ಬೆಂಗಳೂರು : ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ಜಲಜೀವನ್ ಮಿಷನ್ ಅನುಷ್ಠಾನ ಹಾಗೂ ಇಂದಿರಾ ಕ್ಯಾಂಟೀನ್ ಕುರಿತ ಚರ್ಚೆಗಾಗಿ ಇಂದು ಸಿಎಂ ಸಿದ್ದರಾಮಯ್ಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ

ಇಂದು ಬೆಳಗ್ಗೆ 11 ಗಂಟೆಗೆ ಜಲಜೀವನ್ ಮಿಷನ್ ಕುರಿತಂತೆ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ 8 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಯಲ್ಲಿ ಸಿದ್ದರಾಮಯ್ಯ ಚರ್ಚೆ ನಡೆಸಲಿದ್ದಾರೆ.
ಇನ್ನು ಮಧ್ಯಾಹ್ನ 1 ಗಂಟೆಯಿಂದ ಇಂದಿರಾ ಕ್ಯಾಂಟೀನ್ ಸಂಬಂಧ ಹಿರಿಯ ಅಧಿಕಾರಿಗಳ ಜೊತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.