• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

GH Nayak is no more : ಮರೆಯಾದ ಮತ್ತೊಂದು ಸಾಂಸ್ಕೃತಿಕ ಕೊಂಡಿ- ಜಿ.ಎಚ್.ನಾಯಕ್‌

ನಾ ದಿವಾಕರ by ನಾ ದಿವಾಕರ
May 26, 2023
in ಅಂಕಣ
0
GH Nayak is no more : ಮರೆಯಾದ ಮತ್ತೊಂದು ಸಾಂಸ್ಕೃತಿಕ ಕೊಂಡಿ- ಜಿ.ಎಚ್.ನಾಯಕ್‌
Share on WhatsAppShare on FacebookShare on Telegram

ಕನ್ನಡ ಸಾಹಿತ್ಯ ವಿಮರ್ಶಾ ಲೋಕದ ವಿಶಿಷ್ಟ ವಿಮರ್ಶಕ, ಖ್ಯಾತ ಸಾಹಿತಿ ಹಾಗೂ ನಿವೃತ್ತ ಪ್ರಾಧ್ಯಾಪಕ ಜಿ. ಎಚ್‌. ನಾಯಕ್‌ ಇಂದು ಮೈಸೂರಿನ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ತಮ್ಮ ನೇರ ನುಡಿ ಮತ್ತು ನಿಷ್ಠುರ ಅಭಿವ್ಯಕ್ತಿಯಿಂದಲೇ ಸಾಹಿತ್ಯ ವಲಯದಲ್ಲಿ ಛಾಪು ಮೂಡಿಸಿದ್ದ ಜಿ. ಎಚ್.‌ ನಾಯಕರು  ಬಹುಕಾಲದಿಂದ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದರು. ಅನಾರೋಗ್ಯದ ಕಾರಣ ಕಳೆದ ಮೂರು ನಾಲ್ಕು ವರ್ಷಗಳಿಂದ ಯಾವುದೇ ಸಾಮಾಜಿಕ-ಸಾಹಿತ್ಯಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತಲೂ ಇರಲಿಲ್ಲ.

ADVERTISEMENT

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಸೂರ್ವೆಯಲ್ಲಿ 1935ರ ಸೆಪ್ಟಂಬರ್‌ 18ರಂದು ಜನಿಸಿದ ಜಿ.ಎಚ್.‌ ನಾಯಕ್‌ ವಿದ್ಯಾರ್ಥಿ ದೆಸೆಯಿಂದಲೂ ಮೈಸೂರಿನಲ್ಲೇ ನೆಲೆಸಿದ್ದರು. ಮೈಸೂರಿನ ಸಾಹಿತ್ಯ ವಲಯ, ಸಾಂಸ್ಕೃತಿಕ ಜಗತ್ತು ಹಾಗೂ ಮಾನವ ಹಕ್ಕುಗಳ ಹೋರಾಟಗಳು, ಇತರ ಪ್ರಗತಿಪರ ಚಟುವಟಿಕೆಗಳಲ್ಲಿ ಸದಾ ಸಕ್ರಿಯರಾಗಿರುತ್ತಿದ್ದ ಜಿ.ಎಚ್.‌ ನಾಯಕ್‌ ಅವರು ತಮ್ಮ ನೇರ ನುಡಿಗಳಿಗೆ ಹಾಗೂ ಸಾಹಿತ್ಯ ಕೃತಿಗಳ ವಸ್ತುನಿಷ್ಠ ವಿಮರ್ಶೆಗೆ ಹೆಸರಾಗಿದ್ದರು. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದ ಜಿ.ಎಚ್.‌ ನಾಯಕರು ಕನ್ನಡ ಇದೇ ಸಂಸ್ಥೆಯಲ್ಲೇ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಅಧ್ಯಯನ ಸಂಸ್ಥೆಯಲ್ಲಿ ಅಧ್ಯಾಪಕರಾಗಿ ಸೇವೆಗೈದಿದ್ದರು. ಬೌದ್ಧಿಕ ಪ್ರಾಮಾಣಿಕತೆ ಮತ್ತು ನಿಷ್ಠುರತೆಗೆ ಹೆಸರಾಗಿದ್ದ ಜಿ.ಎಚ್.‌ ನಾಯಕರು ಸಮಾಜದ ಯಾವುದೇ ಆಗುಹೋಗುಗಳ ಬಗ್ಗೆ ಅಷ್ಟೇ ನಿಷ್ಠುರವಾಗಿ ಪ್ರತಿಕ್ರಯಿಸುತ್ತಿದ್ದರು. ಕೋಮುವಾದ, ಮತಾಂಧತೆ ಮತ್ತು ಮೂಲಭೂತವಾದದ ವಿರುದ್ಧ ಮೈಸೂರಿನ ಸಾಂಸ್ಕೃತಿಕ ವಲಯದಲ್ಲಿ ಪ್ರಖರ ದನಿಯಾಗಿ ಗುರುತಿಸಿಕೊಂಡಿದ್ದರು.

