• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Karnataka State Govt Employees : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 4ರಷ್ಟು ಹೆಚ್ಚಳ

Any Mind by Any Mind
May 30, 2023
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
Karnataka State Govt Employees : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 4ರಷ್ಟು ಹೆಚ್ಚಳ
Share on WhatsAppShare on FacebookShare on Telegram

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ ಕೊಟ್ಟಿದೆ. ಹೌದು, ರಾಜ್ಯ ಸರ್ಕಾರಿ ನೌಕರರಿಗೆ (Karnataka Govt Employees) ನೂತನ ಕಾಂಗ್ರೆಸ್ ಸರ್ಕಾರ ತುಟ್ಟಿಭತ್ಯೆಯನ್ನು ಶೇ.೪ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ.

ADVERTISEMENT

ಈ ಮೂಲಕ ಸಿಎಂ ಸಿದ್ದರಾಮಯ್ಯ (cmsiddaramaiah) , ಡಿಸಿಎಂ ಡಿಕೆ ಶಿವಕುಮಾರ್‌ (DCM DKShivakumar) ನೇತೃತ್ವದ ಕಾಂಗ್ರೆಸ್‌ ಸರ್ಕಾರ (congress) ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಸರ್ಕಾರಿ ನೌಕರರಿ ಗುಡ್‌ ನ್ಯೂಸ್‌ ನೀಡಿದೆ. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ 2023ರ ಜನವರಿ 1ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಶೇಕಡ 35ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ರಾಜ್ಯ ಸರ್ಕಾರದ ಆದೇಶದಲ್ಲಿ ತಿಳಿಸಿದೆ.

ಪರಿಷ್ಕೃತ ತುಟ್ಟಿ ಭತ್ಯೆ (Dearness Allowance) 2023ರ ಜನವರಿ 1ರಿಂದಲೇ ಪೂರ್ವಾನ್ವಯವಾಗಲಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ಸರ್ಕಾರಿ ನೌಕರರಿಗೆ 2023ರ ಜನವರಿ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಹೆಚ್ಚಿಸಲಾಗಿದೆ. ಈ ಮೂಲ ವೇತನದ ಶೇ.31 ರಿಂದ ಶೇಕಡ 35ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ಸೂಚಿಸಲಾಗಿದೆ ಎಂದು ಆರ್ಥಿಕ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಯುಜಿಸಿ / ಎಐಸಿಟಿಇ / ಐಸಿಎಆರ್‌ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಹಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್‌ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಶಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ ಎಂದು ಸರ್ಕಾರ ತಿಳಿಸಿದೆ

ತುಟ್ಟಿಭತ್ಯೆಯ ಉದ್ದೇಶಕ್ಕಾಗಿ ಮೂಲ ವೇತನ ಮತ್ತು ಅದರಲ್ಲಿ ಸ್ಥಗಿತ ವೇತನ ಬಡ್ತಿ, ಇತರೆ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ ಅದು, ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ನೀಡಲಾಗಿದ್ದಲ್ಲಿ ಅವುಗಳು ಸೇರಿರುತ್ತವೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Tags: Accumulated FundAllowance Rs. 4 percent increaseCM SiddaramaiahCongress GovernmentDCM DK Shivakumardearness allowance to 35 per centgovt employeesincrease the dearness allowance by 4%Karnataka Govt EmployeesKarnataka State Govt Employees
Previous Post

Congress Guarantee | ಬಹು ಬೇಡಿಕೆಯ ಗ್ಯಾರಂಟಿ ನಾಳೆ ಫೈನಲ್, ಗುರುವಾರದಿಂದಲೇ ಗ್ಯಾರಂಟಿ..!

Next Post

Water Resources Department : ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಖಡಕ್ ‌ಸೂಚನೆ

Related Posts

ಪತಿಯ ಶವದ ಜೊತೆಗೆ 10 ದಿನ ಕಳೆದ ಪತ್ನಿ: ಚಿಕ್ಕಮಗಳೂರಿನಲ್ಲಿ ಮನಕಲುಕುವ ಘಟನೆ
Top Story

ಪತಿಯ ಶವದ ಜೊತೆಗೆ 10 ದಿನ ಕಳೆದ ಪತ್ನಿ: ಚಿಕ್ಕಮಗಳೂರಿನಲ್ಲಿ ಮನಕಲುಕುವ ಘಟನೆ

by ಪ್ರತಿಧ್ವನಿ
April 9, 2026
0

ಚಿಕ್ಕಮಗಳೂರು: ಜಿಲ್ಲೆಯ ಬಣಕಲ್ ಪ್ರದೇಶದಲ್ಲಿ ಮಾನವೀಯತೆ ಕಲುಕುವ ಘಟನೆ ಬೆಳಕಿಗೆ ಬಂದಿದೆ. ವೃದ್ಧನೊಬ್ಬರು ಮೃತಪಟ್ಟ ಬಳಿಕ, ಅವರ ಮಾನಸಿಕ ಅಸ್ವಸ್ಥ ಪತ್ನಿ ಸುಮಾರು 10 ದಿನಗಳ ಕಾಲ...

Read moreDetails
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

April 7, 2026
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

April 7, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

April 6, 2026
Next Post
Water Resources Department : ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ  ಡಿಸಿಎಂ ಡಿಕೆಶಿ ಖಡಕ್ ‌ಸೂಚನೆ

Water Resources Department : ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಖಡಕ್ ‌ಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada