ನವದೆಹಲಿ :ಮೇ.31: ಕುಸ್ತಿಪಟುಗಳ ಪ್ರತಿಭಟನೆ ಕುರಿತಂತೆ ನಾಳೆ ಮುಜಾಫರ್‌ನಗರದ ಸೊರಮ್ ಗ್ರಾಮದಲ್ಲಿ ‘ಮಹಾ ಪಂಚಾಯತ್’ ನಡೆಸಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ನರೇಶ್ ಟಿಕಾಯತ್ ಹೇಳಿದ್ದಾರೆ.
![](https://pratidhvani.com/wp-content/uploads/2023/05/ದದ್ಗಗ.png)
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹಲವಾರು ದಿನಗಳಿಂದ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
![](https://pratidhvani.com/wp-content/uploads/2023/05/fsfssf.png)
![](https://pratidhvani.com/wp-content/uploads/2023/05/FvOJxChaMAAzTDo-1024x821.jpg)
ಮಹಿಳಾ ಕುಸ್ತಿ ಪಟುಗಳ ಬೆಂಬಲಕ್ಕೆ ರೈತ ಮುಂಡರು, ಸಂಘಟನೆಗಳು ಬೆಂಬಲಿಸಿವೆ. ಲೈಂಗಿಕ ಕಿರುಕುಳ ಆರೋಪದ ಮೇಲೆ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆ ಕುರಿತು ಚರ್ಚಿಸಲು ಮುಜಾಫರ್‌ನಗರದ ಸೊರಮ್ ಗ್ರಾಮದಲ್ಲಿ ನಾಳೆ ‘ಮಹಾಪಂಚಾಯತ್’ ನಡೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ನರೇಶ್ ಟಿಕಾಯತ್ ಇಂದು ಹೇಳಿದ್ದಾರೆ.
![](https://pratidhvani.com/wp-content/uploads/2023/05/FuyIeZMaMAAUzft-1024x461.jpg)
![](https://pratidhvani.com/wp-content/uploads/2023/05/ಗದದ್ಗ.png)
ಈ ವಿಚಾರವಾಗಿ ಮಹಾ ಪಂಚಾಯತ್‌ನಲ್ಲಿ ದೀರ್ಘವಾಗಿ ಚರ್ಚೆ ನಡೆಸಲಾಗುವುದು. ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ದೆಹಲಿ, ರಾಜಸ್ಥಾನಗಳಿಂದ ಹಿರಿಯ ಖಾಪ್‌ಗಳು ಮಹಾ ಪಂಚಾಯತ್‌ನಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಟಿಕಾಯತ್ ಹೇಳಿದರು.