ಕಾಲಿವುಡ್‌ನ ಹಿರಿಯ ನಟ, ನಿರ್ದೇಶಕ ಮನೋಬಾಲ ಇಂದು ಇಹಲೋಕ ತ್ಯಜಿಸಿದ್ದು, ನಟನ ಸಾವಿಗೆ ಕಾಲಿವುಡ್ ಚಿತ್ರರಂಗ ಕಂಬನಿ ಮಿಡಿದಿದೆ. ಕೆಲವು ತಿಂಗಳಿಂದ ಲಿವರ್ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಮನೋಬಾಲ ಇಂದು ಕೊನೆಯುಸಿರೆಳೆದಿದ್ದಾರೆ. ಮೂರೂವರೆ ದಶಕಕ್ಕೂ ಹೆಚ್ಚು ಕಾಲ ಮನೋಬಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡ ತಮಿಳು ಚಿತ್ರರಂಗ ಕಂಬನಿ ಮಿಡಿದಿದೆ.







