ಮೈಸೂರು : ಏಪ್ರಿಲ್ 30ರಂದು ಮೈಸೂರಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ವಿವರಗಳನ್ನು ಶಾಸಕ ಎಸ್ ಎ ರಾಮದಾಸ್ ನೀಡಿದ್ದಾರೆ. ಮೈಸೂರಿನ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು. ಬರುವ ಭಾನುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿ ಗನ್ ಹೌಸ್ ವೃತ್ತದಿಂದ ರೋಡ್ ಶೋ ನಡೆಸಲಿದ್ಧಾರೆ ಎಂದು ಹೇಳಿದರು.
‘
ಭಾನುವಾರ ಸಂಜೆ ಬೇಲೂರಿನಿಂದ ಹೆಲಿಕಾಪ್ಟರ್ ಮೂಲಕ ಮೈಸೂರಿನ ಓವಲ್ ಮೈದಾನಕ್ಕೆ ಪ್ರಧಾನಿ ಮೋದಿ ಬಂದಿಳಿಯಲಿದ್ದು ಬಳಿಕ ಕಾರಿನಲ್ಲಿ ಗನ್ ಹೌಸ್ ವೃತ್ತಕ್ಕೆ ತೆರಳಲಿದ್ದಾರೆ. ಅಲ್ಲಿಂದ ರೋಡ್ ಶೋನಲ್ಲಿ ಭಾಗಿಯಾಗಲಿದ್ದಾರೆ. ನಾದಸ್ವರ ವಾದನಗಳಿಂದ ಪ್ರಧಾನಿಗೆ ಸ್ವಾಗತ ಕೋರುವ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಮೈಸೂರಿನ ವಿಶೇಷತೆಗಳಾಗಿರುವ ವಸ್ತುಗಳನ್ನು ಮೋದಿಗೆ ಉಡುಗೊರೆಯಾಗಿ ನೀಡಲಿದ್ದೇವೆ ಎಂದು ಹೇಳಿದ್ರು.

ಇದಾದ ಬಳಿಕ ಗನ್ ಹೌಸ್ ವೃತ್ತದಿಂದ ರೋಡ್ ಶೋ ಆರಂಭಗೊಳ್ಳಲಿದ್ದು ಸಂಸ್ಕೃತ ಪಾಠಶಾಲೆ ವೃತ್ತ, ಕೆ ಆರ್ ವೃತ್ತ, ಆಯುರ್ವೇದಿಕ್ ಆಸ್ಪತ್ರೆ ವೃತ್ತ, ಆರ್ ಎಂ ಸಿ ವೃತ್ತ, ಹೈವೇ ವೃತ್ತದ ಮಾರ್ಗವಾಗಿ ಮಿಲೇನಿಯಂ ವೃತ್ತದತ್ತ ರೋಡ್ ಶೋನಲ್ಲಿ ಸಾಗಲಿರುವ ಪ್ರಧಾನಿ ನರೇಂದ್ರ ಮೋದಿ.ಸುಮಾರು 4 ಕಿ ಮೀ ರೋಡ್ ಶೋ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದ್ರು .