ಕೋಲ್ಕತ್ತಾ : ಜೂನ್. 1: ಕುಸ್ತಿಪಟುಗಳ ಪ್ರತಿಭಟನೆಯ ತೀವ್ರತೆ ದಿನೆದಿನೇ ಹೆಚ್ಚಾಗುತ್ತಲೇ ಇದ್ದು, ನಿಮ್ಮ ಬೆಂಬಲಕ್ಕೆ ನಾವಿದ್ದೇನೆ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮಹಾತ್ಮಗಾಂಧಿ ಪ್ರತಿಮೆ ಎದುರು ಕ್ಯಾಂಡಲ್ ಹಚ್ಚುವ ಮೂಲಕ ನಿಮ್ಮ ಪರವಾಗಿ ಧ್ವನಿ ಎತ್ತುತ್ತೇವೆ ಎಂದು ಕೋಲ್ಕತ್ತಾದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

ಈ ಹಿಂದೆ ಕ್ರಿಕೆಟಿಗ ಅನಿಲ್ ಕುಂಬ್ಳೆ, ನಟ ಚೇತನ್, ರೈತರ ಸಂಘಟನೆಗಳು ಸೇರಿದಂತೆ ದೇಶಾದ್ಯಂತ ಹಲವು ಸಂಘಟನೆಗಳು ರಾಜಕೀಯ ಮುಖಂಡರು ಕುಸ್ತಿಪಟುಗಳ ಬೆಂಬಲವಾಗಿ ನಿಂತಿದ್ದರು.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹಲವಾರು ದಿನಗಳಿಂದ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