ಅಡಿಗರ ಗೌರವ ಗ್ರಂಥ ಸಂವೇದನೆ , ಶ್ರೀ ರಾಮಾಯಣ ದರ್ಶನಂ ಕುವೆಂಪು ಸ್ವಹಸ್ತಾಕ್ಷರ ಪ್ರತಿ, ಶತಮಾನದ ಕನ್ನಡ ಸಾಹಿತ್ಯ 1, 2ನೇ ಸಂಪುಟಗಳಿಗೆ ಸಂಪಾದಕರೂ ಆಗಿ ಜಿ.ಎಚ್.ನಾಯಕ ಸೇವೆ ಸಲ್ಲಿಸಿದ್ದಾರೆ. ಅವರ ʼ ಉತ್ತರಾರ್ಧ ʼ ಕೃತಿಗೆ 2014ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದ ಜಿ.ಎಚ್.‌ ನಾಯಕರು ʼ ನಿರಪೇಕ್ಷ ʼ ಎಂಬ ವಿಮರ್ಶಾ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ  ಪಡೆದಿದ್ದರು. ʼ ನಿಜದನಿ ʼ ವಿಮರ್ಶಾ ಕೃತಿಗೆ ವಿ.ಎಂ. ಇನಾಂದಾರ ಸ್ಮಾರಕ ಬಹುಮಾನಕ್ಕೆ ಭಾಜನರಾಗಿದ್ದರು. ಬಹು ಪ್ರತಿಷ್ಠಿತ ಪಂಪ ಪ್ರಶಸ್ತಿಯೂ ಜಿ.ಎಚ್.‌ ನಾಯಕ್‌ ಅವರಿಗೆ ಒಲಿದುಬಂದಿತ್ತು.

ಜಿ.ಎಚ್‌ ನಾಯಕ್‌ ಅವರ ಕೃತಿಗಳು ಇಂತಿವೆ.

ಸಮಕಾಲೀನ (೧೯೭೩)

ಅನಿವಾರ್ಯ (೧೯೮೦)

ನಿರಪೇಕ್ಷೆ (೧೯೮೪)

ನಿಜದನಿ (೧೯೮೮)

ವಿನಯ ವಿಮರ್ಶೆ (೧೯೯೧)

ಸಕಾಲಿಕ (೧೯೯೫)

ಗುಣ ಗೌರವ (೨೦೦೨)

ಹರಿಶ್ಚಂದ್ರ ಕಾವ್ಯ ಓದು-ವಿಮರ್ಶೆ (೨೦೦೨)

ಕೃತಿ ಸಾಕ್ಷಿ (೨೦೦೬)

ಸ್ಥಿತಿ ಪ್ರಜ್ಞೆ (೨೦೦೭)

ಮತ್ತೆ ಮತ್ತೆ ಪಂಪ (೨೦೦೮)

ಸಾಹಿತ್ಯ ಸಮೀಕ್ಷೆ (೨೦೦೯)

ಉತ್ತರಾರ್ಧ (೨೦೧೧)

*ಸಂಪಾದನೆ*

ಕನ್ನಡ ಸಣ್ಣಕಥೆಗಳು

ಹೊಸಗನ್ನಡ ಕವಿತೆಗಳು

ಸಂವೇದನೆ (ಅಡಿಗರ ಗೌರವ ಗ್ರಂಥ)

