ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಕಾನೂನಾತ್ಮಕವಾಗಿ ಒಂದಲ್ಲ ಒಂದು ರೀತಿಯ ಕಂಟಕಗಳು ಅವರನ್ನು ಹುಡುಕಿಕೊಂಡು ಬರುತ್ತಲೇ ಇರುತ್ತವೆ. ಆದರೆ ಯಾವುದೇ ಖಂಡಗಳು ಬಂದ್ರೂ ಯಾವುದೇ ಸಮಸ್ಯೆಗಳು ಬಂದರೂ ಅವುಗಳನ್ನು ಯಶಸ್ವಿಯಾಗಿ ನಿಭಾಯಿಸಿ ಮುನ್ನುಗುವುದು ಡಿ.ಕೆ ಶಿವಕುಮಾರ್ ಅವರ ಗುಣ, ಇದೀಗ ಅಂತದೇ ಒಂದು ಬಹುದೊಡ್ಡ ಸಮಸ್ಯೆಯಿಂದ ಡಿ.ಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೌದು.. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧ ಪಟ್ಟ ಹಾಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಗೆ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಮತ್ತೆ ವಿಸ್ತರಣೆ ಮಾಡಿ ಇಂದು ಆದೇಶವನ್ನ ಹೊರಡಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಎರಡನೇ ಬಾರಿಗೆ ಹೈಕೋರ್ಟ್ ಮೇ ಅಂತ್ಯದವರೆಗೂ ತಡೆಯಾಜ್ಞೆ ನೀಡಿತ್ತು. ಇದೀಗ ಮತ್ತೆ ತಡೆಯಾಜ್ಞೆ ವಿಸ್ತರಿಸಿದ್ದು, ಡಿ.ಕೆ ಶಿವಕುಮಾರ್ ಸದ್ಯಕ್ಕೆ ನಿಟ್ಟುಸಿರು ಬಿಡುವಂತಾಗಿದೆ. ಅಷ್ಟಕ್ಕೂ ಈ ಪ್ರಕರಣದಿಂದ ಡಿಕೆ ಶಿವಕುಮಾರ್ ಅವರಿಗೆ ಹೇಗೆ ರಿಲೀಫ್ ಸಿಗುತ್ತೆ ಅನ್ನುವ ಅನುಮಾನ ಸಾಕಷ್ಟು ಜನರಲ್ಲಿ ಮೂಡಬಹುದು ಅದಕ್ಕೆ ಈ ಪ್ರಕರಣದ ಬಗ್ಗೆ ತಿಳಿದುಕೊಳ್ಳಲು ಬಹಳ ಮುಖ್ಯ ಆಗುತ್ತೆ. ಅಷ್ಟಕ್ಕೂ ಇಲ್ಲಿ ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಲಂ 13(2), 13(1)ಇ ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು.
ಈ ಪ್ರಕರಣವನ್ನ ರದ್ದು ಮಾಡಬೇಕು ಅಂತ ಕೋರಿ ಡಿ.ಕೆ ಶಿವಕುಮಾರ್ ಹೈಕೋರ್ಟ್ ಮೊರೆ ಹೋಗಿದ್ರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹುಚ್ಚ ನ್ಯಾಯಾಲಯ, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆಯನ್ನ ನೀಡಿತ್ತು. ಇದೇ ತಡೆಯಾಜ್ಞೆ ಇಂದಿನವರೆಗೂ ಕೂಡ ವಿಸ್ತರಣೆಯಾಗುತ್ತಾ ಬಂದಿದೆ. ಇದೀಗ ಈ ತಡೆಯತ್ತೆಯನ್ನ ತೆರವು ಮಾಡುವಂತೆ ಸಿಬಿಐ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಆದ್ರೆ, ಸುಪ್ರೀಂಕೋರ್ಟ್, ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಮಾಡಿ ಮಧ್ಯಂತರ ಆದೇಶ ನೀಡಲು ನಿರಾಕರಿಸಿತ್ತು. ಅಲ್ಲದೆ, ತಡೆಯಾಜ್ಞೆ ತೆರವಿಗೆ ಹೈಕೋರ್ಟ್ ನಲ್ಲೇ ಅರ್ಜಿ ಸಲ್ಲಿಸಬಹುದು ಅಂತ ಹೇಳಿ ಮುಂದಿನ ವಿಚಾರಣೆಯನ್ನು ಜುಲೈ ತಿಂಗಳಿಗೆ ಮುಂದೂಡಿ ಆದೇಶ ಹೊರಡಿಸಿತ್ತು.
ಹೀಗಾಗಿ ಈ ಪ್ರಕರಣದಿಂದ ಸದ್ಯದ ಮಟ್ಟಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕೊಂಚ ರಿಲೀಫ್ ಸಿಕ್ಕಿದೆ ಆದರೆ ಈ ವಿಸ್ತರಣೆ ಮುಗಿದ ಬಳಿಕ ಯಾವೆಲ್ಲ ಬೆಳವಣಿಗೆಗಳು ನಡೆಯಲಿವೆ ಅನ್ನೋದನ್ನ ಕಾದು ನೋಡಬೇಕಾಗಿದೆ