• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

CM Siddaramaiah Cabinet : ಸಚಿವ ಸಂಪುಟದಲ್ಲಿ ಪ್ರಾದೇಶಿಕ, ಸಾಮಾಜಿಕ ನ್ಯಾಯ ಎತ್ತಿ ಹಿಡಿದ CM ಸಿದ್ದರಾಮಯ್ಯ

Any Mind by Any Mind
May 27, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
CM Siddaramaiah Cabinet : ಸಚಿವ ಸಂಪುಟದಲ್ಲಿ ಪ್ರಾದೇಶಿಕ, ಸಾಮಾಜಿಕ ನ್ಯಾಯ ಎತ್ತಿ ಹಿಡಿದ CM ಸಿದ್ದರಾಮಯ್ಯ
Share on WhatsAppShare on FacebookShare on Telegram

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಳೆದು-ತೂಗಿ ಸಚಿವ ಸ್ಥಾನಗಳನ್ನ ಪ್ರದೇಶವಾರು ಮತ್ತು ಸಮುದಾಯದ ಆಧಾರದಲ್ಲಿ ಹಂಚಿಕೆ ಮಾಡಿದ್ದಾರೆ. ಎಲ್ಲಾ ಸಮುದಾಯಗಳನ್ನ ವಿಶ್ವಾಸಕ್ಕೆ ತೆಗೆದುಕೊಂಡು ಸಚಿವ ಸ್ಥಾನಗಳನ್ನ ಹಂಚಿಕೆ ಮಾಡಿದ್ದಾರೆ. ಉತ್ತರ ಕರ್ನಾಟಕ, ಹಳೇ ಮೈಸೂರು ಭಾಗ ಮತ್ತು ಬೆಂಗಳೂರು ಸೇರಿದಂತೆ ಪ್ರದೇಶವಾರು ಸಚಿವ ಸ್ಥಾನ ಹಂಚಿಕೆ ಮಾಡಿದ್ದಾರೆ.

ADVERTISEMENT

ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರುಗಳನ್ನು ಸಚಿವ ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮತೋಲನ ಮೆರೆದಿದ್ದಾರೆ.

ಒಕ್ಕಲಿಗರಲ್ಲಿ ಗಂಗಟಕಾರ್ ಒಕ್ಕಲಿಗರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಚೆಲುವರಾಯಸ್ವಾಮಿ ಅವರುಗಳು ಇದ್ದಾರೆ. ಪಿರಿಯಾಪಟ್ಟಣ ವೆಂಕಟೇಶ್ ಕುಂಚಟಿಗರು, ದಾಸ ಒಕ್ಕಲಿಗರಲ್ಲಿ ಕೃಷ್ಣ ಬೈರೇಗೌಡ ಸೇರಿ ನಾಲ್ಕು ಮಂದಿಗೆ ಪ್ರಾತಿನಿಧ್ಯ ನೀಡಿದ್ದಾರೆ.

ಇನ್ನು ದಲಿತ ಸಮುದಾಯಕ್ಕೆ ಬರೋಬ್ಬರಿ 9 ಸಚಿವ ಸ್ಥಾನ ಲಭಿಸಿದೆ. ಕೆ.ಚ್.ಮುನಿಯಪ್ಪ, ಡಾ.ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ, ತಿಮ್ಮಾಪುರ ಮತ್ತು ಪ್ರಿಯಾಂಕ್ ಖರ್ಗೆ ಅವರುಗಳು ಪರಿಶಿಷ್ಟ ಜಾತಿ ಖೋಟಾದಲ್ಲಿ ಸಚಿವರಾಗಿದ್ದಾರೆ. ಎಡಗೈ ಮತ್ತು ಬಲಗೈ ಸಮುದಾಯಗಳನ್ನು ಸರಿದೂಗಿಸಲಾಗಿದೆ. ಪರಿಶಿಷ್ಟ ಪಂಗಡದ ಪ್ರತಿನಿಧಿಗಳಾಗಿ ನಾಗೇಂದ್ರ, ಮಧುಗಿರಿ ರಾಜಣ್ಣ, ಸತೀಶ್ ಜಾರಕಿಹೊಳಿ ಅವರಿಗೆ ಅವಕಾಶ ದೊರೆತಿದೆ. ವಿಧಾನ ಪರಿಷತ್ ಮುಖ್ಯ ಸಚೇತಕರಾಗಿರುವ ಪ್ರಕಾಶ್ ರಾಥೋಡ್ ಕೂಡ ಬಂಜಾರ ಸಮುದಾಯದವರು.

