ಮಂಗಳೂರು : ಮಂಗಳೂರು ಹೊರವಲಯದ ಸೋಮೇಶ್ವರ ಬೀಚ್ನಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದೆ. ಬೀಚ್ನಲ್ಲಿ ಹಿಂದೂ ವಿದ್ಯಾರ್ಥಿನಿಯರ ಜೊತೆಯಿದ್ದ ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ. ಹಲ್ಲೆಯಲ್ಲಿ ಗಾಯಗೊಂಡ ಮೂವರು ಮುಸ್ಲಿಂ ವಿದ್ಯಾರ್ಥಿಗಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮುಸ್ಲಿಂ ವಿದ್ಯಾರ್ಥಿಗಳು ಕೇರಳದ ಕಣ್ಣೂರಿಗೆ ಸೇರಿದವರಾಗಿದ್ದರೆ ಹಿಂದೂ ವಿದ್ಯಾರ್ಥಿನಿಯರು ಕಾಸರಗೋಡಿನವರು ಎನ್ನಲಾಗಿದೆ. ಈ ಘಟನೆ ಬಳಿಕ ಹಿಂದೂ ವಿದ್ಯಾರ್ಥಿನಿಯರು ಮನೆಗೆ ಮರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಎಲ್ಲಾ ವಿದ್ಯಾರ್ಥಿಗಳು ಮಂಗಳೂರು ನಗರದ ಖಾಸಗಿ ಶಿಕ್ಷಣ ಸಂಸ್ಥೆಗೆ ಸೇರಿದವರಾಗಿದ್ದಾರೆ.
ಇನ್ನು ಈ ಘಟನೆ ಸಂಬಂಧ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.