ಕಾಂಗ್ರೆಸ್(congress) ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಭರವಸೆಯನ್ನು ನೀಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ(manifesto) ಬಜರಂಗದಳ ವಿರುದ್ಧ ಕ್ರಮದ ಕುರಿತು ಪ್ರಸ್ತಾವ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ(BJP) ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಕಾಂಗ್ರೆಸ್ನ ಚುನಾವಣಾ(election) ಪ್ರಣಾಳಿಕೆಯು ಮೊಹ್ಮದ್ ಅಲಿ ಜಿನ್ನಾ ಪ್ರಣಾಳಿಕೆ ಆಗಿದೆ ಅಂತ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ(KS eshwarappa) ವೇದಿಕೆಯಲ್ಲೇ ಕಾಂಗ್ರೆಸ್ ಪ್ರಣಾಳಿಕೆಯನ್ನು ಸುಟ್ಟು ಹಾಕಿ ಕಿಡಿಕಾರಿದರು.

ಚುನಾವಣಾ ಪ್ರಚಾರದ ನಿಮಿತ್ತ ಕಲಬುರಗಿ ಜಿಲ್ಲಾ ಪ್ರವಾಸದಲ್ಲಿರುವ ಈಶ್ವರಪ್ಪ, ಇಂದು ನಗರದಲ್ಲಿ ಬಿಜೆಪಿ ಕಚೇರಿಯಲ್ಲಿ(BJP office) ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಕಾಂಗ್ರೆಸ್ ಪ್ರಣಾಳಿಕೆ ಪ್ರತಿಗೆ ಬೆಂಕಿ ಹಚ್ಚಿ ಸುಟ್ಟುಹಾಕಿದರು. ಬಳಿಕ ಮಾತನಾಡಿದ ಈಶ್ವರಪ್ಪ, ʻಯುವಜನರಿಗೆ ಸ್ಫೂರ್ತಿ ತುಂಬುವ ಕೆಲಸವನ್ನು ಬಜರಂಗದಳ ಮಾಡುತ್ತಿದೆ. ಗೋಹತ್ಯೆ ತಡೆಯಲು ಮುಂದಾಗಿರುವ ಬಜರಂಗದಳ ಬ್ಯಾನ್ ಮಾಡ್ತಿರಾ? ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು ನಿಮ್ಮ ಎದುರೇ ಸುಟ್ಟು ಹಾಕುತ್ತಿದ್ದೇನೆ. ಕಾಂಗ್ರೆಸ್(congress) ಬರೀ ಸುಳ್ಳಿನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಹೀಗಾಗಿ ಈ ಪ್ರಣಾಳಿಕೆಯಿಂದ(manifesto) ಯಾವ ಪ್ರಯೋಜನ ಇಲ್ಲ ಅಂತ ಕಾಂಗ್ರೆಸ್ ವಿರುದ್ಧ ಕೆ.ಎಸ್ ಈಶ್ವರಪ್ಪ(KS eshwarappa) ಆಕ್ರೋಶ ವ್ಯಕ್ತಪಡಿಸಿದರು.