ಶ್ರೀ ರಾಮಾಯಣ ದರ್ಶನಂ ಕುವೆಂಪು ಸ್ವಹಸ್ತಾಕ್ಷರ ಪ್ರತಿ

ಶತಮಾನದ ಕನ್ನಡ ಸಾಹಿತ್ಯ (ಸಂಪುಟ – ೧.೨)

ಆತ್ಮಕಥನ-

ಬಾಳು

ಇದೇ ವರ್ಷದ ಆರಂಭದಲ್ಲಿ ಹಿರಿಯ ಸಮಾಜವಾದಿ ಪ ಮಲ್ಲೇಶ್‌ ಅವರನ್ನು ಕಳೆದುಕೊಂಡ ಮೈಸೂರಿನ ಸಾಂಸ್ಕೃತಿಕ ಲೋಕ ಕಳೆದ ತಿಂಗಳು ಖ್ಯಾತ ಸಂವಿಧಾನ ತಜ್ಞ ಸಿ.ಕೆ.ಎನ್‌ ರಾಜಾ ಅವರ ಅಗಲಿಕೆಯನ್ನು ಸಹಿಸಿಕೊಳ್ಳಬೇಕಾಯಿತು. ಈ ಆಘಾತಗಳಿಂದ ಹೊರಬರುವಷ್ಟರಲ್ಲೇ ಮತ್ತೊಂದು ಸಾಂಸ್ಕೃತಿಕ ಕೊಂಡಿ ಅಗಲಿರುವುದು ಮೈಸೂರಿನ ಸಾಂಸ್ಕೃತಿಕ-ಸಾಹಿತ್ಯಕ ಹಾಗೂ ಪ್ರಗತಿಪರ ಹೋರಾಟಗಳ ಜಗತ್ತಿಗೆ ಅಪಾರ ಆಘಾತಕಾರಿ ವಿಷಯವಾಗಿದೆ.

ಅಗಲಿದ  ಹಿರಿಯ ಸಾಂಸ್ಕೃತಿಕ ಚಿಂತಕರಿಗೆ ಅಂತಿಮ ನಮನಗಳು.

 ನಾ ದಿವಾಕರ

Tags: Ankola taluk of Uttara KannadaCentralSahityaAkademiDue to illnessfamous writerFamousKannadacriticGHNayakGH Nayak is no moreGovindarayaHammannaNayakapassedawayKannadaliteraryliterary activitiesliteraryservicesMysoreprofessor G. H. NaikProfGHNayakasocialactivist
Previous Post

Congress won the election by illegal conduct : ಕಾಂಗ್ರೆಸ್ ಅಕ್ರಮ ನಡೆಸಿ ಚುನಾವಣೆ ಗೆದ್ದಿದೆ ; ಹೆಚ್.ಡಿಕೆ ನೇರ ಆರೋಪ

Next Post

Yasin Malik : ಜಮ್ಮು-ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸಿನ್‌ ಮಲಿಕ್‌ಗೆ ಗಲ್ಲು ಶಿಕ್ಷೆ ವಿಧಿಸಿ : ದೆಹಲಿ ಹೈಕೋರ್ಟ್‌ ಮೊರೆ ಹೋದ ಎನ್‌ಐಎ

Related Posts

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ಸಚಿವರು ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ...

Read moreDetails

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
Yasin Malik : ಜಮ್ಮು-ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸಿನ್‌ ಮಲಿಕ್‌ಗೆ ಗಲ್ಲು ಶಿಕ್ಷೆ ವಿಧಿಸಿ : ದೆಹಲಿ ಹೈಕೋರ್ಟ್‌ ಮೊರೆ ಹೋದ ಎನ್‌ಐಎ

Yasin Malik : ಜಮ್ಮು-ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸಿನ್‌ ಮಲಿಕ್‌ಗೆ ಗಲ್ಲು ಶಿಕ್ಷೆ ವಿಧಿಸಿ : ದೆಹಲಿ ಹೈಕೋರ್ಟ್‌ ಮೊರೆ ಹೋದ ಎನ್‌ಐಎ

Please login to join discussion

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada