ಬೆಳಗಾವಿ : ಬಿಜೆಪಿಯಿಂದ ಟಿಕೆಟ್ ಸಿಗದೇ ಕಾಂಗ್ರೆಸ್ ಸೇರಿದ್ದ ಲಕ್ಷ್ಮಣ ಸವದಿ ಬಿಜೆಪಿ ವಿರುದ್ಧ ಹಗೆ ತೀರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಬೆಂಗಳೂರಿಗೆ ತೆರಳುವ ಮುನ್ನ ಬೆಳಗಾವಿ ಹೊರವಲಯದಲ್ಲಿರುವ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ರಾಜಕೀಯ ರಂಗದಲ್ಲಿ ಯಾರೂ ಸನ್ಯಾಸಿಗಳಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ರಾಜ್ಯದಲ್ಲಿ ಸ್ವಂತ ಬಲದಲ್ಲಿ ಸರ್ಕಾರ ರಚಿಸುವ ಎಲ್ಲಾ ಅರ್ಹತೆ ಪಡೆದುಕೊಂಡಿದೆ. ಮುಂದಿನ ಐದು ವರ್ಷಗಳಲ್ಲಿ ಜನರ ವಿಶ್ವಾಸಕ್ಕೆ ಧಕ್ಕೆ ಆಗದಂತೆ ಸೇವೆ ನೀಡಲಿದ್ದೇವೆ ಎಂದು ಹೇಳಿದ್ದಾರೆ.
ಇದೇ ವೇಳೆ ಮುಂದಿನ ಸಿಎಂ ಯಾರು ಎಂಬ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು. ಶಾಸಕನಾಗಿ ಆಯ್ಕೆಯಾದ ಮೇಲೆ ಮಂತ್ರಿಯಾಗಬೇಕು, ಉಪಮುಖ್ಯಮಂತ್ರಿಯಾಗಬೇಕು, ಸಿಎಂ ಆಗಬೇಕು ಎಂಬ ಎಲ್ಲಾ ಆಸೆ ಇರುತ್ತದೆ. ಇಲ್ಲಿ ಯಾರೂ ಸನ್ಯಾಸಿಗಳಲ್ಲ ಎಂದು ಹೇಳಿದ್ದಾರೆ.