ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ನಿನ್ನೆ ಸೋಲನ್ನು ಕಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ಕ್ಷೇತ್ರದಲ್ಲಿರುವ ತನ್ನ ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ. ಚುನಾವಣೆಯಲ್ಲಿನ ಸೋಲನ್ನು ಸಮಚಿತ್ತದಿಂದ ಸ್ವೀಕರಿಸಿದ್ದೇನೆ ಎಂದಿದ್ದಾರೆ.

ಆತ್ಮೀಯ ನನ್ನ ಚಿಕ್ಕಮಗಳೂರಿನ ಮತದಾರ ಬಂಧುಗಳೆ ಕಳೆದ 20 ವರ್ಷದಿಂದ ನನ್ನನ್ನು ಆಯ್ಕೆ ಮಾಡಿ ಗೆಲ್ಲಿಸಿದ್ದಾಕ್ಕಾಗಿ ನಿಮಗೆ ಚಿರಋಣಿ. ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ ಅದರಂತೆ ಸಮಚಿತ್ತದಿಂದ ಸೋಲನ್ನು ಸ್ವೀಕರಿಸಿದ್ದೇನೆ. ಕಾರ್ಯಕರ್ತರು ದೃತಿಗೆಡದೆ ಮತ್ತೊಮ್ಮೆ ಪಕ್ಷವನ್ನು ಇನ್ನಷ್ಟು ಬಲಪಡಿಸಲು ಶ್ರಮಿಸೋಣ ಎಂದು ಸಿ.ಟಿ.ರವಿ ಪತ್ರದಲ್ಲಿ ಬರೆದಿದ್ದಾರೆ. .
ಸೋಲು ಗೆಲುವು ಸ್ವಾಭಾವಿಕ. ಇದು ಸಿದ್ಧಾಂತದ ಸೋಲಲ್ಲ, ವೈಯಕ್ತಿಯ ಸೋಲು. ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಗೆದ್ದವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ಹಿಂದೆ ಸಿಕ್ಕ ಅಲ್ಪ ಸಮಯದಲ್ಲಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ತಂದಿದ್ದು, ಈ ಯೋಜನೆಗಳನ್ನು ಮುಂದವರಿಸಿಕೊಂಡು ಹೋಗಲಿ ಎಂದು ಆಶಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.