ಲಿಂಗಾಯತ ಸಮುದಾಯಕ್ಕೆ ಒಟ್ಟು ಏಳು ಸಚಿವ ಸ್ಥಾನ ನೀಡಲಾಗಿದೆ. ಲಿಂಗಾಯತ ಸಮುದಾಯದ ಬಹುತೇಕ ಎಲ್ಲಾ ಒಳಪಂಗಡಗಳನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಬಣಜಿಗರಲ್ಲಿ ಈಶ್ವರ್ ಖಂಡ್ರೆ, ಪಂಚಮಸಾಲಿಗಳಲ್ಲಿ ಲಕ್ಷ್ಮೀ ಹೆಬ್ಬಾಳ್‌ಕರ್ ಮತ್ತು ಶಿವಾನಂದ ಪಾಟೀಲ್, ಕುರು ಒಕ್ಕಲಿಗರಲ್ಲಿ ಎಂ.ಬಿ.ಪಾಟೀಲ್, ಸಾದ ಲಿಂಗಾಯತರಲ್ಲಿ ಎಸ್.ಎಸ್.ಮಲ್ಲಿಕಾರ್ಜುನ್, ಆದಿ ಬಣಜಿಗರಲ್ಲಿ ಶರಣ ಪ್ರಕಾಶ ಪಾಟೀಲ್ ರೆಡ್ಡಿಲಿಂಗಾಯತರಲ್ಲಿ ದರ್ಶನಾಪುರ ಮತ್ತು ವೈಷ್ಣವ ರೆಡ್ಡಿಯ ಪ್ರತಿನಿಧಿಯಾಗಿ ಹೆಚ್.ಕೆ.ಪಾಟೀಲ್ ಅವರಿಗೆ ಪ್ರಾತಿನಿಧ್ಯ ನೀಡಿದ್ದಾರೆ..

ಮುಸ್ಲಿಂ ಸಮುದಾಯದಿಂದ ಜಮೀರ್ ಅಹಮದ್ , ರಹೀಂ ಖಾನ್ ಇಬ್ಬರು ಸಚಿವರಾಗಿದ್ದರೆ, ಯು.ಟಿ.ಖಾದರ್ ಸ್ಪೀಕರ್ ಆಗಿದ್ದಾರೆ. ಕ್ರೈಸ್ತ ಸಮುದಾಯದಿಂದ ಕೆ.ಜೆ.ಜಾರ್ಜ್ ಅವರಿಗೆ ಸಚಿವ ಸ್ಥಾನ ಒಲಿದಿದೆ. ಜೈನ ಸಮುದಾಯದಿಂದ ಡಿ.ಸುಧಾಕರ್ ಹಾಗೂ ಬ್ರಾಹ್ಮಣ ಸಮುದಾಯದ ಪ್ರತಿನಿಧಿಯಾಗಿ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ದೊರಕಿದೆ.

ಹಿಂದುಳಿದ ಜಾತಿಗಳಲ್ಲಿ ಅತ್ಯಂತ ಸಣ್ಣ ಸಮುದಾಯ ರಾಜು ಕ್ಷತ್ರಿಯ ಸಮುದಾಯದ ಬೋಸರಾಜು, ಅತ್ಯಂತ ಸಣ್ಣ ಹಿಂದುಳಿದ ಸಮುದಾಯಗಳಲ್ಲಿ ಒಂದಾದ ಬೆಸ್ತ ಸಮುದಾಯದ ಮಾಂಕಾಳ ವೈದ್ಯ, ಮರಾಠ ಸಮಾಜದಿಂದ ಸಂತೋಷ್ ಲಾಡ್ ಇದ್ದಾರೆ. ಕುರುಬ ಸಮುದಾಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಟ್ಟರೆ ಬೈರತಿ ಸುರೇಶ್ ಅವರಿಗೆ ಮಾತ್ರ ಸಂಪುಟದೊಳಗೆ ಪ್ರವೇಶ ದೊರೆತಿದೆ. ಬಿಲ್ಲವ ಸಮುದಾಯದಿಂದ ಮಧು ಬಂಗಾರಪ್ಪ ಇದ್ದಾರೆ.

