• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜನಾರ್ದನ ರೆಡ್ಡಿ ದಂಪತಿಗೆ ಮಹಾ ಸಂಕಷ್ಟ!

Any Mind by Any Mind
June 13, 2023
in ಕರ್ನಾಟಕ
0
ಜನಾರ್ದನ ರೆಡ್ಡಿ ದಂಪತಿಗೆ ಮಹಾ ಸಂಕಷ್ಟ!
Share on WhatsAppShare on FacebookShare on Telegram

ಶಾಸಕ ಜಮಾರ್ದನ ರೆಡ್ಡಿ ( Janardhan Reddy ) ಮತ್ತೆ ರಾಜ್ಯ ರಾಜಕಾರಣಕ್ಕೆ‌ ಬಂದು ದೊಡ್ಡ‌ ಮಟ್ಟದ ಸಂಚಲನ ಮೂಡಿಸೋದಕ್ಕೆ ಸಿದ್ದವಾಗುತ್ತಿರುವಾಗ್ಲೆ, ಈಗ ಗಾಲಿ ಜನಾರ್ದನ ರೆಡ್ಡಿಗೆ ಹೊಸ ಸಂಕಷ್ಟವೊಂದು ಹುಡುಕಿಕೊಂಡು ಬಂದಿದೆ. ಹೌದು ಶಾಸಕ ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿ ( Lakshmi Aruna Reddy ) ಅವರ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ( CBI ) ವಿಶೇಷ ಕೋರ್ಟ್​ ಆದೇಶ ಹೊರಡಿಸಿದೆ.

ADVERTISEMENT

ಹೌದು, ಜನಾರ್ದನ ರೆಡ್ಡಿ ಅವರ ವಿರುದ್ಧ ಇರುವ ಕ್ರಿಮಿನಲ್ ಕೇಸ್ ಮುಗಿಯುವವರೆಗೆ, ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಈಗ ಆದೇಶವನ್ನ ಹೊರಡಿಸಿದೆ. ಇದರಿಂದ ಈಗ ಜನಾರ್ದನ ರೆಡ್ಡಿ ದಂಪತಿ ವಿವಿಧ‌ ಸಂಕಷ್ಟಗಳಿಗೆ ಸಿಲುಕಿಕೊಂಡಿದ್ದಾರೆ. ಇದೀಗ ಜನರ್ದಾನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳ ಜಪ್ತಿ ಮಾಡಲು ಅನುಮತಿ ನೀಡುವಂತೆ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದೀಗ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿಯಲ್ಲಿ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ. ಇದು ಈಗ ಎಂಎಲ್ಎ ಜನಾರ್ದನ ರೆಡ್ಡಿ ಅವರಿಗಡ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಕಳೆ‌ದ ವರ್ಷ ಆಗಸ್ಟ್ ತಿಂಗಳಲ್ಲಿ ಸಿಬಿಐ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿರುವ ಜನಾರ್ದನ ರೆಡ್ಡಿ ಅವರಿಗೆ ಸೇರಿದ ಆಸ್ತಿಯನ್ನ ಜಪ್ತಿ ಮಾಡಲು ಅನುಮತಿ ಕೇಳಿತ್ತು. ಆದರೆ ಆ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಅಂದಿನ ಬಿಜೆಪಿ ಸರ್ಕಾರ ಅನುಮತಿ ನೀಡದ ಹಿನ್ನೆಲೆ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ 5 ತಿಂಗಳಾದರೂ ಸರ್ಕಾರ ಏಕೆ ನಿರ್ಧಾರ ಕೈಗೊಂಡಿಲ್ಲ. ನಿಮ್ಮ ದೃಷ್ಟಿಯಲ್ಲಿ ನಿರ್ಧಾರ ಕೈಗೊಳ್ಳದಿರುವುದೂ ಇಂದು ಕ್ರಮವಿರಬಹುದು. ಆದರೆ ಇದನ್ನು ಕೋರ್ಟ್ ಒಪ್ಪಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿತ್ತು. ಇದಾದ ಬಳಿಕ ಸರ್ಕಾರದ ಪ್ರತಿಕ್ರಿಯೆ ತಿಳಿಸಲು ರಾಜ್ಯ ಸರ್ಕಾರಕ್ಕೆ ಸೂಚನೆ ಕೊಟ್ಟಿತ್ತು. ಇದರ ಬೆನ್ನಲ್ಲೇ ರಾಜ್ಯ ಗೃಹ ಇಲಾಖೆ ಜನಾರ್ದನ್​ ರೆಡ್ಡಿ ಆಸ್ತಿ ಜಪ್ತಿ ಪ್ರಕ್ರಿಯೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು

