• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಕಾಂಗ್ರೆಸ್ ನಾಯಕರೇ ಜಾಮೀನು ಪಡೆದು ಚುನಾವಣೆ ಎದುರಿಸುತ್ತಿದ್ದಾರೆ – ಸಿಎಂ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
April 28, 2023
in ರಾಜಕೀಯ
0
ಕಾಂಗ್ರೆಸ್ ನಾಯಕರೇ ಜಾಮೀನು ಪಡೆದು ಚುನಾವಣೆ ಎದುರಿಸುತ್ತಿದ್ದಾರೆ – ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಕಲಬುರಗಿ: ಕಾಂಗ್ರೆಸ್ ನ ರಾಷ್ಟ್ರೀಯ ನಾಯಕರು ಬೇಲ್ ಮೇಲೆ ಇದ್ದಾರೆ. ರಾಜ್ಯಾಧ್ಯಕ್ಷರು ಬೇಲ್ ಮೇಲೆ ಇದ್ದಾರೆ. ಹಾಗೆ ನೋಡಿದರೆ ಕಾಂಗ್ರೆಸ್ ನಾಯಕರು ಯಾರೂ ಚುನಾವಣೆಗೇ ನಿಲ್ಲುವ ಹಾಗಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು.ಅವರು ಇಂದು ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅವರ ಪರವಾಗಿ ರೋಡ್ ಶೋ ನಡೆಸಿ ಮಾತನಾಡಿದರು.

