ದೆಹಲಿಯ ಜಂತರ್ ಮಂತರ್ (Jantar Mantar) ನಲ್ಲಿ ನ್ಯಾಯಕ್ಕಾಗಿ ಒತ್ತಾಯಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಪರ ಧ್ವನಿ ಎತ್ತಿರುವ ಸಿಎಂ ಸಿದ್ದರಾಮಯ್ಯ (CM Siddaramaiah) ಸರಣಿ ಟ್ವೀಟ್ (tweets) ಮಾಡುವ ಮೂಲಕ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು (central government) ತರಾಟೆಗೆ ತೆಗೆದುಕೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟ್ವೀಟ್ ಸಾರಾಂಶ..!

ಲೈಂಗಿಕ ದೌರ್ಜನ್ಯ (sexual assault) ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಡುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು (police) ಬಂಧಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ. ತಕ್ಷಣ ಬಂಧಿತ ಮಹಿಳಾ ಕುಸ್ತಿಪಟುಗಳನ್ನು ಬಿಡುಗಡೆಗೊಳಿಸಬೇಕು. ಎಂದು ಪ್ರಧಾನಿ ನರೇಂದ್ರ ಮೋದಿ (rime Minister Narendra Modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ (Union Home Minister Amit Shah) ಅವರನ್ನ ಒತ್ತಾಯಿಸಿದ್ದಾರೆ.

ನೂತನ ಸಂಸತ್ ಭವನದ (new Parliament House) ಉದ್ಘಾಟನೆಯನ್ನು ಪ್ರಜಾಪ್ರಭುತ್ವದ ಹಬ್ಬ ಎಂಬಂತೆ ಸಂಭ್ರಮಿಸುತ್ತಿರುವ ಪ್ರಧಾನಿ ಮೋದಿ ಸರ್ಕಾರ, ಅಲ್ಲಿಂದ ಕೂಗಳತೆಯ ದೂರದಲ್ಲಿ ಧರಣಿ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಜಾಸತ್ತಾತ್ಮಕ ಹಕ್ಕನ್ನು ಪೊಲೀಸರ (POLICE) ಮೂಲಕ ಹತ್ತಿಕ್ಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ.

ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ಲೈಂಗಿಕ ದೌರ್ಜನ್ಯದ ಆರೋಪಕ್ಕೊಳಗಾಗಿರುವ ಭಾರತೀಯ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ (BJP MP) ಬೃಜಭೂಷಣ್ ಸಿಂಗ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿ, ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು . ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ.