ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ವರುಣ ಅಬ್ಬರ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 28 ಗಂಟೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಸಂಜೆ ಹಾಗೂ ರಾತ್ರಿ ವೇಳೆಗೆ ಬಿರುಗಾಳಿ ಸಹಿತ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ತಮಿಳುನಾಡಿನಲ್ಲಿ ಸುಳಿಗಾಳಿ ಉಂಟಾಗಿರುವ ಹಿನ್ನಲೆ, ಕರ್ನಾಟಕದ ಮೇಲೂ ಇದರ ಪರಿಣಾಮ ಬೀರಲಿದೆ. ಬಿರುಗಾಳಿಯ ವೇಗ ಪ್ರತಿಗಂಟೆಗೆ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಬೀಸುತ್ತಿದೆ. ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.