ರಾಜ್ಯದಲ್ಲಿ ಈಗಾಗಲೇ ವಿಧಾನಸಭೆ ಚುನಾವಣೆ ನಡೆದು ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ ಹೀಗಾಗಿ ಇದೀಗ ರಾಜ್ಯ ನಾಯಕರ ಕಣ್ಣು ಮುಂದಿನ 2024ರ ಲೋಕಸಭೆ ಚುನಾವಣೆಯ ಮೇಲೆ ನೆಟ್ಟಿದೆ, ಹೀಗಾಗಿ ಈ ಬಾರಿ ಟಿಕೆಟ್ನಿಂದ ವಂಚಿತಗೊಂಡ ಬಹುತೇಕ ಕಾಂಗ್ರೆಸ್ ನಾಯಕರು, ಲೋಕಸಭೆ ಟಿಕೆಟ್ಗಾಗಿ ಲಾಭಿ ನಡೆಸಲು ಪ್ರಾರಂಭಿಸಿದ್ದಾರೆ ಎನ್ನಲಾಗುತ್ತಿದೆ.
ಆದರೆ ಇದರ ನಡುವೆ ಇದೀಗ ವಿಧಾನ ಪರಿಷತ್ ಚುನಾವಣೆ ಕೂಡ ನಡೆಯಲಿದೆ ಹೀಗಾಗಿ ವಿಧಾನಪರಿಷತ್ ಟಿಕೆಟ್ ಮೇಲೆ ಕಾಂಗ್ರೆಸ್ನ ಪ್ರಮುಖ ನಾಯಕರ ಕಣ್ಣು ಬಿದ್ದಿದೆ. ಹೌದು..2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನಲೆ ಬಿಜೆಪಿ ಸದಸ್ಯರ ರಾಜೀನಾಮೆಯಿಂದ ತೆರವಾದ ಮೂರು ವಿಧಾನ ಪರಿಷತ್ ಸದಸ್ಯ ಸ್ಥಾನಗಳಿಗೆ ಜೂನ್ 30ರಂದು ಚುನಾವಣೆ ನಡೆಯಲಿದೆ.
ಹೀಗಾಗಿ ಈಗಾಗಲೇ ಕಾಂಗ್ರೆಸ್ನಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕಾಗಿ ಭಾರೀ ಪೈಪೋಟಿ ಶುರುವಾಗಿದೆ ಎಂಬ ಮಾಹಿತಿ ಲಭ್ಯವಾಗ್ತಾ ಇದೆ, ಹೇಗಾದ್ರೂ ಮಾಡಿ ಎಂಎಲ್ಸಿ ಟಿಕೆಟ್ ಗಿಟ್ಟಿಸಿಕೊಳ್ಳಬೇಕು ಅಂತ ಸಾಕಷ್ಟು ಜನ ಕೈ ನಾಯರು ಪ್ರಯತ್ನವನ್ನ ಮಾಡ್ತಾ ಇದ್ದಾರೆ, ವಿಧಾನಸಭೆ ಚುನಾವಣೆಯ ಟಿಕೆಟ್ ವಂಚಿತರು, ಹಿರಿಯ ನಾಯಕರು, ಮಹಿಳಾ ನಾಯಕಿಯರು ಈ ಭಾರೀ ಲಾಬಿಯಲ್ಲಿ ತೊಡಗಿದ್ದಾರೆ.
ಇನ್ನೂ ಈಗಾಗಲೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕಾಗಿ ಹೈಕಮಾಂಡ್ ಮೂಲಕವೂ ಲಾಬಿಯನ್ನ ನಡೆಸಿದ್ದು, ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಎಂಬುದು ಕುತೂಹಲ ಮೂಡಿಸಿದೆ. ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಚುನಾವಣೆ ನಡೆಯಲಿದ್ದು, ಮೂರು ಸ್ಥಾನಗಳು ಆಡಳಿತ ಪಕ್ಷ ಕಾಂಗ್ರೆಸ್ ನ ಪಾಲಾಗಲಿರೋದು ಬಹುತೇಕ ಖಚಿತವಾಗಿದೆ
ಒಟ್ಟಾರೆಯಾಗಿ ಇದೀಗ ವಿಧಾನ ಪರಿಷತ್ ಟಿಕೆಟಿಗೆ ಕಾಂಗ್ರೆಸ್ನ ಒಳಗೆ ಬಹಳ ದೊಡ್ಡ ಮಟ್ಟದಲ್ಲಿ ಲಾಭಿ ನಡಿತಾ ಇರೋದು ಸುಳ್ಳಲ್ಲ ಹಾಗಾಗಿ ಇದನ್ನ ಯಾವ ರೀತಿಯಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ನಿಭಾಯಿಸಲಿದ್ದಾರೆ ಅನ್ನೋದನ್ನ ಕಾದು ನೋಡಬೇಕಾಗಿದೆ