ಬೆಂಗಳೂರು : ಸಿದ್ದರಾಮಯ್ಯ ಸರ್ಕಾರದಲ್ಲಿ ಪೂರ್ಣ ಪ್ರಮಾಣದ ಸಂಪುಟ ಇಂದು ರಚನೆಯಾಗಿದೆ. ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಚಿವರು ಯಾವ ಖಾತೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ. ಈ ಎಲ್ಲದರ ನಡುವೆ ಖಾತೆ ಹಂಚಿಕೆಯ ಆದೇಶ ಪ್ರತಿಯೊಂದು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.
ಈ ವಿಚಾರವಾಗಿ ಇದಿಗ ಸ್ವತಃ ಕೆಪಿಸಿಸಿ ಕಚೇರಿಯಿಂದ ಸ್ಪಷ್ಟನೆ ಹೊರಬಿದ್ದಿದೆ. ಇನ್ನೂ ಯಾವ ಸಚಿವರಿಗೂ ಖಾತೆ ಹಂಚಿಕೆಯಾಗಿಲ್ಲ ಎಂದು ಕೆಪಿಸಿಸಿ ಅಧಿಕೃತವಾಗಿ ತಿಳಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ.ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ.ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ಕೆಪಿಸಿಸಿ ಹೇಳಿದೆ.