ADVERTISEMENT

ಹಿಂದೆ ಚಿತ್ತಾಪುರದಲ್ಲಿ ಬಿಜೆಪಿ ನಾಯಕರನ್ನು ಗೆಲ್ಲಿಸಿಕೊಂಡು ಹೋಗಿದ್ವಿ. ಈ ಬಾರಿ ಚಿತ್ತಾಪುರದಲ್ಲಿ ಮಣಿಕಂಠನನ್ನು ಗೆಲ್ಲಿಸಿಕೊಂಡು ಹೋಗಲು ಮತ್ತೆ ಬಂದಿದ್ದೀನಿ. ಮಣಿಕಂಠನ ಮೇಲೆ ಹಲವಾರು ಕೇಸ್ ಇದೆ. ಸಿಎಂ ಅವರ ಪರ ಮತ ಯಾಚನೆ ಮಾಡುವುದು ದುರಂತ ಅಂತ ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಆದರೆ ಕಾಂಗ್ರೆಸ್ನ ರಾಷ್ಟ್ರೀಯ-ರಾಜ್ಯ ನಾಯಕರ ಮೇಲೆ ಕೇಸ್ ಇದೆ. ಅವರುಗಳು ಬೇಲ್ ಮೇಲೆ ಇದ್ದಾರೆ. ನಿಮ್ಮ ಮಾತಿನಂತೆಯೇ ನಡೆಯುವುದಾದರೇ ನೀವೆಲ್ಲರೂ ರಾಜಕೀಯದಿಂದಲೇ ಹೊರಗುಳಿಯಬೇಕು ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ವಿಸರ್ಜನೆ ಮಾಡಿ
ಮಹಾತ್ಮಾ ಗಾಂಧಿ ಅವರು ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜನೆ ಮಾಡಲು ಹೇಳಿದ್ದರು. ಪೂಜ್ಯ ಗಾಂಧೀ ಅವರ ಕನಸು ನನಸು ಮಾಡುವ ಕಾಲ ಈಗ ಬಂದಿದೆ. ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ ಸೋಲಿಸಿ ಬೇರು ಸಮೇತ ಕಿತ್ತು ಹಾಕಿ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ಮಾಡುವ ಕಾಲ ಬಂದಿದೆ. ಇದು ಚುನಾವಣೆ ಅಲ್ಲ. ಮಣಿಕಂಠನ ಜಾತ್ರೆ. ಹುರುಪು ಹುಮ್ಮಸ್ಸಿನಿಂದ ಪ್ರಚಾರ ಮಾಡಿ ಮಣಿಕಂಠರನ್ನು ಗೆಲ್ಲಿಸಿ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಎಲ್ಲಿತ್ತು ಕಾಂಗ್ರೆಸ್ ನ ಸಾಮಾಜಿಕ ನ್ಯಾಯ
ಕಾಂಗ್ರೆಸ್ ನವರು ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಾರೆ. ದೀನ ದಲಿತರ ರಕ್ಷಣೆ ಮಾಡ್ತೀವಿ ಎಂದು 30 ವರ್ಷದಿಂದ ಹೇಳಿಕೊಂಡು ಬಂದ್ರಿ. ಮೀಸಲಾತಿ ಹೆಚ್ಚಳಕ್ಕೆ ಮೂವತ್ತು ವರ್ಷದಿಂದ ಬೇಡಿಕೆ ಇದ್ದರೂ ಕಾಂಗ್ರೆಸ್ ನವರು ಸಮುದಾಯಗಳಿಗೆ ಅನ್ಯಾಯ ಮಾಡುತ್ತ ಬಂದರು. ನಾನು ಮೀಸಲಾತಿ ಹೆಚ್ಚಳ ಮಾಡಿದ್ದನ್ನು ಕಾಂಗ್ರೆಸ್ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಕೋಟಿ ಕೊಟ್ಟಿದ್ದೀನಿ. ಅದೇ ವರ್ಷ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಮಾಡುವ ಕಾರ್ಯ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ಗ್ಯಾರಂಟಿ ಚುನಾವಣೆವರೆಗೂ ಮಾತ್ರ
ಕಾಂಗ್ರೆಸ್ ‌ಗ್ಯಾರೆಂಟಿ ಸ್ಕೀಮ್ ಗಳು ಮೇ 10 ರ ವರೆಗೆ ಮಾತ್ರ. ಚುನಾವಣೆ ಆದ ಮೇಲೆ ಗಳಗಂಟಿ ಮಾತ್ರ. ಪ್ರಧಾನಿ ಮೋದಿಯವರು ಕಾಂಗ್ರೆಸ್ ನ ‌ಭ್ರಷ್ಟಾಚಾರವೇ ಅವರ ಗ್ಯಾರಂಟಿ ಎಂದು ಹೇಳಿದ್ದಾರೆ. ಮೇ 13 ರಂದು ಚಿತ್ತಾಪುರದಲ್ಲಿ ಗ್ಯಾರಂಟಿ ಇರೋದು ಮಣಿಕಂಠ ಒಬ್ಬನೇ. ಕರ್ನಾಟಕಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದೆ. ಮೋದಿ ಸರ್ಕಾರ ಜನರಿಗೆ ಹಲವಾರು ಯೋಜನೆಗಳನ್ನು ತಂದಿದೆ. ಅದೇ ರೀತಿ ಬಡ ಜನರಿಗೆ ಉಪಯೋಗವಾಗಲು ರಾಜ್ಯ ಸರ್ಕಾರದಿಂದಲೂ ಹಲವು ಜನಪರ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಹಿಂದುಳಿದ ಜನ ಭಿಕ್ಷುಕರಾ?
ಬಸವಣ್ಣನ ಪಥದಲ್ಲಿ ನಮ್ಮ ಸರ್ಕಾರ ನಡೆಯುತ್ತಿದೆ. ಆದರೆ ಕಾಂಗ್ರೆಸ್ ನಾಯಕ ಸುರ್ಜೆವಾಲಾ ಅವರು ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಲ್ಲ ಅಂತ ಹೇಳಿದ್ದಾರೆ‌. ಹಾಗಾದ್ರೆ ಮೀಸಲಾತಿ ಪಡೆದ ಎಸ್ಸಿ ಎಸ್ಟಿ ಹಿಂದುಳಿದ ಜನರು ಭಿಕ್ಷುಕರಾ ಅಂತ ಕೇಳುತ್ತೇನೆ? ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಅಡಿಯಲ್ಲಿ ಮೀಸಲಾತಿಯನ್ನು ಕೇಳಿದರೆ ಅವರನ್ನು ಭಿಕ್ಷುಕರನ್ನಾಗಿ ನೋಡ್ತೀರಾ? ಈ ರೀತಿ ಒಡೆದು ಆಳುವ ನೀತಿ ಬಂದ್ ಆಗಬೇಕು ಅಂದರೆ ಚಿತ್ತಾಪುರದಲ್ಲಿ ಕಮಲ ಅರಳಬೇಕು. ಇಲ್ಲಿ ಕಮಲ ಅರಳಿಸಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ನಿಮ್ಮ ಜೊತೆಗೆ ನಾವಿರುತ್ತೇವೆ
ಚಿತ್ತಾಪುರ ಕ್ಷೇತ್ರವನ್ನು ಸಂಪೂರ್ಣ ಅಭಿವೃದ್ಧಿ ಮಾಡಿ, ಇಲ್ಲಿ ಎಲ್ಲರಿಗು ಸೂರು, ನೀರಾವರಿ, ಕೈಗೆ ಕೆಲಸ ಕೊಡುತ್ತೀವಿ. ಮಣಿಕಂಠನನ್ನು ಶಾಸಕರಾಗಿ ಆಯ್ಕೆ ಮಾಡಿದರೆ, ಈಗಿನ ಶಾಸಕರು 20 ವರ್ಷದಲ್ಲಿ ಮಾಡದ ಅಭಿವೃದ್ಧಿಯನ್ನು ಮಣಿಕಂಠ ಮಾಡುತ್ತಾನೆ. ಈ ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಮಾಡಬೇಕು. ನಿಮ್ಮ ಜೊತೆಗೆ ನಾವಿರುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು

