2023ರ ಕರ್ನಾಟಕ ವಿಧಾನಸಭಾ ದಿನಗಣನೆ(karnataka assembly election) ಶುರುವಾಗಿದ್ದು, ಈಗಾಗಲೇ ಪಕ್ಷದ ನಾಯಕರು, ಮುಖಂಡರು ಅಖಾಡಕ್ಕಿಳಿದು ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ತಮ್ಮ ಪಕ್ಷವನ್ನ ಗೆಲ್ಲಿಸಬೇಕೆಂದು ರಾಜ್ಯದ ಮೂಲೆ ಮೂಲೆಗೂ ತಿರುಗಿ, ಮತ ಪ್ರಚಾರ ಮಾಡ್ತಿದ್ದಾರೆ. ಈ ಮಧ್ಯೆ ಜೆಡಿಎಸ್(JDS) ಭದ್ರಕೋಟೆ ಹಾಸನ, ಮಂಡ್ಯದಲ್ಲಿ(mandya) ತಮ್ಮ ಪಕ್ಷವನ್ನ ಗೆಲ್ಲಿಸುವ ಕಾರಣಕ್ಕೆ ಕಾಂಗ್ರೆಸ್(congress) ನಾಯಕರು ಪ್ರಚಾರಕ್ಕಿಳಿದಿದ್ದಾರೆ. ಇಂದು ಕಾಂಗ್ರೆಸ್ ಶಕ್ತಿಪ್ರದರ್ಶನ ತೋರಿಸಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,(DK shivakumar) ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಹಲವು ನಾಯಕರು ಹಾಸನದಲ್ಲಿಂದ ಭರ್ಜರಿ ಕ್ಯಾಂಪೇನ್ ಮಾಡಲಿದ್ದಾರೆ.
ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್ ಪ್ರಚಾರ ನಡೆಸಲಿದ್ದು, ಬೆಳಗ್ಗೆ 11 ಗಂಟೆಗೆ ಮಳವಳ್ಳಿಗೆ ಮಲ್ಲಿಕಾರ್ಜುನ ಖರ್ಗೆ,(mallikarjuna kharge) ಡಿಕೆ.ಶಿವಕುಮಾರ್ ಭೇಟಿ ನೀಡಲಿದ್ದು ಮಳವಳ್ಳಿ ಕಾಂಗ್ರೆಸ್ ಅಭ್ಯರ್ಥಿ ನರೇಂದ್ರಸ್ವಾಮಿ ಪರ ಮತಯಾಚನೆ ಮಾಡಲಿದ್ದಾರೆ. ಬಳಿಕ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಇನ್ನು ಸಕಲೇಶಪುರ ಹಾಗೂ ಅರಕಲಗೂಡು ಕ್ಷೇತ್ರಗಳಲ್ಲಿ ಕಾಂಗ್ರೆಸ್(congress) ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಹೆಲಿಕಾಪ್ಟರ್ ಮೂಲಕ ಸಕಲೇಶಪುರದ(sakleshpur) ಬಾಳ್ಳುಪೇಟೆಗೆ ಕಾಂಗ್ರೆಸ್ ನಾಯಕರು ಆಗಮಿಸಲಿದ್ದು ಇಂದು ಸಂಜೆ 4 ಗಂಟೆಗೆ ಬಾಳ್ಳುಪೇಟೆಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಮುರುಳಿ ಮೋಹನ್ ಪರವಾಗಿ ಕ್ಯಾಂಪೇನ್ ನಡೆಯಲಿದೆ. ಹಾಗೂ ಅರಕಲಗೂಡು ಕ್ಷೇತ್ರದ ಅಭ್ಯರ್ಥಿ ಶ್ರೀಧರ್ ಗೌಡ(shridhar gowda) ಪರ ಮತ ಪ್ರಚಾರ(campaign) ನಡೆಸಲಿದ್ದಾರೆ.