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೂ ಪ್ರಾತಿನಿಧ್ಯ ದೊರೆತಿದೆ. ಮಲೆನಾಡು, ಕರಾವಳಿ ಕರ್ನಾಟಕ ಮತ್ತು ಮೈಸೂರು ಕರ್ನಾಟಕ ಹಾಗೂ ಮಧ್ಯ ಕರ್ನಾಟಕಕ್ಕೆ ಸಿಕ್ಕಿರುವ ಪ್ರಾತಿನಿಧ್ಯ ಜಾತಿವಾರು ಲೆಕ್ಕಾಚಾರಗಳನ್ನೂ ಸರಿದೂಗಿಸಿದೆ.

ಹೀಗೆ ಜಾತಿ, ಉಪ ಜಾತಿಗಳನ್ನೂ ವೈಜ್ಞಾನಿಕವಾಗಿ ಪರಿಗಣಿಸಲಾಗಿದೆ. ಸಚಿವರ ಆಯ್ಕೆಯಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸುವಾಗ ಪ್ರಾದೇಶಿಕ ನ್ಯಾಯ ಸಮತೋಲನ ತಪ್ಪದಂತೆಯೂ ಎಚ್ಚರ ವಹಿಸಿರುವುದು ಸಿಎಂ ಸಿದ್ದರಾಮಯ್ಯ ಅವರ ಆಯ್ಕೆ ಸಮತೂಕದಲ್ಲಿದೆ ಎನ್ನುವುದಕ್ಕೆ ಸ್ಪಷ್ಟ ಉದಾಹರಣೆ.

ಹಿಂದಿನ ಬಿಜೆಪಿ ಅವಧಿಯಲ್ಲಿ ಬಿಜೆಪಿ ಜಾತಿವಾರು ಪ್ರಾತಿನಿಧ್ಯವನ್ನು ಕಡೆಗಣಿಸಿದ್ದ ಅಸಮಾಧಾನ ಹಲವು ಸಮುದಾಯಗಳಲ್ಲಿ ಹೆಪ್ಪುಗಟ್ಟಿತ್ತು. ಹಾಲಿ ಸಿದ್ದರಾಮಯ್ಯ ಅವರ ಆಯ್ಕೆ ಜಾತಿ ಲೆಕ್ಕಾಚಾರ ಮತ್ತು ಚುನಾಯಿತ ಶಾಸಕರ ಲೆಕ್ಕದಲ್ಲೂ ಸಾಮಾಜಿಕ ನ್ಯಾಯವನ್ನು ಕಾಪಾಡಿಕೊಂಡಿದೆ.

Tags: BJPbsbommaibyvijayendracabinet expansioncmsiddaramiahCongress PartydcmDKShivakumarKPCC presidentModiPMModisiddu cabinetಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

New Parliament building : ಹೊಸ ಸಂಸತ್‌ ಭವನದ ವಿಡಿಯೋ ಶೇರ್‌ ಮಾಡಿದ ಪ್ರಧಾನಿ ಮೋದಿ..!

Next Post

ಕಾಂಗ್ರೆಸ್‌ಗೆ ಗ್ಯಾರಂಟಿಯೇ ಸವಾಲು.. ಸಮಯವಿದೆ.. ಸಂಕಷ್ಟ ಗ್ಯಾರಂಟಿ..!

Related Posts

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
0

ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು *ಯೋಜನಾ ಪ್ರಾಧಿಕಾರದಿಂದ 30-40 ಮೀಟರ್ ರಸ್ತೆ...

Read moreDetails
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
Next Post
ಕಾಂಗ್ರೆಸ್‌ಗೆ ಗ್ಯಾರಂಟಿಯೇ ಸವಾಲು.. ಸಮಯವಿದೆ.. ಸಂಕಷ್ಟ ಗ್ಯಾರಂಟಿ..!

ಕಾಂಗ್ರೆಸ್‌ಗೆ ಗ್ಯಾರಂಟಿಯೇ ಸವಾಲು.. ಸಮಯವಿದೆ.. ಸಂಕಷ್ಟ ಗ್ಯಾರಂಟಿ..!

Please login to join discussion

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!