ಇನ್ನು ಆಸ್ತಿ ಜಪ್ತಿಯ ಬಗ್ಗೆ ಜನರಲ್ ರೆಡ್ಡಿ ಅವರಿಗೆ ಮೊದಲೇ ಅರಿವಿತ್ತು . ಹೀಗಾಗಿ ಇದೇ ಜನವರಿ 11 ರಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ್ದ ರೆಡ್ಡಿ, ನನ್ನ ಆಸ್ತಿಪಾಸ್ತಿಯನ್ನ ಅಧಿಕಾರಿಗಳು ಜಪ್ತಿ ಮಾಡ್ತಾರೆ ಎನ್ನಲಾಗುತ್ತಿದೆ, ಅದಕ್ಕೆಲ್ಲ ನಾನು ಹೆದರಲ್ಲ, ನಾನು ಹೆದರುವವನೂ ಅಲ್ಲ, ಜೈಲಿನಲ್ಲಿ 4X5 ಅಡಿ ಜಾಗದಲ್ಲಿ ಇದ್ದವನು . ಯಾವೂದಕ್ಕೂ ಹೆದರುವುದಿಲ್ಲ. ನನ್ನ ಬಂಧನದ ಸಮಯದಲ್ಲಿ ನನ್ನ ಸುಮಾರು 1,200 ಕೋಟಿ ಆಸ್ತಿ ಜಪ್ತಿ ಮಾಡಿದ್ದರು. ಆದರೆ ಹೈಕೋರ್ಟ್​​ನಲ್ಲಿ ನಾನು ಆ ಪ್ರಕರಣದಲ್ಲಿ ಗೆದ್ದಿದ್ದೆ, ಈಗ ‘ಸುಪ್ರೀಂ’ ಮೆಟ್ಟಿಲೇರಿದ್ದಾರೆ. ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ, ನನ್ನ ಸ್ಪೀಡ್ ಈಗ ಜಾಸ್ತಿಯಾಗಿದೆ. 1,200 ಕೋಟಿ ಇದ್ದ ಆಸ್ತಿ ಈಗ 4,000 ಕೋಟಿಗೆ ಏರಿಕೆಯಾಗಿದೆ. ಹನುಮ ಹುಟ್ಟಿದ ನಾಡಿಗೆ ನಾನು ಬಂದಿದ್ದೇನೆ, ನನಗೆ ಲಕ್ಷ್ಮೀ ಕೃಪೆ ಇದೆ. ಇನ್ಮುಂದೆ ನಾನು ಕಣ್ಣೀರು ಹಾಕಲ್ಲ. ಎಂದು ಹೇಳಿದ್ದರು

ಒಟ್ಟಾರೆಯಾಗಿ ಇದೀಗ ಜನಾರ್ಧನ ರೆಡ್ಡಿ ದಂಪತಿಗೆ ಹೊಸ ಸಂಕಷ್ಟ ಶುರುವಾಗಿದ್ದು ಇದನ್ನ ಯಾವ ರೀತಿಯಲ್ಲಿ ಎಂಎಲ್ಎ ಜನಾರ್ದನ ರೆಡ್ಡಿ ಎದುರಿಸಲಿದ್ದಾರೆ ಅನ್ನೋದನ್ನ ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ

Tags: CBICBI Special CourtCriminal CaseJanardhana ReddyLakshmi Aruna Reddy
Previous Post

ದೇಶದ್ರೋಹ – ರಾಜ್ಯದೊಂದಿಗೆ ಸರ್ಕಾರದ ಅತಾರ್ಕಿಕ ಸಮೀಕರಣ

Next Post

ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದೆ ಮತ್ತೊಂದು ಬೆಲೆ ಏರಿಕೆ ಶಾಕ್​!

Related Posts

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?
ಕರ್ನಾಟಕ

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದ ಆಡಳಿತದ ಬಳಿಕ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ...

Read moreDetails
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದೆ ಮತ್ತೊಂದು ಬೆಲೆ ಏರಿಕೆ ಶಾಕ್​!

ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದೆ ಮತ್ತೊಂದು ಬೆಲೆ ಏರಿಕೆ ಶಾಕ್​!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada