• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

siddu vs dks ಸಿಎಂ ಕುರ್ಚಿಗೆ ಸಿದ್ದು v/s ಡಿಕೆಶಿ ಫೈಟ್; ಇಂದು ಫೈನಲ್‌ ಆಗುತ್ತಾ ಆಯ್ಕೆ ಪ್ರಕ್ರಿಯೆ? | who is the next cm ?

ಪ್ರತಿಧ್ವನಿ by ಪ್ರತಿಧ್ವನಿ
May 15, 2023
in Top Story, ಇದೀಗ
0
siddu vs dks ಸಿಎಂ ಕುರ್ಚಿಗೆ ಸಿದ್ದು v/s ಡಿಕೆಶಿ ಫೈಟ್; ಇಂದು ಫೈನಲ್‌ ಆಗುತ್ತಾ ಆಯ್ಕೆ ಪ್ರಕ್ರಿಯೆ? | who is the next cm ?
Share on WhatsAppShare on FacebookShare on Telegram

ಬೆಂಗಳೂರು: ಮೇ 15 :  ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ನಂತರ, ಕಾಂಗ್ರೆಸ್ ನಲ್ಲಿ ಈಗ ಹೊಸ ಮುಖ್ಯಮಂತ್ರಿ ಆಯ್ಕೆ ಮಾಡಲು ಭಾರಿ ಕಸರತ್ತು ನಡೆಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ( dk shivakumar) ಅವರ ಜೊತೆ ಮುಖ್ಯಮಂತ್ರಿ ಸ್ಥಾನವನ್ನು (NEXT CM) ಹಂಚಿಕೊಳ್ಳಲು ಸಿದ್ಧರಿದ್ದಾರೆ ಎಂಬ ಸಲಹೆಯನ್ನು ಸಿದ್ದರಾಮಯ್ಯ ಹೈಕಮಾಂಡ್ ಮುಂದಿಟ್ಟಿದ್ದಾರೆ ಎಂದು ಎಐಸಿಸಿ (AICC) ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ADVERTISEMENT

ಆದರೆ, ಸಿದ್ದರಾಮಯ್ಯ (Siddaramaiah) ಅವರು ಮೊದಲ ಅವಧಿಗೆ ಮುಖ್ಯಮಂತ್ರಿ ಹುದ್ದೆಯನ್ನು ನನಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮತ್ತು ಮೊದಲ ಎರಡು ವರ್ಷಗಳ ನಂತರ ಅಧಿಕಾರವನ್ನು ತ್ಯಜಿಸುತ್ತೇನೆ,  ಉಳಿದ ಅವಧಿಗೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.  ಸಿದ್ದರಾಮಯ್ಯ  ಕುರುಬ ಸಮುದಾಯದ ಪ್ರಬಲ ನಾಯಕರಾಗಿದ್ರೆ,  ಡಿ.ಕೆ.ಶಿವಕುಮಾರ್ ಒಕ್ಕಲಿಗ ಸಮುದಾಯದ ಪ್ರಬಲ ನಾಯಕರಾಗಿದ್ದಾರೆ.  ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ (CONGRESS) ಸಂಕಷ್ಟದಲ್ಲಿ ಸಿಲುಕಿದೆ ಎನ್ನಲಾಗುತ್ತಿದೆ.

ಕಾಂಗ್ರೆಸ್ ಹೈಕಮಾಂಡ್ ಇಂದು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದ್ದು, (MallikarjunKharge) ಮೊದಲ ಅವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ. ಶಿವಕುಮಾರ್ ಇದಕ್ಕೆ ಒಪ್ಪುತ್ತಾರೂ ಇಲ್ಲವೂ ಗೊತ್ತಿಲ್ಲ. ಒಂದು ವೇಳೆ ಡಿಕೆಶಿ ಒಪ್ಪಿದ್ರೆ,  ಗೃಹ ಖಾತೆ ಹೊಂದಿರುವ ಏಕೈಕ ಉಪಮುಖ್ಯಮಂತ್ರಿಯಾಗಬೇಕು ಎಂದು ಪಕ್ಷದ ಹೈಕಮಾಂಡ್‌ಗೆ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ರಾಜ್ಯದ  ಹಿರಿಯ ಕಾಂಗ್ರೆಸ್ ನಾಯಕರ ಪ್ರಕಾರ, ಒಟ್ಟು ಕಾಂಗ್ರೆಸ್ ಶಾಸಕರಲ್ಲಿ ಸರಿ  ಸುಮಾರು 70 ( MLA) ರಷ್ಟು ಮಂದಿ  ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಎಂದು ಬಯಸಿದ್ದಾರಂತೆ. ಇನ್ನು ಎಐಸಿಸಿ ವೀಕ್ಷಕರಾದ ಮಹಾರಾಷ್ಟ್ರದ ಮಾಜಿ ಸಿಎಂ ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್ ಮತ್ತು ದೀಪಕ್ ಬಬಾರಿಯಾ ಅವರೊಂದಿಗೆ ಸಮಾಲೋಚನೆ ನಡೆಸಿದ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಂತಿಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ.

ಎಐಸಿಸಿ ಅಧ್ಯಕ್ಷರು ಸೋನಿಯಾ ( soniyaGandhi) , ರಾಹುಲ್ ಮತ್ತು (priyankaGandhi) ಪ್ರಿಯಾಂಕಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) (K.C.Venugopal) ಕೆ.ಸಿ.ವೇಣುಗೋಪಾಲ್ ಮತ್ತು ಕರ್ನಾಟಕ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರೊಂದಿಗೂ ಚರ್ಚೆ ನಡೆಸಲಿದ್ದಾರೆ.

Tags: BJPCongress PartyDKSKarnataka ElectionKarnataka Politicssiddaramaiahwho is the next cmಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಹೋದರರ ಕಾಳಗದಲ್ಲಿ ಅಫಜಲಪುರ ಗೆದ್ದ ಕಾಂಗ್ರೆಸ್​ ಅಭ್ಯರ್ಥಿ

Next Post

ಮುಂದಿನ ಸಿಎಂ ಯಾರಾಗಬೇಕು ಎಂಬ ಮಾಧ್ಯಮಗಳ ಪ್ರಶ್ನೆಗೆ ಹೀಗಿತ್ತು ವಿಜಯೇಂದ್ರ ಪ್ರತಿಕ್ರಿಯೆ

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಮುಂದಿನ ಸಿಎಂ ಯಾರಾಗಬೇಕು ಎಂಬ ಮಾಧ್ಯಮಗಳ ಪ್ರಶ್ನೆಗೆ ಹೀಗಿತ್ತು ವಿಜಯೇಂದ್ರ ಪ್ರತಿಕ್ರಿಯೆ

ಮುಂದಿನ ಸಿಎಂ ಯಾರಾಗಬೇಕು ಎಂಬ ಮಾಧ್ಯಮಗಳ ಪ್ರಶ್ನೆಗೆ ಹೀಗಿತ್ತು ವಿಜಯೇಂದ್ರ ಪ್ರತಿಕ್ರಿಯೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada