ನವದೆಹಲಿ : ಮೇ.೧೮: ಸಿಎಂ ಆಯ್ಕೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆದ ಬೆನ್ನಲ್ಲೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಒಟ್ಟಿಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಸಿದ್ದರಾಮಯ್ಯ ಆಗಮನ ಹಿನ್ನೆಲೆ HAL ಏರ್ಪೋಟ್ ಬಳಿ ಗೊಂಬೆ ಕುಣಿತ, ಕಂಸಾಳೆ, ಕಂಬಳಿ ಕುರುಬ ತಂಡದಿಂದ ಡೊಳ್ಳು ಕುಣಿತ ಪ್ರದರ್ಶನ ನಡೆಯಲಿದೆ. ಸಿದ್ದರಾಮಯ್ಯರನ್ನ ಸ್ವಾಗತಿಸಲು ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಜೈಕಾರ ಕೂಗುತ್ತಿದ್ದಾರೆ.
ಕೆಪಿಸಿಸಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್
ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಹಿನ್ನೆಲೆ ನಗರದಲ್ಲಿರುವ ಕೆಪಿಸಿಸಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ 11ಎಸಿಪಿ, 25 ಇನ್ಸ್ಪೆಕ್ಟರ್ , 350 ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.