Tags: BJPCM Basavaraja BommaiDK ShivakumarKalaburagiಕಲಬುರಗಿಕಾಂಗ್ರೆಸ್​ಡಿಕೆ ಶಿವಕುಮಾರ್​ಬಿಜೆಪಿಸಿಎಂ ಬಸವರಾಜ ಬೊಮ್ಮಾಯಿ
Previous Post

ʻದಲಿತರು, ಹಿಂದುಳಿದವರು ಭಿಕ್ಷುಕರೇʼ? : ಡಿಕೆಶಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು..!

Next Post

ನಿರ್ಣಾಯಕ ಚುನಾವಣೆಗಳು ಕಾರ್ಮಿಕರ ದೃಷ್ಟಿಕೋನ..ಕೋಮುವಾದ ಮತಾಂಧತೆಯೊಂದಿಗೆ ನವ ಉದಾರವಾದವೂ ಕನ್ನಡಿಗರ ಮುಂದಿನ ಸವಾಲಾಗಿದೆ

Related Posts

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್
ದೇಶ

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

by ಪ್ರತಿಧ್ವನಿ
December 2, 2025
0

ನವದೆಹಲಿ: ರಷ್ಯಾ ಅಧ್ಯಕ್ಷ ವಾಗ್ಲಿಮಿರ್ ಪುಟಿನ್ ಡಿ.4ರಂದು ನವದೆಹಲಿಗೆ ಭೇಟಿ‌ ನೀಡಲಿದ್ದಾರೆ. ಎರಡು ದಿನಗಳ ಈ ಭೇಟಿಯ ಹಿನ್ನಲೆ ರಾಷ್ಟ್ರ ರಾಜಧಾನಿಯಲ್ಲಿ ಭದ್ರತಾ ಪಡೆಗಳು ಹೈ ಅಲರ್ಟ್...

Read moreDetails
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

December 2, 2025
ಬ್ರೇಕ್​ಫಾಸ್ಟ್ ಮೀಟಿಂಗ್‌ನಲ್ಲಿ ರಾಜಕೀಯ ಚರ್ಚೆ: ಡಿ.ಕೆ ಶಿವಕುಮಾರ್ ಹೇಳಿದ್ದೇನು..?

ಬ್ರೇಕ್​ಫಾಸ್ಟ್ ಮೀಟಿಂಗ್‌ನಲ್ಲಿ ರಾಜಕೀಯ ಚರ್ಚೆ: ಡಿ.ಕೆ ಶಿವಕುಮಾರ್ ಹೇಳಿದ್ದೇನು..?

December 2, 2025
ಸಿನೆಮಾ ಇನ್ನೂ ಬಾಕಿ ಇದೆ-ಕಾಂಗ್ರೆಸ್‌ ವಿರುದ್ಧ ಬಸವರಾಜ ಬೊಮ್ಮಾಯಿ ವ್ಯಂಗ್ಯ

ಸಿನೆಮಾ ಇನ್ನೂ ಬಾಕಿ ಇದೆ-ಕಾಂಗ್ರೆಸ್‌ ವಿರುದ್ಧ ಬಸವರಾಜ ಬೊಮ್ಮಾಯಿ ವ್ಯಂಗ್ಯ

December 2, 2025
Next Post
ನಿರ್ಣಾಯಕ ಚುನಾವಣೆಗಳು ಕಾರ್ಮಿಕರ ದೃಷ್ಟಿಕೋನ..ಕೋಮುವಾದ ಮತಾಂಧತೆಯೊಂದಿಗೆ ನವ ಉದಾರವಾದವೂ ಕನ್ನಡಿಗರ ಮುಂದಿನ ಸವಾಲಾಗಿದೆ

ನಿರ್ಣಾಯಕ ಚುನಾವಣೆಗಳು ಕಾರ್ಮಿಕರ ದೃಷ್ಟಿಕೋನ..ಕೋಮುವಾದ ಮತಾಂಧತೆಯೊಂದಿಗೆ ನವ ಉದಾರವಾದವೂ ಕನ್ನಡಿಗರ ಮುಂದಿನ ಸವಾಲಾಗಿದೆ

Please login to join discussion

Recent News

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!
Top Story

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

by ಪ್ರತಿಧ್ವನಿ
December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF
Top Story

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

by ಪ್ರತಿಧ್ವನಿ
December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ
Top Story

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

by ಪ್ರತಿಧ್ವನಿ
December 2, 2025
ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ
Top Story

ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ

by ಪ್ರತಿಧ್ವನಿ
December 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!