ಬೆಂಗಳುರು : ಮೇ.23: ಬೆಂಗಳೂರಿನ ಸಂಚಾರ ಸಮಸೈಎ ನಿವಾರಣೆ ಹಾಗೂ ಸೈಬರ್ ಅಪರಾಧಗಳ ನಿಯಂತ್ರಕ್ಕೆ ಪೊಲೀಸರು ಹೆಚ್ಚು ಆದ್ಯತೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಪೊಲೀಸ್ ಅಧಿಕಾರಿಗಳಿಗೆ ಖಡನ್ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಮಾತನಾಡಿದ ಅವರು, ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದರು ಸೂಚನೆ ನೀಡಿದರು.

ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದ ಮುಖ್ಯಮಂತ್ರಿ, ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯ ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ಇದೇ ವೇಳೆ ಸೂಚಿಸಿದರು.