2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ(karnataka assembly election 2023) ಇನ್ನು ಬೆರಳೆಣಿಕೆ ದಿನಗಳಷ್ಟೇ ಬಾಕಿ ಇದೆ. ಈಗಾಗಲೇ ಪಕ್ಷದ ನಾಯಕರು, ಮುಖಂಡರು ಅಖಾಡಕ್ಕಿಳಿದು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಜೊತೆಗೆ ಸ್ಯಾಂಡಲ್‌ವುಡ್(sandalwood) ನಟ, ನಟಿಯರು ಕೂಡ ರಾಜಕೀಯ ನಾಯಕರಿಗೆ ಸಾಥ್ ಕೊಡುತ್ತಿದ್ದಾರೆ.
ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ(siddaramaiah) ಪರ ವರುಣ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ಪತ್ನಿ ಗೀತಾ ಶಿವರಾಜ್‌ಕುಮಾರ್, ಮೋಹಕ ತಾರೆ ರಮ್ಯಾ, ದುನಿಯಾ ವಿಜಯ್ ಭರ್ಜರಿ ಮತ ಪ್ರಚಾರ ನಡೆಸಲಿದ್ದಾರೆ.
ಕಳೆದೆರಡು ದಿನಗಳಿಂದ ನಟ ಶಿವರಾಜ್ ಕುಮಾರ್(shivarajkumar) ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಮಧು ಬಂಗಾರಪ್ಪ ಪರವಾಗಿ ಸೊರಬದಲ್ಲಿ ಮತಯಾಚನೆ ಮಾಡಿದ್ದಾರೆ. ರಮ್ಯಾ (ramya)ಕೂಡ ಮಂಡ್ಯದಿಂದ ಪ್ರಚಾರ ಕಾರ್ಯ ಶುರು ಮಾಡಿದ್ದು, ನಟ ದುನಿಯಾ ವಿಜಯ್(duniya vijay) ಕೇವಲ ಸಿದ್ಧರಾಮಯ್ಯನವರ ಪರವಾಗಿಯಷ್ಟೇ ಪ್ರಚಾರ(campaign) ಮಾಡಲಿದ್ದಾರಂತೆ.
ಈ ಸಲ ಸ್ಯಾಂಡಲ್‌ವುಡ್‌ನ(sandalwood) ಅನೇಕ ಕಲಾವಿದರು ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ನಟ ಕಿಚ್ಚ ಸುದೀಪ್(kiccha sudeep) ಹತ್ತಾರು ಕ್ಷೇತ್ರಗಳಿಗೆ ಹೋಗಿ ಬಿಜೆಪಿ ಅಭ್ಯರ್ಥಿಗಳ(BJP candidates) ಪರವಾಗಿ ಮತಯಾಚನೆ ಮಾಡಿದ್ದಾರೆ. ನಟಿ ಹರ್ಷಿಕಾ ಪೂಣಚ್ಚ ಕೂಡ ಗದಗ ಮತ್ತು ದೊಡ್ಡಬಳ್ಳಾಪುರ ಕ್ಷೇತ್ರದ ಬಿಜೆಪಿ(BJP) ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಿದ್ದಾರೆ. ನೆನಪಿರಲಿ ಪ್ರೇಮ್, ಚಂದನ್ ಶೆಟ್ಟಿ ಸೇರಿದಂತೆ ಕಿರುತೆರೆ ಕಲಾವಿದರು ಕೂಡ ಪ್ರಚಾರ ಕಾರ್ಯದಲ್ಲಿದ್ದಾರೆ.