ಬೆಂಗಳೂರು: ಮೇ.27: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನರಿಗೆ ಭಾರಿ ನಿರೀಕ್ಷೆಗಳನ್ನ ಹುಟ್ಟಿಸಿದ್ದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನರ ನಿರೀಕ್ಷೆಗಳನ್ನ ಹುಸಿಗೊಳಿಸಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ನವರು ರಾಜ್ಯದ ಜನರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದ್ದಾರೆ. ನೀವು ಘೋಷಿಸಿರುವ ಗ್ಯಾರಂಟಿಗಳನ್ನ ಈಡೇರಿಸುತ್ತದೆ ಎಂದು ಜನರು ಕಾಯುತ್ತಿದ್ದಾರೆ. ಜನರ ಆಸೆಗಳನ್ನ ಹುಸಿಗೊಳಿಸಬೇಡಿ ಎಂದು ಕಾಂಗ್ರೆಸ್ ಗೆ ವಿಜಯೇಂದ್ರ ಸಲಗೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಗ್ಯಾರಂಟಿಗಳನ್ನ ಅನುಷ್ಟಾನ ಮಾಡುವುದಾಗಿ ಕಾಂಗ್ರೆಸ್ ಭರಸವೆ ನೀಡಿತ್ತು. ಆದ್ರೆ ಇದೀಗ ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯಾದ್ಯಂತ ಜನರಲ್ಲಿ ಗೊಂದಲ ಉಂಟಾಗಿದೆ. ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಶಾಸಕ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.


ದ್ವೇಷ ರಾಜಕಾರಣದ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ನಡೆಸುತ್ತಿದೆ. ಮಾಜಿ ಸಚಿವ ಅಶ್ವತ್ಥನಾರಾಯಣ್ ಹಾಗೂ ಶಾಸಕ ಹರೀಶ್ ಪೂಂಜಾ ವಿರುದ್ದ ಎಫ್ಐ ಆರ್ ದಾಖಲಾಗಿದೆ. ಪ್ರವೀಣ್ ನೆಟ್ಟಾರ್ ಅವರ ಪತ್ನಿಗೆ ಅನುಕಂಪದ ಆಧಾರದ ಮೇಲೆ ಬಿಜೆಪಿ ಸರ್ಕಾರ ನೀಡಿದ್ದ ಕೆಲಸವನ್ನು ಕಿತ್ತುಕೊಂಡಿದ್ದಾರೆ. ಇಷ್ಟು ಕೀಳು ಮಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಳಿಯುತ್ತದೆ ಎಂಬ ನೀರಿಕ್ಷೆ ಮಾಡಿರಲಿಲ್ಲ. ಬರುವಂತಹ ದಿನಗಳಲ್ಲಿ ಈ ಬಗ್ಗೆ ಎಲ್ಲವನ್ನೂ ಬಿಜೆಪಿ ಪ್ರಶ್ನೆ ಮಾಡುತ್ತೇವೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಅವರು ಹೇಳಿದರು.