು ವೀಡಿಯೋ ರೆಕಾರ್ಡಿಂಗ್ ಸೇವೆ ಅಗತ್ಯವಿದೆ ಎಂಬುದನ್ನು ಪಟ್ಟಿ ಮಾಡಿ ಕೂಡಲೇ ಪಕ್ಷದ ಐಟಿ ಸೆಲ್‌ ಗೆ ಮೇಲ್‌ ಮಾಡುವಂತೆ ಶೋಭಾ ಪತ್ರದಲ್ಲಿ ಹೇಳಿದ್ದಾರೆ.

ಈ ಪತ್ರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ಹೊರ ಹಾಕಿದ್ದು, “ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ?” ಎಂದು ಪ್ರಶ್ನಿಸಿದ್ದಾರೆ.

“ಪಕ್ಷದ ಪದಾಧಿಕಾರಿಗಳು ನಿರ್ಧರಿಸಲಿರುವುದು ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನೋ? ಬಿಜೆಪಿ ಪರ ಮತ್ತು ವಿರೋಧಿ ಮತದಾರರು ಇರುವ ಮತಗಟ್ಟೆಗಳನ್ನೋ? ತಮ್ಮ ಪಕ್ಷದ ಪರವಾಗಿಲ್ಲದ ಮತದಾರರು ಇರುವ ಮತಗಟ್ಟೆಗಳಲ್ಲಿ‌ ಭದ್ರತೆಯ ನೆಪದಲ್ಲಿ ಕೇಂದ್ರ ಸೇನಾಪಡೆಗಳನ್ನು ನಿಯೋಜಿಸಿ ಮತದಾರರನ್ನು ಬೆದರಿಸಿ ಅವರು ಮತದಾನ ಮಾಡದಂತೆ ತಡೆಯುವುದು ಈ ಪತ್ರದ ದುರುದ್ದೇಶವಾಗಿದೆ” ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಚುನಾವಣಾ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮತ್ತು ವಿಡಿಯೋ ರೆಕಾರ್ಡಿಂಗ್ ಮಾಡುವ ಹೊಣೆ ಚುನಾವಣಾ ಆಯೋಗದಲ್ಲವೇ? ಇದನ್ನು ನಡೆಸಲು ರಾಜಕೀಯ ಪಕ್ಷಕ್ಕೆ ಅನುಮತಿ ಕೊಟ್ಟವರು ಯಾರು?  ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯ, “ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಈ ಪತ್ರ ಬರೆದಿರುವುದನ್ನು ನೋಡಿದರೆ ಕೇಂದ್ರ ಸರ್ಕಾರವೇ ಈ ಅಕ್ರಮ ಚಟುವಟಿಕೆಯಲ್ಲಿ ಷಾಮೀಲಾಗುರುವುದು ಸ್ಪಷ್ಟವಾಗಿದೆ. ಕೇಂದ್ರ ಚುನಾವಣಾ ಆಯುಕ್ತರು ತಕ್ಷಣ ಮಧ್ಯೆಪ್ರವೇಶಿಸಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ವಿಚಾರಣೆಗೊಳಪಡಿಸಿ ಅವರು ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ನಿಷೇಧಿಸಬೇಕು. ಅವರು ಪಕ್ಷದ ನಾಯಕರು ಮತ್ತು ಅಭ್ಯರ್ಥಿಗಳಿಂದ ಪಡೆದಿರುವ ಮಾಹಿತಿಯನ್ನು ವಶಕ್ಕೆ ಪಡೆಯಬೇಕು” ಎಂದು ಆಗ್ರಹಿಸಿದ್ದಾರೆ.

ಅದಾಗ್ಯೂ, ಶೋಭಾ ಬರೆದಿರುವ ಪತ್ರವನ್ನು ಸಿಎಂ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸಮರ್ಥಿಸಿದ್ದಾರೆ. ಕಾಂಗ್ರೆಸ್ ಪುಂಡಾಟಿಕೆ ತಡೆಯಲು ನಾವು ನಮ್ಮ ಕರ್ತವ್ಯ ಮಾಡುತ್ತಿದ್ದೇವೆ. ಇದರಲ್ಲೇನು ತಪ್ಪು ಎಂದು ಪ್ರಶ್ನೆ ಮಾಡಿದ್ದಾರೆ.


ಶೋಭಾ ಕರಂದ್ಲಾಜೆ ಕೂಡಾ ತಮ್ಮ ಪತ್ರವನ್ನು ಸಮರ್ಥಿಸಿಕೊಂಡಿದ್ದು, ಸೂಕ್ಷ್ಮ ಅತಿಸೂಕ್ಷ್ಮ ಬೂತ್‌ಗಳನ್ನು ಆಯೋಗ ಪಟ್ಟಿ ಮಾಡುತ್ತದೆ. ವರುಣಾ, ಕನಕಪುರ ಸೇರಿ ಬೇರೆ ಬೇರೆ ಜಿಲ್ಲೆಗಳಲ್ಲಿ ಸೂಕ್ಷ್ಮ ಬೂತ್‌ಗಳಿವೆ. ಬಿಜೆಪಿ ಪ್ರಬಲವಲ್ಲದ ಕಡೆ ನಮ್ಮ ಕಾರ್ಯಕರ್ತರಿಗೆ ಕೆಲಸ ಮಾಡಲು ಬಿಡುವುದಿಲ್ಲ. ಹೀಗಾಗಿ ಇಂತಹ ಬೂತ್‌ಗಳ ಮಾಹಿತಿ ಕೊಡಲು ಮತ್ತು ಭದ್ರತೆ ಹೆಚ್ಚಿಸಲು ಮನವಿ ಮಾಡಿದೆ. ಹಿಂದಿನ‌ ಚುನಾವಣೆಯಲ್ಲಿ ಮನವಿ ಮಾಡಿದ್ದೆವು. ಈಗಲೂ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

Tags: Congress PartyShobha Karandlajesiddaramaiahಸಿದ್ದರಾಮಯ್ಯ
Previous Post

ಹನೂರು ಕ್ಷೇತ್ರದ ಜನತೆಯಲ್ಲಿ ಮತಯಾಚಿಸಿದ ಬಿಜೆಪಿ ಅಭ್ಯರ್ಥಿ ಪ್ರೀತಂ ನಾಗಪ್ಪ

Next Post

ಯಡಿಯೂರಪ್ಪ ವಿರುದ್ಧವೇ ತಿರುಗಿ ಬಿತ್ತಾ ಲಿಂಗಾಯತ ಸಮುದಾಯ..?

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಯಡಿಯೂರಪ್ಪ ವಿರುದ್ಧವೇ ತಿರುಗಿ ಬಿತ್ತಾ ಲಿಂಗಾಯತ ಸಮುದಾಯ..?

ಯಡಿಯೂರಪ್ಪ ವಿರುದ್ಧವೇ ತಿರುಗಿ ಬಿತ್ತಾ ಲಿಂಗಾಯತ ಸಮುದಾಯ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada