ನವದೆಹಲಿ: ಕೇಂದ್ರ ಕ್ರೀಡಾ ಸಚಿವ ಅನುರಾಗ್ ನಿವಾಸಕ್ಕೆ ಪ್ರತಿಭಟನಾ ನಿರತ ಕುಸ್ತಿಪಟುಗಳು ಆಗಮಿಸಿದ್ದಾರೆ. ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತ ಕುಸ್ತಿ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಹಲವು ದಿನಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದಾರೆ. ಆದ್ರೆ ಇಂದು ಮಹಿಳಾ ಕುಸ್ತಿಪಟುಗಳನ್ನ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಭೇಟಿಗೆ ಮಾಡುವಂತೆ ತಿಳಿಸಿದ್ದರು. ಹೀಗಾಗಿ ಪ್ರತಿಭಟನೆಯ ನೇತೃತ್ವ ವಹಿಸಿರುವ ಪದಕ ವಿಜೇತ ಕುಸ್ತಿಪಟುಗಳಾದ ಭಜರಂಗ್ ಪೂನಿಯಾ ಮತ್ತು ಸಾಕ್ಷಿ ಮಲ್ಲಿಕ್ ಸೇರಿದಂತೆ ಹಲವರು ಇಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿದ್ದಾರೆ.
ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದ ಅನುರಾಗ್ ಠಾಕೂರ್ ಅವರು, ಮಾತುಕತೆಗೆ ಕುಸ್ತಿಪಟುಗಳಿಗೆ ಆಹ್ವಾನ ನೀಡಿದ್ದರು. ಕ್ರೀಡಾ ಸಚಿವ ಆಹ್ವಾನ ಬೆನ್ನಲ್ಲೇ ಇದೀಗ ಭಜರಂಗ್ ಪೂನಿಯಾ ಮತ್ತು ಸಾಕ್ಷಿ ಮಲ್ಲಿಕ್ ಅವರು, ಅನುರಾಗ್ ಠಾಕೂರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.